ಮಧುಗಿರಿ: ಮಧುಗಿರಿ ತಾಲೂಕು ಆಡಳಿತದ ವತಿಯಿಂದ ನಡೆದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಕಾರ್ಯಕ್ರಮದಲ್ಲಿ ನಡೆಯಿತು. ತಾಲೂಕು ದಂಡಾಧಿಕಾರಿಗಳಾದ ಸೋಮಪ್ಪ ಕಡಕೋಳ ಧ್ವಜಾರೋಹಣ ನಡೆಸಿ ತಾಲೂಕಿನ ಜನತೆಗೆ ಸ್ವಾತಂತ್ರೋತ್ಸವದ ಶುಭಾಶಯಗಳನ್ನು ಕೋರಿದರು.
ವಿವಿಧ ಶಾಲಾ ಮಕ್ಕಳಿಂದ ಪಥಸಂಚಲನ ಹಾಗೂ ಪೋಲಿಸ್ ಇಲಾಖೆ ವತಿಯಿಂದ ಕವಾಯತು, ಗೃಹರಕ್ಷಕ ದಳದಿಂದಲೂ ಪಥಸಂಚಲನ ನಡೆಯಿತು.
ಮಧುಗಿರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ.ವಿ.ವೀರಭದ್ರಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಪಥ ಸಂಚಲ ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ತಹಶೀಲ್ದಾರರು ವಂದನೆಯನ್ನು ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು, ರಾಜಕೀಯದ ಗಣ್ಯರು, ಶಿಕ್ಷಕರು ಮಕ್ಕಳು ಪಾಲ್ಗೊಂಡಿದ್ದರು.
ವರದಿ: ದೊಡ್ಡೇರಿ ಮಹಾಲಿಂಗಯ್ಯ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz