ಹೆಚ್.ಡಿ. ಕೋಟೆ: 7 ವರ್ಷದ ಬಾಲಕಿಗೆ ಶಿಕ್ಷಕಿಯೊಬ್ಬರು ಮನಬಂದಂತೆ ಥಳಿಸಿದ್ದಾರೆ ಎಂದು ಪೋಷಕರು ಆರೋಪಿಸಿದ್ದು, ಕಲಿಕೆಯಲ್ಲಿ ಹಿಂದುಳಿದಿದ್ದಾಳೆ ಎನ್ನುವ ಕಾರಣಕ್ಕೆ ಶಿಕ್ಷಕಿ ಥಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಶಿಕ್ಷಕಿ ರತ್ನಾಕುಮಾರಿ, 2ನೇ ತರಗತಿಯಲ್ಲಿ ಕಲಿಯುತ್ತಿರುವ ನಿಕ್ಷಿತಾ ಎಂಬ ಬಾಲಕಿಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಶಿಕ್ಷಕಿಯ ಹಲ್ಲೆಯ ಹಿನ್ನೆಲೆ ಬಾಲಕಿಯ ಪೋಷಕರು ಹೆಚ್.ಡಿ. ಕೋಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ ಕೊಡಿಸಿದ್ದಾರೆ.
ಇನ್ನೂ ಈ ಬಗ್ಗೆ ಶಿಕ್ಷಕಿಯನ್ನು ಪೋಷಕರು ಪ್ರಶ್ನಿಸಿದಾಗ ಉಡಾಫೆಯಿಂದ ಉತ್ತರಿಸಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.
ಘಟನೆಯ ಮರುದಿನ ಶಾಲೆಗೆ ಭೇಟಿ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಮಾರಯ್ಯ, ನಮ್ಮ ಮೇಲಾಧಿಕಾರಿಗಳಿಗೆ ಈ ಘಟನೆಯ ಬಗ್ಗೆ ಮಾಹಿತಿ ನೀಡುವುದಾಗಿ ಭರವಸೆ ನೀಡಿದ್ದಾರೆ. ಆದರೆ ಶಿಕ್ಷಕಿ ರತ್ನಾಕುಮಾರಿಯನ್ನು ಅಮಾನತು ಗೊಳಿಸುವಂತೆ ಪೋಷಕರು ಪಟ್ಟು ಹಿಡಿದಿದ್ದು, ಶಿಕ್ಷಕಿ ಗ್ರಾಮದಲ್ಲಿ ಜಾತಿ ಭೇದ ಮಾಡುತ್ತಾರೆ, ಸರಿಯಾದ ಸಮಯಕ್ಕೂ ಶಿಕ್ಷಕಿ ಶಾಲೆಗೆ ಬರುತ್ತಿಲ್ಲ ಎಂದ ಪೋಷಕರು ದೂರಿದ್ದಾರೆ.
ವರದಿ: ಮಲಾರ ಮಹದೇವಸ್ವಾಮಿ


