ಸರಗೂರು: ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಪಟ್ಟಣದ ಪ್ರಥಮ ದರ್ಜೆ ಕಾಲೇಜು ಅವರಣದಲ್ಲಿ ಹಮ್ಮಿಕೊಳ್ಳಲಾಯಿತು.
ಪ್ರಥಮ ದರ್ಜೆ ಕಾಲೇಜಿನಿಂದ ಶಾಲೆಯ ಮಕ್ಕಳು ಹೊರಟ ಸರಗೂರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿ ಅದೇ ಮಾರ್ಗವಾಗಿ ಪ್ರಥಮ ದರ್ಜೆ ಕಾಲೇಜು ಅವರಣದಲ್ಲಿ ವಿವಿಧ ಶಾಲೆಯ ಮಕ್ಕಳಿಂದ ಪಥಸಂಚಲನ ನಡೆಸಿದರು ತಹಸೀಲ್ದಾರ್ ಚೆಲುವರಾಜು ಗೌರವಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಾಸಕ ಅನಿಲ್ ಚಿಕ್ಕಮಾದು ತಹಸೀಲ್ದಾರ್ ಚೆಲುವರಾಜು ಪ.ಪಂ. ಅಧ್ಯಕ್ಷೆ ರಾಧಿಕಾ ಶ್ರೀನಾಥ್ , ಉಪಾಧ್ಯಕ್ಷ ವಿನಾಯಕ ಪ್ರಸಾದ್, ಪಪಂ ಸದಸ್ಯರು ಎಸ್ ಎಲ್ ರಾಜಣ್ಣ, ಶ್ರೀನಿವಾಸ್, ಹೇಮಾವತಿ, ರಮೇಶ್, ಸಣ್ಣತಾಯಮ್ಮ, ಶಿವಕುಮಾರ್, ಚೈತ್ರಸ್ವಾಮಿ, ಉಮಾರಾಚಂದ್ರ, ದಿವ್ಯನವೀನ್, ಚಲುವಕೃಷ್ಣ, ನೂರಾಳಸ್ವಾಮಿಇನ್ನೂ ತಾಲ್ಲೂಕಿನ ಅಧಿಕಾರಿಗಳು ಹಾಗೂ ಶಾಲೆಯ ಮಕ್ಕಳು ಶಿಕ್ಷಕರು ಇನ್ನೂ ಹೆಚ್ಚಿನ ರೀತಿಯಲ್ಲಿ ಸಿಬ್ಬಂದಿ ಭಾಗವಹಿಸಿದ್ದರು.
ವರದಿ: ಚಂದ್ರ ಹಾದನೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


