nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026

    ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!

    August 17, 2026

    ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ

    August 17, 2026
    Facebook Twitter Instagram
    ಟ್ರೆಂಡಿಂಗ್
    • ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!
    • ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!
    • ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ
    • ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ
    • ಆರ್ ಎಸ್ ಎಸ್ ಜಾತಿವಾದ, ಕೋಮುವಾದದ ‘ಸಾವಿರ ತಲೆಯ ವಿಷಪೂರಿತ ಹಾವು’: ಸಚಿವ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ
    • ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ
    • ಜೈಲಿನಲ್ಲೇ ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ‘ಸ್ಪೆಷಲ್ ಕ್ಲಾಸ್’!
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾರ್ವತಮ್ಮ ಮತ್ತು ಪುನೀತ್ ರಾಜ್‍ ಕುಮಾರ್ ಸ್ಮರಣಾರ್ಥ 2 ಚಿನ್ನದ ಪದಕ ಘೋಷಣೆ
    ರಾಜ್ಯ ಸುದ್ದಿ March 22, 2022

    ಪಾರ್ವತಮ್ಮ ಮತ್ತು ಪುನೀತ್ ರಾಜ್‍ ಕುಮಾರ್ ಸ್ಮರಣಾರ್ಥ 2 ಚಿನ್ನದ ಪದಕ ಘೋಷಣೆ

    ಮೈಸೂರು ವಿವಿ 102ನೇ ಘಟಿಕೋತ್ಸವದಲ್ಲಿ ನಟ ಪುನೀತ್ ರಾಜ್‍ಕುಮಾರ್ ಗೆ ಮರಣೋತ್ತರ ಗೌರವ ಡಾಕ್ಟರೇಟ್ ‘ಅಪ್ಪು’ ಪತ್ನಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಗೌರವ ಡಾಕ್ಟರೇಟ್ ಪ್ರಶಸ್ತಿ ಸ್ವೀಕರಿಸಿದರು.
    By adminMarch 22, 2022No Comments2 Mins Read
    puneeth rajkumar

    ಮೈಸೂರು: ಡಾ. ಪುನೀತ್ ರಾಜ್‍ ಕುಮಾರ್ (Puneeth Rajkumar)..‌. ಈ ಹೆಸರು ಪ್ರತಿಯೊಬ್ಬರ ಉಸಿರು. ‘ಅಪ್ಪು’ ಮಾಡಿದ ಸಾಧನೆಗೆ ಇದೀಗ ಡಾಕ್ಟರೇಟ್‌ ನೀಡಿ ಗೌರವಿಸಲಾಗಿದೆ. ಈ ಮೂಲಕ ‘ಕರುನಾಡ ರತ್ನ’ವನ್ನು ಮತ್ತೊಮ್ಮೆ ನೆನೆಯಲಾಗಿದೆ.

    ಮೈಸೂರು ವಿವಿ 102ನೇ ಘಟಿಕೋತ್ಸವ(102nd Convocation of University of Mysore)ದಲ್ಲಿ ನಟ ಪುನೀತ್ ರಾಜ್‍ ಕುಮಾರ್ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ‘ಅಪ್ಪು’ ಪತ್ನಿ ಅಶ್ವಿನಿಯವರು ಗೌರವ ಡಾಕ್ಟರೇಟ್ ಪ್ರಶಸ್ತಿ ಸ್ವೀಕರಿಸಿದರು.

    ಮೈಸೂರು ವಿವಿಯಿಂದ ಪುನೀತ್ ರಾಜ್‍ಕುಮಾರ್ ಗೆ ಮರಣೋತ್ತರ ಗೌರವ ಡಾಕ್ಟರೇಟ್(Doctorate) ಪದವಿ ಪ್ರದಾನ ವೇಳೆ ಇಡೀ ಡಾ.ರಾಜ್ ಕುಮಾರ್ ಕುಟುಂಬವೇ ಹಾಜರಿತ್ತು. ಈ ವೇಳೆ ಪ್ರತಿಯೊಬ್ಬರೂ ಭಾವುಕರಾಗಿ ಅಗಲಿದ ‘ಕರುನಾಡ ರತ್ನ’ವನ್ನು ನೆನೆದರು. ಗಣ್ಯರ ಸಾಲಿನಲ್ಲಿ ಕುಳಿತುಕೊಂಡಿದ್ದ ಪುನೀತ್ ರಾಜ್‍ ಕುಮಾರ್ ಸಹೋದರಿಯರು, ‘ಅಪ್ಪು’ ಪರವಾಗಿ ಅವರ ಪತ್ನಿ ಅಶ್ವಿನಿ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ ಮಾಡುವಾಗ ಕಣ್ಣಲ್ಲಿ ನೀರು ತುಂಬಿಕೊಂಡಿದ್ದರು.

