ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ, ಸಂಯೋಜಕ ಮನೋರಂಜನ್ ಪ್ರಭಾಕರ್ ನಿಧನರಾಗಿದ್ದಾರೆ. ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಅವರ ಅಂತ್ಯಕ್ರಿಯೆ ಇಂದು ನಡೆಯಲಿದೆ ಎಂದು ಆಪ್ತರು ತಿಳಿಸಿದ್ದಾರೆ. 70ರ ದಶಕದ ಆರಂಭದಲ್ಲಿ ಸಂಗೀತ ಕ್ಷೇತ್ರಕ್ಕೆ ಕಾಲಿಟ್ಟ ಅವರು ಸುಮಾರು 800ಕ್ಕೂ ಹೆಚ್ಚು ಸಂಗೀತ ಆಲ್ಬಂ ಹೊರತಂದಿದ್ದಾರೆ. ‘ಜನ ಮೆಚ್ಚಿದ ಮಗ’, ‘ಕಿಲಾಡಿ ಗಂಡು’, ‘ಅಶೋಕ ಚಕ್ರ’ ಸೇರಿದಂತೆ ಹಲವು ಚಿತ್ರಗಳಿಗೆ ಸಂಗೀತ ನೀಡಿದ್ದರು.
2003 ರಲ್ಲಿ ತಮ್ಮದೇ ಆದ ಶ್ರುತಿಲಯ ಕಲ್ಚರಲ್ ಅಕಾಡೆಮಿ ಪ್ರಾರಂಭ ಮಾಡಿ ಅನೇಕರಿಗೆ ಸಂಗೀತ ಹೇಳಿಕೊಡುತ್ತಿದ್ದರು.
ಇವರು ಕಳೆದ ರಾತ್ರಿ ಅಗಲಿದ್ದಾರೆ.ಚಿತ್ರರಂಗದ ಅನೇಕ ಕಲಾವಿದರು, ಹಾಗೂ ಇವರ ಸಂಗೀತ ವಿದ್ಯಾರ್ಥಿಗಳು ಕಂಬನಿ ಮಿಡಿದ್ದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy