ಬೆಂಗಳೂರು: ರಾಜ್ಯದಲ್ಲಿ ಒಂದೇ ವರ್ಷದಲ್ಲಿ 700 ಬಾಲ್ಯವಿವಾಹಗಳಾಗಿವೆ. ಇದು ನಿಮ್ಮ ಗಮನಕ್ಕೆ ಬಂದಿದೆಯೇ? ನಿಮ್ಮ ಕೆಳಗಿನವರು ನಿಮಗೆ ವರದಿ ಮಾಡುವುದಿಲ್ಲವೇ? ನಿಮಗೆ ದಕ್ಷತೆ ಇಲ್ಲವೇ? ಇದಕ್ಕೆ ಕಡಿವಾಣ ಹಾಕಲು ಕಾನೂನು ಇದ್ದರೂ ಬಳಸದಿರುವುದು ತಪ್ಪಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ. ಸಿಇಒಗಳನ್ನು ಪ್ರಶ್ನಿಸಿದರು.
ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, “ನಿಮ್ಮ ಜಿಲ್ಲೆಗಳಲ್ಲಿ ಬಾಲ್ಯ ವಿವಾಹ ಆಗುವುದು ನಿಮ್ಮ ಗಮನಕ್ಕೆ ಯಾಕೆ ಬರುತ್ತಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.
ಬಾಲ್ಯದಲ್ಲೇ ತಾಯಂದಿರಾದ ಘಟನೆಗಳೂ ವರದಿಗಳಾಗಿವೆ. ಈ ಬಗ್ಗೆ ಹಲವು ಕಡೆ ಎಫ್ ಐಆರ್ ಕೂಡ ದಾಖಲಾಗಿಲ್ಲ ಎನ್ನುವುದು ನನ್ನ ಗಮನಕ್ಕೆ ಬಂದಿದೆ. ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಇಷ್ಟೊಂದು ಬಾಲ್ಯ ವಿವಾಹಗಳು ನಡೆಯುತ್ತಿರುವುದು ಗಂಭೀರ ವಿಷಯವಲ್ಲವೇ ಎಂದು ಪ್ರಶ್ನಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW