ಕೊಪ್ಪಳ: ಖಾಲಿ ಉಳಿದಿರುವ 8,000 ಪೊಲೀಸ್ ಕಾನ್ ಸ್ಟೆಬಲ್ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಕೊಪ್ಪಳದ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಹಿಂದಿನ ಸರ್ಕಾರ ಅವಧಿಯಲ್ಲಿ ಯಾವುದೇ ನೇಮಕಾತಿಗಳೂ ನಡೆದಿಲ್ಲ. ನಮ್ಮ ಸರ್ಕಾರ ಎಲ್ಲವನ್ನೂ ಸರಿಪಡಿಸಿದ್ದು, ಶೀಘ್ರದಲ್ಲೇ 8 ಸಾವಿರ ಕಾನ್ ಸ್ಟೆಬಲ್ ಗಳು, 500 ಸಬ್–ಇನ್ಸ್ ಪೆಕ್ಟರ್ ಗಳನ್ನು ನೇಮಕ ಮಾಡಲಾಗುತ್ತದೆ ಎಂದು ಹೇಳಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಬಗ್ಗೆ ಯಾವುದೇ ಮಾಹಿತಿ ತನಗೆ ತಿಳಿದಿಲ್ಲ ಎಂದು ಹೇಳಿದರು.
ಕರ್ನಾಟಕ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್. ಪಾಟೀಲ್ ಒಳಗೊಂಡ ಆಡಿಯೋ ಕ್ಲಿಪ್ ಕುರಿತ ವಿಚಾರ ಕುರಿತ ಪ್ರಶ್ನೆಗೆ ಉತ್ತರಿಸಿ, ‘ಅವರು ಮಾಡಿರುವುದು ಗಂಭೀರ ಆರೋಪ ಅಲ್ಲ. ಸಂಬಂಧಿಸಿದ ಸಚಿವರ ಜೊತೆ ಮಾತನಾಡುವಂತೆ ಅವರಿಗೆ ಹೇಳಿದ್ದೇನೆ. ಪೊಲೀಸರಿಗೆ ದೂರು ನೀಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
————————————