ಜಬಲ್ಪುರ : ಕುಂಭಮೇಳದಿಂದ ಹಿಂತಿರುಗುತ್ತಿದ್ದ ಮಿನಿ ಬಸ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನ ಮೃತಪಟ್ಟಿದ್ದಾರೆ.
ಮಧ್ಯಪ್ರದೇಶದ ಜಬಲ್ಪುರ—ಪ್ರಯಾಗ್ ರಾಜ್ ಮಾರ್ಗದಲ್ಲಿ ಈ ದುರ್ಘಟನೆ ನಡೆದಿದೆ. ಜಬಲ್ಪುರ — ಪ್ರಯಾಗ್ರಾಜ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುತ್ತಿದ್ದ ಮಿನಿ ಬಸ್, ವಿರುದ್ಧ ದಿಕ್ಕಿನಿಂದ ವೇಗವಾಗಿ ಬರುತ್ತಿದ್ದ ಸಿಮೆಂಟ್ ತುಂಬಿದ್ದ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ.
ಘಟನೆಯಲ್ಲಿ 7 ಜನ ಪ್ರಾಣ ಕಳೆದುಕೊಂಡಿದ್ದಾರೆ. ಮೃತಪಟ್ಟವರು ಆಂಧ್ರಪ್ರದೇಶದ ನಿವಾಸಿಗಳಾಗಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4