ತುಮಕೂರು: ಜಿಲ್ಲೆಯಲ್ಲಿ 2024–25ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಪ್ರವಾಹ/ಅತಿವೃಷ್ಠಿಯಂತಹ ಪ್ರಕೃತಿ ವಿಕೋಪಗಳಿಂದ ಉಂಟಾದ ಹಾನಿಗೆ ಪರಿಹಾರ ಪಾವತಿಗೆ ಸಂಬಂಧಿಸಿದಂತೆ ಬೆಳೆ ಹಾನಿಯಾದ ರೈತರ ಮಾಹಿತಿ ಪಟ್ಟಿಯನ್ನು ಈಗಾಗಲೇ ಜಿಲ್ಲಾಧಿಕಾರಿ/ ಉಪವಿಭಾಗಾಧಿಕಾರಿ/ ತಹಶೀಲ್ದಾರ್/ಗ್ರಾಮ ಪಂಚಾಯತಿ ಕಚೇರಿ ಹಾಗೂ ರೈತರ ಸಂಪರ್ಕ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ.
ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ ಸಂಬಂಧಿಸಿದ ತಾಲ್ಲೂಕಿನ ತಹಶೀಲ್ದಾರ್/ಕೃಷಿ/ತೋಟಗಾರಿಕೆ ಇಲಾಖೆಗಳ ಕಚೇರಿಗೆ ಸಲ್ಲಿಸಲು 7 ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಶುಭ ಕಲ್ಯಾಣ್ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296