ನಿರ್ಮಾಣ ಹಂತದಲ್ಲಿರುವ ಆಲ್ ಇಂಡಿಯಾ ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್)ನ 7ನೇ ಮಹಡಿಯಿಂದ ಬಿದ್ದು ವೈದ್ಯರೊಬ್ಬರು ಮೃತಟ್ಟಿರುವ ಘಟನೆ ಅಸ್ಸಾಂನ ಮ್ರೂಪ್ ಜಿಲ್ಲೆಯಲ್ಲಿ ನಡೆದಿದೆ.
ಫಲ್ಗು ಪ್ರತಿಮ್ ದಾಸ್ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ವೈದ್ಯ. ಕಟ್ಟಡ ಕಾಮಗಾರಿಯಲ್ಲಿ ನಿರತರಾಗಿದ್ದ ಕಾರ್ಮಿಕರಿ ಭಾರೀ ಸದ್ದು ಕೇಳಿ ಬಂದಿದೆ. ಕೂಡಲೇ ಸ್ಥಳಕ್ಕೆ ಹೋಗಿ ನೊಡಲಾಗಿ ವೈದ್ಯರು ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ.
ಕೂಡಲೇ ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ. ವೈದ್ಯರು ಕಟ್ಟಡದ ಏಳನೇ ಮಹಡಿಯಿಂದ ಸ್ವತಃ ಬಿದ್ದಿದ್ದಾರೆಯೇ, ಆತ್ಮಹತ್ಯೆಯೇ ಅಥವಾ ಅಪಘಾತವೋ ಸದ್ಯಕ್ಕೆ ತಿಳಿದುಬಂದಿಲ್ಲ. ತನಿಖೆಯ ಸ್ಪಷ್ಟವಾಗಲಿದೆ ಎಂದು ಪೊಲೀಸ್ ತಿಳಿಸಿದ್ದಾರೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz