ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರ ತುಮಕೂರು ಮತ್ತು ಮುಂಜಾನೆ ಬಳಗದ ಸದಸ್ಯರುಗಳು, ಸಿದ್ದರಾಮೇಶ್ವರ ಬಡಾವಣೆ, ತುಮಕೂರು ಇವರುಗಳ ಸಹಯೋಗದೊಂದಿಗೆ 76ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರದ ಆವರಣದಲ್ಲಿ ಆಯೋಜಿಸಲಾಗಿತ್ತು.
ಸಿದ್ದಗಂಗಾ ವಿದ್ಯಾಸಂಸ್ಥೆಯ ನಿವೃತ್ತ ಮುಖ್ಯೋಪಾಧ್ಯಾಯ ಶಿವರುದ್ರಪ್ಪ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ ನಂತರ ಧ್ವಜಾರೋಹಣವನ್ನು ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ಭಾರತದ ಸ್ವಾತಂತ್ರ್ಯಕ್ಕೆ 1947ರವರೆಗೆ ಹಲವು ದಶಕಗಳ ಕಾಲ ನಮ್ಮ ಪೂರ್ವಜರು ಹೋರಾಡಿರುವುದನ್ನು ಈ ಸಂದರ್ಭದಲ್ಲಿ ನಾವು ನೆನಪಿಸಿಕೊಳ್ಳಬೇಕು. ಅಂದು ದೇಶದ ಸ್ವಾತಂತ್ರ್ಯಕ್ಕಾಗಿ ಒಂದಾದ ನಾಯಕರಂತೆ ಇಂದು ನಾವು ನಮ್ಮೆಲ್ಲರ ನಡುವೆ ಇರುವ ಕೋಮುವಾದ, ಭ್ರಷ್ಟಾಚಾರ, ನಮ್ಮ ದೇಶದ ಶಾಂತಿಗೆ ಧಕ್ಕೆ ತರುವ ಯಾವುದೇ ಶಕ್ತಿಗಳ ವಿರುದ್ಧ ಹೋರಾಡಲು ನಾವು ಒಂದಾಗಬೇಕಿದೆ. ಅದಕ್ಕೆ ವಿದ್ಯಾರ್ಥಿಗಳು,ಜನಸಾಮಾನ್ಯರು ಪ್ರಪಂಚದ ಜ್ಞಾನ ಬೆಳೆಸಿಕೊಂಡು, ನಾಯಕತ್ವದ ಗುಣಗಳನ್ನು ರೂಡಿಸಿಕೊಳ್ಳಬೇಕು. ಎಲ್ಲದಕ್ಕಿಂತ ಮುಖ್ಯವಾಗಿ ನಾವುಗಳು ಮೊದಲು ದೇಶ ಪ್ರೇಮವನ್ನು ಹೊಂದಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರಾಮುವಿ ಪ್ರಾದೇಶಿಕ ಕೇಂದ್ರ ಪ್ರಾದೇಶಿಕ ನಿರ್ದೇಶಕರಾದ ಡಾ.ಲೋಕೇಶ್ ಆರ್. ವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಾದೇಶಿಕ ಕೇಂದ್ರ ಸಿಬ್ಬಂದಿ ವರ್ಗ ಮತ್ತು ತುಮಕೂರಿನ ಸಿದ್ದರಾಮೇಶ್ವರ ಬಡಾವಣೆಯ ಮುಂಜಾನೆ ಬಳಗದ ಸದಸ್ಯರುಗಳು ಭಾಗವಹಿಸಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


