ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಪ್ರಕರಣದ ತನಿಖೆ ಮುಂದುವರಿಸಿರುವ ಬೈಯಪ್ಪನಹಳ್ಳಿ ಠಾಣೆ ಪೊಲೀಸರು, ಮೈಸೂರಿನ ವೈದ್ಯ ಡಾ. ಚಂದನ್ ಬಲ್ಲಾಳ್ ಹಾಗೂ ಲ್ಯಾಬ್ ಟೆಕ್ನಿಷಿಯನ್ ನಿಸಾರ್ ಅವರನ್ನು ಬಂಧಿಸಿದ್ದಾರೆ.
ಮೈಸೂರಿನ ಮಾತಾ ಆಸ್ಪತ್ರೆ ಹಾಗೂ ಅಲ್ಲಿನ ರಾಜ್ ಕುಮಾರ್ ರಸ್ತೆಯಲ್ಲಿರುವ ಆಯುರ್ವೇದಿಕ್ ಪೈಲ್ ಡೇ ಕೇರ್ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ಡಾ. ಚಂದನ್, ಇದುವರೆಗೂ 900 ಗರ್ಭಪಾತ ಮಾಡಿಸಿ, ಹೆಣ್ಣು ಭ್ರೂಣ ಹತ್ಯೆ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.


