ರಸ್ತೆ, ಬಂದರು, ವಿಮಾನ ನಿಲ್ದಾಣಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ. ಅಂತರಾಜ್ಯ ರಸ್ತೆಗಳನ್ನು ಖಾಸಗಿ-ಸಾರ್ವಜನಿಕ ಸಹಭಾಗಿತ್ವದಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಿ, ಸಮಗ್ರ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ನುಡಿದರು.
77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದ ಜನತೆಗೆ ಸ್ವಾತಂತ್ರ್ಯೋತ್ಸವ ಶುಭಾಶಯಗಳು. ಅನೇಕ ಮಹನೀಯರು ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿದ್ದಾರೆ ಎಂದು ತಿಳಿಸಿದರು.
ಕೃಷಿ, ತೋಟಗಾರಿಕೆ ಉತ್ತೇಜನಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ನೀಡಲಾಗುವುದು. ಕೌಶಲ್ಯಾಭಿವೃದ್ಧಿ ಯೋಜನೆ ಮೂಲಕ ಯುವಕರಿಗೆ ತರಬೇತಿ ನೀಡಲಾಗುವುದು. ಕೈಗಾರಿಕೆ ಕ್ಷೇತ್ರದಲ್ಲಿ ಮತ್ತಷ್ಟು ಉತ್ತೇಜನ ನೀಡಲಾಗುತ್ತೆ. ಮೈಸೂರು, ಮಂಗಳೂರು, ಧಾರವಾಡ-ಹುಬ್ಬಳ್ಳಿ, ಬಳ್ಳಾರಿ ಮತ್ತು ಕಲಬುರಗಿ ಜಿಲ್ಲೆಯಲ್ಲಿ ಕೈಗಾರಿಗಳ ಸ್ಥಾಪನೆಗೆ ನಿರ್ಧಾರ ಕೈಗೊಳ್ಳಲಾಗಿದೆ.
ಕೈಗಾರಿಕಾ ವಲಯಗಳ ನಡುವೆ ಸಂಪರ್ಕಿಸಲು ರಸ್ತೆ ನಿರ್ಮಾಣ ಮಾಡಲಾಗುವುದು. ಕೈಗಾರಿಕೆಗಳ ಸ್ಥಾಪನೆ ಮೂಲಕ ಉದ್ಯೋಗ ಸೃಷ್ಟಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಿದ್ಧರಾಮಯ್ಯ ಹೇಳಿದರು.
ಭಾರತದ 77ನೇ ಸ್ವಾತಂತ್ರ್ಯೋತ್ಸವದ ಸುಸಂದರ್ಭದಲ್ಲಿ ನಾಡಿನ ಸಮಸ್ತ ಜನತೆಗೆ ನನ್ನ ಹೃತ್ಪೂರ್ವಕ ಶುಭಾಶಯಗಳು.
ಸಾವಿರಾರು ಜನರ ತ್ಯಾಗ, ಬಲಿದಾನಗಳ ಫಲವಾಗಿ ಇಂದು ನಾವು ಸ್ವಾತಂತ್ರ್ಯದ ಸವಿಯುಣ್ಣುತ್ತಿದ್ದೇವೆ. ಪ್ರಾಣದ ಹಂಗು ತೊರೆದು ದಾಸ್ಯದ ಸಂಕೋಲೆಯಿಂದ ದೇಶವನ್ನು ಬಿಡುಗಡೆಗೊಳಿಸಲು ಹೋರಾಡಿದ ಎಲ್ಲ ಮಹಾನ್ ಚೇತನಗಳಿಗೂ ಗೌರವ ಪೂರ್ವಕ ನಮನ ಸಲ್ಲಿಸುತ್ತೇನೆ.
ಸ್ವತಂತ್ರ ಭಾರತದಲ್ಲಿ ಜೀವಿಸುತ್ತಿರುವ ನಮಗೆ ಸ್ವಾತಂತ್ರ್ಯ ಎಂಬುದು ಎಷ್ಟು ದುಬಾರಿಯಾದ ಸಂಗತಿ ಎಂಬುದು ಅರಿವಿಗೆ ಬರಲೇಬೇಕು. ಇಲ್ಲದಿದ್ದರೆ ನಮ್ಮ ಹಿರಿಯರ ತ್ಯಾಗ ಬಲಿದಾನಗಳಿಗೆ ಅರ್ಥವೇ ಇರುವುದಿಲ್ಲ. ಸ್ವಾತಂತ್ರ್ಯ ಎಂಬುದು ಮನುಷ್ಯರ ಜೀವಕ್ಕಿಂತ ಮಿಗಿಲು ಎಂದು ಸ್ವಾತಂತ್ರ್ಯ ಹೋರಾಟಗಾರರು ಭಾವಿಸಿದ್ದರು. ಆದ್ದರಿಂದಲೇ ಎಲ್ಲ ಮಹನೀಯರು ತಮ್ಮ ಸರ್ವಸ್ವವನ್ನೂ ತ್ಯಾಗ ಮಾಡಿ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿದ್ದರು. ಅವರ ತ್ಯಾಗ ಬಲಿದಾನಗಳನ್ನು ದೇಶವು ಶ್ರದ್ಧಾಪೂರ್ವಕವಾಗಿ ಸ್ಮರಿಸಲೇಬೇಕು.
ಶಾಂತಿಯುತ ಸಮಾಜವಿದ್ದರೆ ಮಾತ್ರ ಅಭಿವೃದ್ಧಿ ಸಾಧಿಸಲು ಸಾಧ್ಯ ಎಂದು ನಮ್ಮ ಜನರಿಗೆ ಅರ್ಥವಾಗಿರುವುದರಿಂದ ದುಷ್ಟರ ಆಟಗಳು ಬಹಳ ಕಾಲ ನಡೆಯುವುದಿಲ್ಲ ಎಂಬುದನ್ನು ಕರ್ನಾಟಕದ ಜನರೇ ಸಾಬೀತು ಮಾಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


