ದೇಶದಲ್ಲಿ ಬಿಸಿಲಿನ ತಾಪ ಅಧಿಕವಾಗಿದ್ದು ಜನರು ಹೆಚ್ಚಿನ ಪ್ರಮಾಣದಲ್ಲಿ ವಿದ್ಯುತ್ ಉಪಕರಣಗಳನ್ನು ಉಪಯೋಗಿಸುತ್ತಾರೆ. ಇದರ ನಡುವೆ ಕಲ್ಲಿದ್ದಲು ಕೊರತೆ ಉಂಟಾಗಿದ್ದು, ಸುಮಾರು 8 ಗಂಟೆ ವಿದ್ಯುತ್ ಪೂರೈಕೆ ಕಡಿತ ಆಗುವ ಭೀತಿ ಎದುರಾಗಿದೆ.
ಬೇಸಿಗೆ ಹಿನ್ನೆಲೆಯಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಾಗುತ್ತಿದೆ. ಇದನ್ನು ಪರಿಹರಿಸಲು ಸರಕಾರಗಳು ಹರಸಾಹಸ ಪಡುವಂತಾಗಿದೆ.ಉತ್ತರ ಪ್ರದೇಶ, ಪಂಜಾಬ್, ಆಂಧ್ರಪ್ರದೇಶ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಕಲ್ಲಿದ್ದಲು ಕೊರತೆ ಕಂಡುಬಂದಿದೆ.ಕಲ್ಲಿದ್ದಲು ಕೊರತೆ ಹೆಚ್ಚಾದರೆ ರಾಜ್ಯಗಳಲ್ಲಿ 8 ಗಂಟೆಗಳ ವಿದ್ಯುತ್ ಕಡಿತ ಮಾಡುವುದು ಅನಿವಾರ್ಯವಾಗಿದೆ.
ಅಖಿಲ ಭಾರತ ವಿದ್ಯುತ್ ಇಂಜಿನಿಯರ್ ಗಳ ಸಂಘಟನೆ ಅಧ್ಯಕ್ಷ ಶೈಲೇಂದ್ರ ದುಬೆ ಈ ವಿಷಯವನ್ನು ಒಪ್ಪಿಕೊಂಡಿದ್ದು, ದೇಶದಲ್ಲಿ ವಿದ್ಯುತ್ ಪೂರೈಕೆ ಸಮಸ್ಯೆ ಎದುರಾಗಿದೆ ಎಂದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy