ತಿಪಟೂರು: ತುಮಕೂರು ಜಿಲ್ಲೆ ತಿಪಟೂರು ನಗರದ ಕಲ್ಪತರು ಕ್ರೀಡಾಂಗಣದಲ್ಲಿ ಸರಳ ಹಾಗೂ ಸಂಭ್ರಮದ 73ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಆಚರಿಸಲಾಯಿತು.
ತಿಪಟೂರು ಉಪವಿಭಾಗಾಧಿಕಾರಿ ದಿಗ್ವಿಜಯ್ ಬೋಡ್ಕೆ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಎನ್.ಸಿ.ಸಿ ತುಕ್ಕಡಿಗಳಿಂದ ಧ್ವಜವಂದನೆ ಸ್ವೀಕರಿಸಿ ಮಾತನಾಡಿದ ಅವರು, ದೇಶದ ಸಮಗ್ರ ಅಭಿವೃದ್ದಿ ಹಾಗೂ ಐಕ್ಯತೆಯ ವಿಷಯದಲ್ಲಿ ಪ್ರತಿಯೊಬ್ಬ ಭಾರತೀಯನು ಸ್ವಾಭಿಮಾನ ಬೆಳಸಿಕೊಳ್ಳಬೇಕು. ಭಾರತಕ್ಕೆ ಸ್ವಾತಂತ್ರ್ಯ ಬಂದು 73 ವರ್ಷಗಳು ಕಳೆಯುತ್ತಿದ್ದರೂ ನಮ್ಮ ನಡುವೆಯೇ ಹಲವಾರು ಸಮಸ್ಯೆಗಳನ್ನ ಎದುರಿಸುತ್ತಿದ್ದೇವೆ ಎಂದರು.
ಜಾತಿಯತೆ, ಮಾತಾಂಧತೆ, ಭಯೋತ್ವಾದನೆ, ಬಡತನದಂತೆ ಸಮಸ್ಯೆಗಳನ್ನು ದೇಶ ಎದುರಿಸುತ್ತಿದ್ದು, ಪ್ರತಿಯೊಬ್ಬ ಭಾರತೀಯ ತಮ್ಮ ಹಕ್ಕು ಕರ್ತವ್ಯಗಳ ಜವಾಬ್ದಾರಿ ಅರಿತು ದೇಶಕ್ಕಾಗಿ ಕೆಲಸ ಮಾಡಬೇಕು ಎಂದು ತಿಳಿಸಿದರು
.ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಚಂದ್ರಶೇಖರಯ್ಯ ಅಧ್ಯಕ್ಷತೆ ವಹಿಸಿದರು. ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್, ಡಿವೈಎಸ್ಪಿ ಸಿದ್ದಾರ್ಥ್ ಗೋಯಲ್, ನಗರಸಭಾ ಅಧ್ಯಕ್ಷ ರಾಮ್ ಮೋಹನ್ ಪೌರಾಯುಕ್ತ ಉಮಾಕಾಂತ್, ಬಿಇಒ ಪ್ರಭುಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy