nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026

    ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

    March 9, 2026
    Facebook Twitter Instagram
    ಟ್ರೆಂಡಿಂಗ್
    • ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
    • ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
    • ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ
    • ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ
    • ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ
    • ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!
    • ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!
    • RSS ನಿಷೇಧ ವಿಚಾರ ಅನಗತ್ಯ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ
    ಜಿಲ್ಲಾ ಸುದ್ದಿ February 21, 2026

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    By adminFebruary 21, 2026No Comments2 Mins Read
    ballari

    ಬಳ್ಳಾರಿ:  ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶೇ.99 ರಷ್ಟು ಕಠಿಣ ಪರಿಶ್ರಮ, ಕೇವಲ ಶೇ.01 ರಷ್ಟು ಅದೃಷ್ಟದಿಂದ ಮಾತ್ರ ಏನನ್ನಾದರೂ ಸಾಧಿಸಲು ಸಾಧ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಧೀಶರಾದ ರಾಜೇಶ್ ಎನ್. ಹೊಸಮನೆ ಅವರು ಹೇಳಿದರು.

    ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಪಂ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಬಳ್ಳಾರಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ನಿಲಯಾರ್ಥಿಗಳಿಗೆ ಶನಿವಾರ ಹಮ್ಮಿಕೊಂಡಿದ್ದ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವೃತ್ತಿ ಮಾರ್ಗದರ್ಶನ ಕುರಿತು ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.


    Provided by
    Provided by

    ಸ್ಪರ್ಧಾತ್ಮಕ ಯುಗದಲ್ಲಿ ಶಾರೀರಿಕ, ಮಾನಸಿಕವಾಗಿ ಸದೃಢರಾಗುವ ಮೂಲಕ ಸತತ ಪರಿಶ್ರಮದಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಧೈರ್ಯದಿಂದ ಎದುರಿಸಬೇಕು ಎಂದು ತಿಳಿಸಿದರು.

    ವಿದ್ಯಾರ್ಥಿ ಜೀವನದಲ್ಲಿ ಸಮಯ ಅಮೂಲ್ಯವಾಗಿದ್ದು, ಶಾಲಾ–ಕಾಲೇಜು ಮುಗಿದ ನಂತರವೇ ನಿಜವಾದ ಜೀವನ ಆರಂಭಗೊಳ್ಳುತ್ತದೆ. ಸಾಧಕರ ಜೀವನ ಶೈಲಿಗಳ ಮೂಲಕ ಪ್ರೇರಿತರಾಗಿ, ಸಿಗುವ ಅವಕಾಶಗಳನ್ನು ಬಳಸಿಕೊಂಡು ಸಾಧಕರಾಗಬೇಕು ಎಂದು ಕಿವಿಮಾತು ಹೇಳಿದರು.

    ನಿಲಯ ವಿದ್ಯಾರ್ಥಿಗಳಿಗೆ ಸಾಕಷ್ಟು ಸಮಯಾವಕಾಶ ಸಿಗಲಿದೆ. ಪಠ್ಯದ ಜೊತೆಗೆ ಸರ್ಕಾರಿ ಹುದ್ದೆಗಳ ನಿರ್ದಿಷ್ಟ ಪಠ್ಯಕ್ರಮಗಳ ಅಧ್ಯಯನ, ಗುಂಪು ಚರ್ಚೆ ಹಾಗೂ ಇತರೆ ಅಧ್ಯಯನ ನಡೆಸಬೇಕು ಎಂದರು.

    ಪದವಿ ನಂತರ ಸಾಕಷ್ಟು ಅವಕಾಶದ ಬಾಗಿಲು ತೆರೆಯುತ್ತವೆ. ಒಳ್ಳೆಯದ್ದನ್ನೇ ಆಯ್ಕೆ ಮಾಡಿಕೊಂಡು ಅವಕಾಶ ಉಪಯೋಗಿಸಿಕೊಳ್ಳಬೇಕು. ಕೇವಲ ಹಣ ಮಾಡಲು ಸರ್ಕಾರಿ ಹುದ್ದೆ ಪಡೆಯಬಾರದು ಸಾಮಾಜಿಕ ಸೇವೆ, ದೇಶಕ್ಕೆ ಕೊಡುಗೆ ನೀಡಬೇಕೆಂಬ ಪ್ರಾಮಾಣಿಕತೆ, ಸ್ಥಿರತೆ ಹೊಂದಬೇಕು ಎಂದರು.

    ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಶಿಕಾಂತ್ ಶಿವಪುರೆ ಅವರು ಮಾತನಾಡಿ, ಜೀವನವೇ ಒಂದು ಸ್ಪರ್ಧೆ. ಆ ಸ್ಪರ್ಧೆಯಲ್ಲಿ ನಾವೆಲ್ಲಾ ಸ್ಪರ್ಧಾ ಆಕಾಂಕ್ಷಿಗಳು. ಜೀವನದಲ್ಲಿ ನಾವು ಏನಾಗಬೇಕು ಎಂಬುದನ್ನು ನಮ್ಮ ಸಾಮರ್ಥ್ಯದ ಮೂಲಕ ದೃಢ ನಿರ್ಧಾರದೊಂದಿಗೆ ಶ್ರದ್ಧೆಯಿಂದ ಅಭ್ಯಾಸ ಮಾಡಿದಾಗ ಮಾತ್ರ ಏನಾದರೂ ಸಾಧನೆ ಮಾಡಲು ಸಾಧ್ಯ ಎಂದು ಹೇಳಿದರು.

    ವಿದ್ಯಾರ್ಥಿ ಜೀವನದಲ್ಲಿ ಕಠಿಣ ಪರಿಶ್ರಮದ ಮೂಲಕ ಕಷ್ಟದ ದಿನಗಳನ್ನು ಎದುರಿಸಿದಾಗ ಮಾತ್ರ ಮುಂದೆ ಒಳ್ಳೆಯ ಸುಖದ ದಿನಗಳನ್ನು ಪಡೆಯಲು ಸಾಧ್ಯವಾಗಲಿದೆ ಎಂದು ತಿಳಿಸಿದರು.

    ಶ್ರೀ ಮೇಧಾ ಡಿಗ್ರಿ ಕಾಲೇಜಿನ ಬಿಸಿಎ ವಿಭಾಗದ ಮುಖ್ಯಸ್ಥ ಹಾಗೂ ಜೆಸಿಐ ಇಂಡಿಯಾದ ರಾಷ್ಟ್ರೀಯ ತರಬೇತುದಾರ, ಮಕ್ಕಳ ಸಲಹೆಗಾರ ಜೆ.ಸಿ.ಮಂಜುನಾಥ ಬಳ್ಳೂಳ್ಳಿ, ಬಳ್ಳಾರಿಯ ಭೀಮರಾವ್ ಐ.ಎ.ಎಸ್ ಮತ್ತು ಕೆ.ಎ.ಎಸ್ ಸ್ಟಡಿ ಸರ್ಕಲ್ ನ ನಿರ್ದೇಶಕ ಶೇಖರಪ್ಪ ಮತ್ತು ಸಂಡೂರು ಎಸ್.ಇ.ಎಸ್ ಶಿಕ್ಷಣ ಸಂಸ್ಥೆಯ ಡಾ.ಜಗದೀಶ್ ಬಸಾಪುರ ಅವರು ಸ್ಪರ್ಧಾತ್ಮಕ ಪರೀಕ್ಷೆ ಕುರಿತು ವಿಶೇಷ ಉಪನ್ಯಾಸ ನೀಡಿದರು.

    ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ವಿನೋದ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಲಾಲಪ್ಪ ಎ.ಕೆ ಸೇರಿದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ- ಸಿಬ್ಬಂದಿ, ನಿಲಯ ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ

    March 9, 2026

    ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!

    March 9, 2026

    ದೇವರ ಕಾರ್ಯದ ಜೊತೆಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಹೆಚ್ಚು ಒತ್ತು ನೀಡಬೇಕು: ಶಾಸಕ ಅನಿಲ್ ಚಿಕ್ಕಮಾದು

    March 8, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಚಿಕ್ಕನಾಯಕನಹಳ್ಳಿ: ತನ್ನ ಕುಟುಂಬದ ಪ್ರತಿಯೊಬ್ಬ ಸದಸ್ಯರ ಏಳಿಗೆಗಾಗಿ ಶ್ರಮಿಸಿ, ಅವರನ್ನು ಯಶಸ್ಸಿನ ಹಾದಿಯಲ್ಲಿ ಮುನ್ನಡೆಸುವುದೇ ಒಬ್ಬ ಮಹಿಳೆಯ ಜೀವನದ ದೊಡ್ಡ…

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026

    ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

    March 9, 2026

    ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ

    March 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.