ತುಮಕೂರು: ಕರಾಮುವಿ ಪ್ರಾದೇಶಿಕ ಕೇಂದ್ರದ ವತಿಯಿಂದ 76ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಪ್ರಾದೇಶಿಕ ಕೇಂದ್ರದ ಆವರಣದಲ್ಲಿ ನಡೆಯಿತು.
ಪ್ರೊ. ಬಿ.ಪಿ.ಮಲ್ಲಿಕಾರ್ಜುನ ಸ್ವಾಮಿ, ಸಂಯೋಜಕರು, ತಿಪಟೂರು ಸ್ನಾತಕೋತ್ತರ ಕೇಂದ್ರ, ತುಮಕೂರು ವಿಶ್ವವಿದ್ಯಾನಿಲಯ ಮತ್ತು ಒಂಬುಡ್ಸಮನ್, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ರವರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ ನಂತರ ಧ್ವಜಾರೋಹಣವನ್ನು ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ಭಾರತೀಯ ಸಂವಿಧಾನ ಸಭೆಯು 26 ನವೆಂಬರ್ 1949ರಂದು ಅಂಗೀಕರಿಸಿತು ಮತ್ತು 26 ಜನವರಿ 1950ರಂದು ಜಾರಿಗೆ ಬಂದಿತು. ಈ ದಿನವನ್ನು ಗಣರಾಜ್ಯೋತ್ಸವ ದಿನವಾಗಿ ಆಚರಿಸಲಾಗುತ್ತಿದೆ. ಭಾರತವು ಭಾರತೀಯ ಸಂವಿಧಾನ ಅಂಗೀಕಾರದೊಂದಿಗೆ ತನ್ನನ್ನು ಸಾರ್ವಭೌಮ, ಪ್ರಜಾಪ್ರಭುತ್ವ ಮತ್ತು ಗಣರಾಜ್ಯವೆಂದು ಘೋಷಿಸಿತು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತುಮಕೂರು ಕರಾಮುವಿ ಪ್ರಾದೇಶಿಕ ಕೇಂದ್ರ ಪ್ರಾದೇಶಿಕ ನಿರ್ದೇಶಕರಾದ ಡಾ.ಲೋಕೇಶ ಆರ್. ರವರು., ಪ್ರಾದೇಶಿಕ ಕೇಂದ್ರದ ಸಿಬ್ಬಂದಿಗಳು, ತುಮಕೂರಿನ ಟೂಡಾ ಲೇಔಟ್,ರಾಜೀವ್ ಗಾಂಧಿನಗರ, ಹೇಮಾವತಿ ಬಡಾವಣೆಯ “ಹೇಮಾವತಿ ನಾಗರಿಕ ಹಿತರಕ್ಷಣಾ ವೇದಿಕೆ (ರಿ)”ಯ ಅಧ್ಯಕ್ಷರು, ಉಪಾಧ್ಯಕ್ಷರುಗಳು, ಕಾರ್ಯದರ್ಶಿಗಳು, ನಿರ್ದೇಶಕರುಗಳು ಮತ್ತು ಸದಸ್ಯರುಗಳು ಹಾಗೂ ಅರ್ಥಶಾಸ್ತ್ರ ಉಪನ್ಯಾಸಕರಾದ ಡಾ.ಸುರೇಶ್ ಸಿ. ರವರು ಭಾಗವಹಿಸಿದ್ದರು.
ವರದಿ: ನಂದೀಶ್ ನಾಯ್ಕ ಪಿ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx