ತುಮಕೂರು: ಜಿಲ್ಲಾ ಪೊಲೀಸ್ ಕಛೇರಿಯ ಮುಂಭಾಗದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಶ್ರದ್ಧೆ ಮತ್ತು ಗೌರವಗಳೊಂದಿಗೆ ಆಚರಿಸಲಾಯಿತು.


ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜವನ್ನು ಆರೋಹಣ ಮಾಡುವ ಮೂಲಕ ಸ್ವಾತಂತ್ರ್ಯ ದಿನೋತ್ಸವದ ಸಂಭ್ರಮಕ್ಕೆ ಚಾಲನೆ ನೀಡಲಾಯಿತು. ಧ್ವಜಾರೋಹಣದ ನಂತರ ಸಮಾವೇಶಗೊಂಡಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ರಾಷ್ಟ್ರಧ್ವಜಕ್ಕೆ ಗೌರವ ವಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕರು, ಡಿಎಆರ್ (DAR) ಪೊಲೀಸ್ ಅಧಿಕಾರಿಗಳು, ನಗರ ಪೊಲೀಸ್ ಘಟಕದ ಅಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ಕಛೇರಿಯ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಲಿಪಿಕ ಸಿಬ್ಬಂದಿಗಳು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
