ತುಮಕೂರು: ಜಿಲ್ಲೆ ತಿಪಟೂರು ನಗರದ ಕಲ್ಪತರು ಕ್ರೀಡಾಂಗಣದಲ್ಲಿ 78ನೇ ಸ್ವತಂತ್ರ್ಯ ದಿನಾಚರಣೆಯನ್ನ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.
ತಿಪಟೂರು ಉಪವಿಭಾಗಾಧಿಕಾರಿ ಸಪ್ತಶ್ರೀ ಧ್ವಜಾರೋಹಣ ನೆರವೇರಿಸಿದರು. ಪೊಲೀಸ್ ಪಡೆ. ಗೃಹರಕ್ಷಕದಳ, ಎನ್ ಸಿಸಿ ತಂಡ, ಸ್ಕೌಟ್ಸ್ &ಗೈಡ್ಸ್ ತಂಡಗಳಿಂದ ಪಥಸಂಚಲ ಧ್ವಜ ವಂದನೆ ಸ್ವೀಕರಿಸಿದರು.
ಬಳಿಕ ಮಾತನಾಡಿದ ಅವರು, ಭಾರತ ಸರ್ವಜನಾಂಗದ ಶಾಂತಿಯ ತೋಟ, ಈ ದೇಶದಲ್ಲಿ ಹಲವಾರು ಜಾತಿಧರ್ಮಗಳು ಇದ್ದರೂ, ವಿವಿಧತೆಯಲ್ಲಿ ಏಕತೆಯನ್ನ ಕಾಣುತ್ತೇವೆ. ದೇಶದ ಐಕ್ಯತೆ ಸಾರ್ವಭೌಮವಿಷಯದಲ್ಲಿ ಪ್ರತಿಯೊಬ್ಬ ಭಾರತೀಯನೂ ಒಗ್ಗಟಿನಿಂದ ಇರಬೇಕು ಎಂದರು.
ಅಂಗಾಂಗ ದಾನ ಶ್ರೇಷ್ಟದಾನವಾಗಿದೆ. ನಮ್ಮ ತಾಲ್ಲೂಕಿನ ಚಂದನ ಅಪಘಾತದಲ್ಲಿ ಮರಣಹೊಂದಿದರು ಅಂಗಾಂಗದಾನಮಾಡಿ ಹಲವರ ಬಾಳಿಗೆ ಬೆಳಕಾಗಿದ್ದಾರೆ. ಆಕಸ್ಮಿಕ ಸಾವು ಸಂಭವಿಸಿದಾಗ ಅಂಗಾಂಗಳನ್ನ ಮಣ್ಣುಪಾಲು ಮಾಡುವ ಬದಲು ಹಲವರಿಗೆ ಜೀವದಾನ ಮಾಡಬಹುದು, ಆದರಿಂದ ಅಂಗಾಂಗ ದಾನದ ಅರಿವುಮೂಡಿಸುವ ಅಗತ್ಯವಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಸಕ ಕೆ.ಷಡಕ್ಷರಿ ಮಾತನಾಡಿ, ಭಾರತ ಪುಣ್ಯಭೂಮಿ ಈ ಪವಿತ್ರ ಭೂಮಿಸಲ್ಲಿ ಹುಟ್ಟಿದ ನಾವೇ ಪುಣ್ಯವಂತರು. ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಆಶಯಹೊಂದಿರುವ ನಮ್ಮ ಸಂವಿಧಾನ ನಮ್ಮದೇಶದ ಶ್ರೇಷ್ಠತೆಯನ್ನ ಗೌರವಿಸುವುದು ಪ್ರತಿಭಾರತೀಯನ ಕರ್ತವ್ಯವಾಗಿದೆ. ನಾವೂ ಭಾರತೀಯರು ನಮ್ಮ ದೇಶ ನಮ್ಮ ಹೆಮ್ಮೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಪವನ್ ಕುಮಾರ್, ಡಿವೈಎಸ್ಪಿ ವಿನಾಯಕ ಶೆಟ್ಟಿಗೇರಿ, ಇಒ ಸುದರ್ಶನ್, ಕ್ಷೇತ್ರಶಿಕ್ಷಣಾಧಿಕಾರಿ ಚಂದ್ರಯ್ಯ, ಗ್ರೇಡ್ 2 ತಹಸೀಲ್ದಾರ್ ಜಗನ್ನಾಥ್ ಸೇರಿದಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದರು.ಕಾರ್ಯಕ್ರಮದಲ್ಲಿ ವಿವಿಧ ಶಾಲಾ ಮಕ್ಕಳಿಂದ ದೇಶಭಕ್ತಿಯ ಸಂಸ್ಕೃತಿಕ ಕಾರ್ಯಕ್ರಮಗಳನ್ನ ನಡೆಸಲಾಯಿತು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296