ಬೆಂಗಳೂರು: ಸರ್ಕಾರಿ ನೌಕರಿಗೆ 7ನೇ ವೇತನ ಆಯೋಗ ರಚನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅನುಮೋದನೆ ನೀಡಿದ್ದಾರೆ.
ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ಸುಧಾಕರ ರಾವ್ ಅಧ್ಯಕ್ಷತೆಯಲ್ಲಿ ಮೂವರು ಸದಸ್ಯರನ್ನೊಳಗೊಂಡ 7ನೇ ವೇತನ ಆಯೋಗ ರಚನೆಗೆ ಮುಖ್ಯಮಂತ್ರಿಗಳು ಅನುಮೋದನೆ ನೀಡಿದ್ದಾರೆ.
ಆಯೋಗದಲ್ಲಿ ಸದಸ್ಯರಾಗಿ ನಿವೃತ್ತ ಐಎಎಸ್ ಅಧಿಕಾರಿ ಪಿ.ಬಿ. ರಾಮಮೂರ್ತಿ, ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ನಿವೃತ್ತ ಪ್ರಧಾನ ನಿರ್ದೇಶಕ ಶ್ರೀಕಾಂತ್ ಬಿ. ವನಹಳ್ಳಿ ಹಾಗೂ ರಾಜ್ಯ ಮೂಲ ಸೌಕರ್ಯ ಇಲಾಖೆಯ ಜಂಟಿ ಕಾರ್ಯದರ್ಶಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರನ್ನು ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಈ ಮೂಲಕ 7 ನೇ ವೇತನ ಆಯೋಗ ರಚನೆಗೆ ಮುಖ್ಯಮಂತ್ರಿಗಳು ಅನುಮೋದನೆ ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


