ಉಜನಿ ಗ್ರಾಮದಲ್ಲಿರುವ ಪ್ರೇಮಾಂಜಲಿ ಪ್ರೌಢಶಾಲೆಯಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಲಾಯಿತು
ಸ್ವಾತಂತ್ರ್ಯ ದಿನಾಚರಣೆ ಪ್ರತಿಯೊಬ್ಬ ಭಾರತೀಯರಿಗೆ ಹೆಮ್ಮೆಯ ದಿನವಾಗಿದೆ. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಅಸಂಖ್ಯಾತ ಮಹನೀಯರ ತ್ಯಾಗ, ಬಲಿದಾನವನ್ನು ಸ್ಮರಿಸಿಕೊಳ್ಳುವ ದಿನ ಇದಾಗಿದೆ. ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ವಿಷಯವು ‘ವಿಕ್ಷಿತ್ ಭಾರತ,’ ಅಥವಾ ‘ಅಭಿವೃದ್ಧಿ ಹೊಂದಿದ ಭಾರತ’ ಆಗಿದೆ. ವಸಾಹತುಶಾಹಿ ಆಡಳಿತದಿಂದ ವಿಮೋಚನೆ ಪಡೆಯಲು ಸ್ವಾತಂತ್ರ್ಯಕ್ಕಾಗಿ ಹೋರಾಡಿ ಪ್ರಾಣತೆತ್ತ, ಬಲಿದಾನ ಮಾಡಿದ ಎಲ್ಲಾ ವೀರರನ್ನು ನೆನೆದು, ಅವರಿಗೆ ನಮನ ಸಲ್ಲಿಸಲು ಪ್ರತಿ ವರ್ಷ ಕೂಡ ಆಗಸ್ಟ್ 15ರಂದು ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತದೆ. ಈ ದಿನವನ್ನು ರಾಷ್ಟ್ರದ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲು ಎಂದು ಗುರುತಿಸಲಾಗಿದೆ ಎಂದು ಸಂದೇಶ ನೀಡಲಾಯಿತು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯಸ್ಥರಾದ ಸಿಸ್ಟರ್ ಸರಿತಾ, ಸಿದ್ದಪ್ಪ, ಗಣಪತಿ, ರಫೀದ್, ವೆಂಕಟ್ ಪಾಟೀಲ್, ಸರೋಜಿನಿ ಹಾಗೂ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ: ಅರವಿಂದ್ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q