nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್‌ ನಲ್ಲಿ ಸಡಗರದಿಂದ ಜರುಗಿದ 79ನೇ ಕಲ್ಯಾಣ ಕರ್ನಾಟಕ ಉತ್ಸವ: ಧ್ವಜಾರೋಹಣ ನೆರವೇರಿಸಿದ ಸಚಿವ ಈಶ್ವರ ಖಂಡ್ರೆ

    September 17, 2026

    ಕೊರಟಗೆರೆ: ತಾ.ಪಂ. ನೂತನ ಕಟ್ಟಡ ಕಾಮಗಾರಿ ಪರಿಶೀಲಿಸಿದ ಡಾ.ಜಿ.ಪರಮೇಶ್ವರ್

    September 17, 2026

    ಮಧುಗಿರಿ: ಕೃಷಿ ಹೊಂಡ ಫಲಾನುಭವಿಗಳಿಗೆ ಮೀನು ಮರಿಗಳ ವಿತರಣೆ ಹಾಗೂ ‘ಅಕ್ಷರ ಅಮೃತ’ ಯೋಜನೆ ಪರಿಶೀಲನೆ

    September 17, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್‌ ನಲ್ಲಿ ಸಡಗರದಿಂದ ಜರುಗಿದ 79ನೇ ಕಲ್ಯಾಣ ಕರ್ನಾಟಕ ಉತ್ಸವ: ಧ್ವಜಾರೋಹಣ ನೆರವೇರಿಸಿದ ಸಚಿವ ಈಶ್ವರ ಖಂಡ್ರೆ
    • ಕೊರಟಗೆರೆ: ತಾ.ಪಂ. ನೂತನ ಕಟ್ಟಡ ಕಾಮಗಾರಿ ಪರಿಶೀಲಿಸಿದ ಡಾ.ಜಿ.ಪರಮೇಶ್ವರ್
    • ಮಧುಗಿರಿ: ಕೃಷಿ ಹೊಂಡ ಫಲಾನುಭವಿಗಳಿಗೆ ಮೀನು ಮರಿಗಳ ವಿತರಣೆ ಹಾಗೂ ‘ಅಕ್ಷರ ಅಮೃತ’ ಯೋಜನೆ ಪರಿಶೀಲನೆ
    • ನೀವು ನೀಡಿದ ಅಧಿಕಾರ ನಿಮ್ಮ ಅಭಿವೃದ್ಧಿಗೆ ಬಳಕೆ : ಕೆ.ಎನ್.ರಾಜಣ್ಣ
    • ಸಾಲ ಸೌಲಭ್ಯ: ಬೆಸ್ತ ಜನಾಂಗದವರಿಂದ ಅರ್ಜಿ ಆಹ್ವಾನ
    • ನಕ್ಸಲ್ ಹೆಸರಿನಲ್ಲಿ ಭೀತಿ ಹುಟ್ಟಿಸಿದ್ದ ಕಣಿಕಲಬಂಡೆ ವೆಂಕಟೇಶ ಸೆರೆ
    • ಕರ್ನಾಟಕದ ಪೆಟ್ರೋಲ್ ಬಂಕ್‌ ಗಳಲ್ಲಿ ಭಾರೀ ಅಳತೆ ಮೋಸ!
    • ಶಿವಮೊಗ್ಗ: ಬಿಜೆಪಿ ಶಾಸಕನನ್ನು ಎತ್ತಿ ಕುಣಿಸಿದ ಇಬ್ಬರು ಪೊಲೀಸರ ಎತ್ತಂಗಡಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೀದರ್‌ ನಲ್ಲಿ ಸಡಗರದಿಂದ ಜರುಗಿದ 79ನೇ ಕಲ್ಯಾಣ ಕರ್ನಾಟಕ ಉತ್ಸವ: ಧ್ವಜಾರೋಹಣ ನೆರವೇರಿಸಿದ ಸಚಿವ ಈಶ್ವರ ಖಂಡ್ರೆ
    ಜಿಲ್ಲಾ ಸುದ್ದಿ September 17, 2026

    ಬೀದರ್‌ ನಲ್ಲಿ ಸಡಗರದಿಂದ ಜರುಗಿದ 79ನೇ ಕಲ್ಯಾಣ ಕರ್ನಾಟಕ ಉತ್ಸವ: ಧ್ವಜಾರೋಹಣ ನೆರವೇರಿಸಿದ ಸಚಿವ ಈಶ್ವರ ಖಂಡ್ರೆ

    By Ganesh TumkuruSeptember 17, 2026No Comments1 Min Read
    kalyana karnataka

    ಬೀದರ್: 79ನೇ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಬೀದರ್ ನಗರದ ನೆಹರೂ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಅಧಿಕೃತ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು.

    ಧ್ವಜಾರೋಹಣದ ಬಳಿಕ ತೆರೆದ ಜೀಪಿನಲ್ಲಿ ತೆರಳಿದ ಸಚಿವರು ಗೌರವ ವಂದನೆ ಸ್ವೀಕರಿಸಿದರು. ನಂತರ ಪೊಲೀಸ್, ಅರಣ್ಯ ಹಾಗೂ ಅಗ್ನಿಶಾಮಕ ಇಲಾಖೆ ಸೇರಿದಂತೆ ವಿವಿಧ 10 ಆಕರ್ಷಕ ತುಕಡಿಗಳಿಂದ ಅದ್ಧೂರಿ ಪಥಸಂಚಲನ ನಡೆಯಿತು.

    ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಅನೇಕ ಹೋರಾಟಗಾರರ ತ್ಯಾಗ, ಬಲಿದಾನ ಹಾಗೂ ರಜಾಕಾರರು ಮತ್ತು ಹೈದರಾಬಾದ್ ನಿಜಾಮರ ದಬ್ಬಾಳಿಕೆಯಿಂದ 1948 ಸೆಪ್ಟೆಂಬರ್ 17ರಂದು ಈ ಭಾಗಕ್ಕೆ ಸ್ವಾತಂತ್ರ್ಯ ದೊರೆಯಿತು ಎಂದು ಸ್ಮರಿಸಿದರು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೃಷಿ, ವಿಜ್ಞಾನ, ತಂತ್ರಜ್ಞಾನ, ಶಿಕ್ಷಣ, ಆರೋಗ್ಯ ಮತ್ತು ನೀರಾವರಿ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಬೀದರ್ ಜಿಲ್ಲೆಯನ್ನು ಎಲ್ಲ ಕ್ಷೇತ್ರಗಳಲ್ಲೂ ಅಗ್ರಸ್ಥಾನದಲ್ಲಿ ಅಂದರೆ ನಂಬರ್ ಒನ್ ಮಾಡುವ ಸ್ಪಷ್ಟ ಗುರಿ ಹೊಂದಲಾಗಿದೆ ಎಂದರು.

    ಈ ಅದ್ಧೂರಿ ಸಮಾರಂಭದಲ್ಲಿ ಸಂಸದ ಸಾಗರ್ ಖಂಡ್ರೆ, ಶಾಸಕರಾದ ರಹೀಂ ಖಾನ್, ಡಾ. ಶೈಲೇಂದ್ರ ಬೆಲ್ದಾಳೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಸಿಇಒ ಗಿತ್ತೆ ಮಾಧವ ವಿಠಲರಾವ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸುಮೀತಕುಮಾರ್ ಪಾಟೀಲ್, ಎಸ್ಪಿ ಪ್ರದೀಪ್ ಗುಂಟಿ, ಬೀದರ್ ಸಹಾಯಕ ಆಯುಕ್ತ ಅಭಿನವ್ ಜೈನ್, ಬುಡಾ ಅಧ್ಯಕ್ಷ ವಿನೋದ್ ಅಪ್ಪೆ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

    ವರದಿ: ಅರವಿಂದ ಮಲ್ಲೀಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಶಿವಮೊಗ್ಗ: ಬಿಜೆಪಿ ಶಾಸಕನನ್ನು ಎತ್ತಿ ಕುಣಿಸಿದ ಇಬ್ಬರು ಪೊಲೀಸರ ಎತ್ತಂಗಡಿ!

    September 16, 2026

    ಬೀದರ್: ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಗಣೇಶ ಪ್ರತಿಷ್ಠಾಪನೆ, ವಿಶೇಷ ಪೂಜೆ

    September 15, 2026

    ಬೀದರ್: ಮಳೆಯಿಲ್ಲದೆ ಒಣಗಿದ ಬೆಳೆ; ಟ್ರ್ಯಾಕ್ಟರ್‌ ಹರಿಸಿ ಸೋಯಾಬೀನ್‌ ನಾಶಪಡಿಸಿದ ರೈತ!

    September 15, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್‌ ನಲ್ಲಿ ಸಡಗರದಿಂದ ಜರುಗಿದ 79ನೇ ಕಲ್ಯಾಣ ಕರ್ನಾಟಕ ಉತ್ಸವ: ಧ್ವಜಾರೋಹಣ ನೆರವೇರಿಸಿದ ಸಚಿವ ಈಶ್ವರ ಖಂಡ್ರೆ

    September 17, 2026

    ಬೀದರ್: 79ನೇ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಬೀದರ್ ನಗರದ ನೆಹರೂ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಅಧಿಕೃತ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು…

    ಕೊರಟಗೆರೆ: ತಾ.ಪಂ. ನೂತನ ಕಟ್ಟಡ ಕಾಮಗಾರಿ ಪರಿಶೀಲಿಸಿದ ಡಾ.ಜಿ.ಪರಮೇಶ್ವರ್

    September 17, 2026

    ಮಧುಗಿರಿ: ಕೃಷಿ ಹೊಂಡ ಫಲಾನುಭವಿಗಳಿಗೆ ಮೀನು ಮರಿಗಳ ವಿತರಣೆ ಹಾಗೂ ‘ಅಕ್ಷರ ಅಮೃತ’ ಯೋಜನೆ ಪರಿಶೀಲನೆ

    September 17, 2026

    ನೀವು ನೀಡಿದ ಅಧಿಕಾರ ನಿಮ್ಮ ಅಭಿವೃದ್ಧಿಗೆ ಬಳಕೆ : ಕೆ.ಎನ್.ರಾಜಣ್ಣ

    September 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.