ಬೆಂಗಳೂರು: ಬೆಂಗಳೂರು ನಗರದಲ್ಲಿ ನವೆಂಬರ್ ತಿಂಗಳವರೆಗೆ ಪ್ರತಿದಿನವೆಂಬಂತೆ ಸರಾಸರಿ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಮತ್ತು 11 ಜನರು ಗಾಯಗೊಂಡಿದ್ದಾರೆ. ಈ ಅಪಘಾತಗಳಲ್ಲಿ ಸುಮಾರು ಶೇಕಡಾ 70ರಷ್ಟು ಅಪಘಾತಗಳು ರಾತ್ರಿ ಹೊತ್ತಿನಲ್ಲಿ ಸಂಭವಿಸಿದೆ ಎಂದು ತಜ್ಞರು ಹೇಳಿದ್ದಾರೆ.
ರಾತ್ರಿ ವೇಳೆ ಅಪಘಾತ ಹೆಚ್ಚಾಗಲು ಕಾರಣ ಅತಿಯಾದ ವೇಗ, ರಸ್ತೆ ಸ್ಪಷ್ಟವಾಗಿ ಗೋಚರವಾಗದಿರುವುದು, ಚಾಲನಾ ಕೌಶಲ್ಯದ ಕೊರತೆ ಮತ್ತು ಅಸಮರ್ಪಕ ಮೂಲಸೌಕರ್ಯ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ನವೆಂಬರ್ ಅಂತ್ಯದವರೆಗೆ 780 ಮಾರಣಾಂತಿಕ ಅಪಘಾತಗಳು ವರದಿಯಾಗಿದ್ದು, 802 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೆ, 3,571 ಮಾರಣಾಂತಿಕವಲ್ಲದ ಅಪಘಾತಗಳಲ್ಲಿ 3,685 ಜನರು ಗಾಯಗೊಂಡಿದ್ದಾರೆ.
ಈ ವರ್ಷ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಂಚಾರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಹೆಚ್ಚಿನ ಅಪಘಾತ ಸಂಭವಿಸಿದೆ. 224 ಅಪಘಾತಗಳು ದಾಖಲಾಗಿವೆ. ಇದರ ಪರಿಣಾಮವಾಗಿ 53 ಸಾವುಗಳು ಮತ್ತು 230 ಗಾಯಗಳು ಸಂಭವಿಸಿವೆ ಎಂದು ವರದಿ ತಿಳಿಸಿದೆ. ನಂತರ ಕೆಆರ್ ಪುರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಅತಿ ಹೆಚ್ಚು 222 ಪ್ರಕರಣ ವರದಿಯಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx