ತುಮಕೂರು: ಅರಣ್ಯ ಇಲಾಖೆ ಪ್ರಾದೇಶಿಕ ಅರಣ್ಯ ವಿಭಾಗದ ವತಿಯಿಂದ ಸಹಬಾಳ್ವೆಯೊಂದಿಗೆ ವನ್ಯಜೀವಿ ಸಂರಕ್ಷಣೆ ಎಂಬ ಧ್ಯೇಯದೊಂದಿಗೆ ಅಕ್ಟೋಬರ್ 2 ರಿಂದ 8ರವರೆಗೆ “70ನೇ ವನ್ಯಜೀವಿ ಸಪ್ತಾಹ-2024” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಹೆಚ್.ಅನುಪಮ ತಿಳಿಸಿದ್ದಾರೆ.
ಸಪ್ತಾಹದ ಅಂಗವಾಗಿ ಅಕ್ಟೋಬರ್ 4ರಂದು ಬೆಳಿಗ್ಗೆ 10:30 ಗಂಟೆಗೆ ನಗರದ ಎಂಪ್ರೆಸ್ ಮಹಿಳಾ ಕಾಲೇಜು ಸಭಾಂಗಣದಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರು “70ನೇ ವನ್ಯಜೀವಿ ಸಪ್ತಾಹ-2024” ಕಾರ್ಯಕ್ರಮವನ್ನು ಉದ್ಘಾಟಿಸುವರು.
ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಘನ ಉಪಸ್ಥಿತರಿರುವರು. ಸಹಕಾರ ಸಚಿವ ಕೆ.ಎನ್.ರಾಜಣ್ಣ, ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಶಾಸಕರಾದ ಜಿ.ಬಿ.ಜ್ಯೋತಿಗಣೇಶ್ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು ಸೇರಿದಂತೆ ವಿವಿಧ ಅಧಿಕಾರಿಗಳು ಭಾಗವಹಿಸುವರು ಎಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296