ಬೆಂಗಳೂರು: ರಾಜ್ಯ ಬಜೆಟ್ ಮಂಡನೆ ವೇಳೆ ಒಳಮೀಸಲಾತಿಗೆ ಆಗ್ರಹಿಸಿ ಸಾರ್ವಜನಿಕರ ಗ್ಯಾಲರಿ ಹಾಗೂ ಸಭಾಧ್ಯಕ್ಷರ ಗ್ಯಾಲರಿಯಲ್ಲಿ ಘೋಷಣೆ ಕೂಗಿದ್ದ ಏಳು ಮಂದಿಯನ್ನು ಬಂಧಿಸಿ, ಪ್ರಕರಣ ದಾಖಲಿಸಲಾಗಿದೆ.
ಹೆಚ್‌ಎಸ್‌ಆರ್ ಲೇಔಟ್ ಎ.ವಿಜಯಕುಮಾರ್, ಎಸ್.ಎಸ್.ವಿಜಯಶೇಖರ್, ಹೊಸಪಾಳ್ಯ ಮುಖ್ಯರಸ್ತೆಯ ಸತ್ಯೇಂದ್ರಕುಮಾರ್, ಜಾಂಬವನಗರದ ಎಂ.ರಾಜರತ್ನಂ ಸರ್ಜಾಪುರದ ಎಸ್.ವಿ.ಸುರೇಶ್, ಚೊಕ್ಕಸಂದ್ರದ ಎನ್.ವೇಣುಗೋಪಾಲ್. ಸರ್ಜಾಪುರ ಅಂಬೇಡ್ಕರ್ ಕಾಲೊನಿಯ ಎಸ್.ವಿ.ಶ್ರೀನಿವಾಸ್ ಬಂಧಿತ ಒಳ ಮೀಸಲಾತಿ ಹೋರಾಟಗಾರರು.
ವಿಧಾನಸಭೆ ದಂಡನಾಯಕ ಹೆಚ್.ಎಸ್.ಜಯಕೃಷ್ಣ ಅವರು ನೀಡಿದ ದೂರಿನ ಮೇರೆಗೆ ವಿಧಾನಸೌಧ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು. ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4