nammatumakuru
    Facebook Twitter Instagram
    ಟ್ರೆಂಡಿಂಗ್
    • ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌
    • ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
    • ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
    • ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
    • ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
    • ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
    • ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
    • ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್‌ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    ಕೊರಟಗೆರೆ June 8, 2026

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ

    By adminJune 8, 2026No Comments2 Mins Read
    dharmastala

    ಕೊರಟಗೆರೆ: ತಾಲ್ಲೂಕಿನ ಹುಲಿಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಟೆಗಾನಹಳ್ಳಿ ಗ್ರಾಮದ ಕೆರೆ ಸಂಪೂರ್ಣ ಹಾಳಾಗಿದ್ದ ಹಿನ್ನೆಲೆಯಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆರೆಯನ್ನು ಗ್ರಾಮಸ್ಥರಿಂದ ಹಸ್ತಾಂತರ ಪಡೆದು ಪುನಶ್ಚೇತನಗೊಳಿಸಿ, ಬಳಿಕ ಗ್ರಾಮಸ್ಥರಿಗೆ ಮರಳಿ ಹಸ್ತಾಂತರಿಸಲಾಯಿತು.

    ಸುಮಾರು 12 ಲಕ್ಷ ರೂ. ವೆಚ್ಚದಲ್ಲಿ ಹಾಗೂ ಸ್ಥಳೀಯ ರೈತರ ಸಹಕಾರದೊಂದಿಗೆ 10 ಎಕರೆಗೂ ಅಧಿಕ ವಿಸ್ತೀರ್ಣದ ಕೆರೆಯನ್ನು ಸ್ವಚ್ಛಗೊಳಿಸಿ ಅಭಿವೃದ್ಧಿ ಪಡಿಸಲಾಗಿದ್ದು, ಯೋಜನೆಯ ವತಿಯಿಂದ ಇದುವರೆಗೆ ಪುನರುಜ್ಜೀವನಗೊಳಿಸಲಾದ 963ನೇ ಕೆರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

    ಕೆರೆ ಹಸ್ತಾಂತರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಾಜಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುರಳಿಧರ ಹಾಲಪ್ಪ ಅವರು ಕೆರೆಗೆ ಪೂಜೆ ಸಲ್ಲಿಸಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, “ಈ ಕೆರೆ ಸ್ಥಳೀಯ ರೈತರು, ಸಾರ್ವಜನಿಕರು ಹಾಗೂ ಜಾನುವಾರುಗಳಿಗೆ ನೀರಿನ ಮೂಲವಾಗಿ ಉಪಯೋಗವಾಗಲಿದ್ದು, ಗ್ರಾಮೀಣ ಪ್ರದೇಶದ ಜಲ ಸಂರಕ್ಷಣೆಗೆ ಇಂತಹ ಯೋಜನೆಗಳು ಅತ್ಯಂತ ಅಗತ್ಯ” ಎಂದು ಹೇಳಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧಿಕಾರಿ ಅನಿತಾ , “ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಹೇಮಾವತಿ ಅಮ್ಮ ಅವರ ಆಶೀರ್ವಾದದಿಂದ ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಯೋಜನೆ ಮೂಲಕ ಜಾರಿಗೊಳಿಸಲಾಗುತ್ತಿದೆ. ಅಂಗವಿಕಲರಿಗೆ ನೆರವು, ವೃದ್ಧಾಪ್ಯ ವೇತನ, ದೇವಾಲಯಗಳ ಅಭಿವೃದ್ಧಿ, ಹಾಲು ಉತ್ಪಾದಕರಿಗೆ ಸಹಾಯಧನ, ಆರೋಗ್ಯ ಶಿಬಿರಗಳು, ರುದ್ರಭೂಮಿ ಅಭಿವೃದ್ಧಿ, ಶುದ್ಧ ಕುಡಿಯುವ ನೀರಿನ ಘಟಕಗಳು, ವಾತ್ಸಲ್ಯ ಯೋಜನೆಯಡಿ ನಿರ್ಗತಿಕರಿಗೆ ಮನೆ ನಿರ್ಮಾಣ ಹಾಗೂ ಮಹಿಳಾ ಸಬಲೀಕರಣಕ್ಕಾಗಿ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ” ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ಗಂಗಣ್ಣ, ಹನುಮಣ್ಣ, ರಾಹುಲ್, ಎಲ್. ರಾಜಣ್ಣ, ಮಮತಾ, ಜಗದೀಶ್, ಪವಿತ್ರ, ವೆಂಕಟಾಚಲಪತಿ, ರಾಜೇಶ್ವರಿ, ಮಹೇಂದ್ರ, ಮನು, ಶ್ರೀನಿವಾಸ್, ಕಿರಣ್, ಅನುಸೂಯಮ್ಮ, ಸುಶೀಲಮ್ಮ ಸೇರಿದಂತೆ ಗ್ರಾಮಸ್ಥರು ಹಾಗೂ ಸಂಸ್ಥೆಯ ಸಿಬ್ಬಂದಿ ಭಾಗವಹಿಸಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಾಜಿ ಸಚಿವ ಸಿ. ವೀರಣ್ಣ ಇನ್ನಿಲ್ಲ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ | ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರಿಂದ ಸಂತಾಪ

    July 25, 2026

    ಗ್ರಾಮೀಣ ಪ್ರತಿಭೆಯ ವೈದ್ಯಕೀಯ ಕನಸು ನನಸು: ನೀಟ್ ನಲ್ಲಿ ಕೊರಟಗೆರೆಯ ಸುಭಾಷ್ ಗೆ ಭರ್ಜರಿ ಸಾಧನೆ!

    July 25, 2026

    ಕೊರಟಗೆರೆ: ಮತದಾರರ ಗಣಕೀಯ ನಮೂನೆ ತಲುಪಿಸುವಲ್ಲಿ 100% ಸಾಧನೆ; ಶೇ.82.25 ರಷ್ಟು ಡಿಜಿಟಲ್ ಸೇರ್ಪಡೆ ಪೂರ್ಣ

    July 25, 2026

    Leave A Reply Cancel Reply

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.