ಶ್ರೀಲಂಕಾ: ಪರೀಕ್ಷೆ ಬರೆಯುವಾಗ ಹಿಜಾಬ್ ಧರಿಸಿ ಬಂದಿದ್ದ 70 ವಿದ್ಯಾರ್ಥಿಗಳ ಫಲಿತಾಂಶವನ್ನು ತಡೆ ಹಿಡಿದಿರುವ ಘಟನೆ ಶ್ರೀಲಂಕಾದಲ್ಲಿ ನಡೆದಿದ್ದು, ಹಿಜಾಬ್ ಧರಿಸದೇ ಪರೀಕ್ಷೆ ಬರೆದವರ ಫಲಿತಾಂಶವನ್ನು ಪ್ರಕಟಿಸಲಾಗಿದೆ.
ಪರೀಕ್ಷೆ ಆರಂಭವಾದಾಗ ಕೆಲ ಷರತ್ತುಗಳನ್ನು ವಿಧಿಸಲಾಗಿತ್ತು. ಅದರಲ್ಲಿ ಹಿಜಾಬ್ ಧರಿಸಬಾರದು ಎನ್ನುವುದು ಒಂದು. ಷರತ್ತುಗಳನ್ನು ಪಾಲಿಸಿ ಪರೀಕ್ಷೆ ಬರೆದವರ ಫಲಿತಾಂಶ ಪ್ರಕಟಿಸಲಾಗಿದೆ.
ವಿಧಿಸಿದ್ದ ಷರತ್ತುಗಳಲ್ಲಿ ಪರೀಕ್ಷೆ ಬರೆಯುವವರು ಪರೀಕ್ಷೆ ಮುಗಿಯುವವರೆಗೆ ಹಿಜಾಬ್ ಧರಿಸಬಾರದು ಎಂದು ತಿಳಿಸಿತ್ತು. ಇದಕ್ಕೆ ಅಲ್ಲಿನ ಪಾರ್ಲಿಮೆಂಟ್ ಕೂಡ ಸಾಥ್ ನೀಡಿದ್ದು, ಇಂತಹ ನಿಯಮ ಜಾರಿಗೆ ಸೈ ಎಂದಿತ್ತು. ಆದರೂ ಈ 70 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಯೇ ಪರೀಕ್ಷೆ ಬರೆದಿದ್ದರು. ಅವರ ಫಲಿತಾಂಶವನ್ನು ಈಗ ತಡೆಹಿಡಿಯಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