    ಈ ವಿಶೇಷ ಸಂದರ್ಭದಲ್ಲಿ ವರನಟ ಡಾ.ರಾಜ್ ಕುಮಾರ್ ಕುಟುಂಬದಿಂದ 2 ಚಿನ್ನದ ಪದಕ(Gold Medals)ಘೋಷಣೆ ಮಾಡಲಾಯಿತು. ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರಿಂದ ಎರಡು ಬಂಗಾರದ ಪದಕ ಘೋಷಣೆ ಮಾಡಿದ್ದು, ಬಿಸಿನೆಸ್ ಮ್ಯಾನೆಜ್‌ ಮೆಂಟ್‌ ಮತ್ತು ಲಲಿತಾಕಲಾ ವಿಭಾಗಕ್ಕೆ 1 ಚಿನ್ನದ ಪದಕ ಘೋಷಣೆಯಾಗಿದೆ. ಪಾರ್ವತಮ್ಮ ರಾಜ್‍ಕುಮಾರ್ ಹೆಸರಿನಲ್ಲಿ ಬಿಸಿನೆಸ್‌ ಮ್ಯಾನೆಜ್‌ ಮೆಂಟ್‌ ವಿಭಾಗಕ್ಕೆ ಚಿನ್ನದ ಪದಕ ಮತ್ತು ಪುನೀತ್ ರಾಜ್‍ ಕುಮಾರ್ ಹೆಸರಿನಲ್ಲಿ ಲಲಿತಾಕಲಾ ವಿಭಾಗಕ್ಕೆ ಚಿನ್ನದ ಪದಕ ನೀಡಲಾಗಿದ್ದು, 2 ಚಿನ್ನದ ಪದಕವನ್ನು ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರೇ ವಿತರಿಸಲಿದ್ದಾರೆ.

    ಇನ್ನು ಮೈಸೂರು ವಿವಿ ಘಟಿಕೋತ್ಸವ(Mysore University Convocation)ದಲ್ಲಿ ನಟ ರಾಘವೇಂದ್ರ ರಾಜ್‍ಕುಮಾರ್ ಮಾತನಾಡಿ, ‘ಜೀವನ ಒಂದು ಚಕ್ರ ಇದ್ದಂತೆ. ನಮ್ಮ ತಂದೆಗೂ ಇದೇ ವಿವಿಯಲ್ಲಿ ಗೌರವ ಡಾಕ್ಟರೇಟ್ ಕೊಟ್ಟಿದ್ರು. ಇಂದು ನನ್ನ ತಮ್ಮನಿಗೂ ಇದೇ ವಿವಿಯಲ್ಲಿ ಗೌರವ ಡಾಕ್ಟರೇಟ್ ಸಿಕ್ಕಿದೆ. ನನಗೆ ಇದು ವೇದಿಕೆ ರೀತಿ ಕಾಣಿಸುತ್ತಿಲ್ಲ, ಸರಸ್ವತಿಯ ಮಂದಿರ ತರ ಕಾಣ್ತಿದೆ. ನಿಮ್ಮ ಕೆಲಸವನ್ನು ಶ್ರದ್ಧೆಯಿಂದ ಮಾಡಿದ್ರೆ ಪ್ರಶಸ್ತಿಗಳು ಹುಡುಕಿ ಬರುತ್ತವೇ ಎಂದು ಪುನೀತ್ ಯಾವಾಗಲೂ ಹೇಳ್ತಿದ್ದ. ಹೂವಿನಿಂದ ನಾರು ಸ್ವರ್ಗ ಸೇರಿದಂತೆ ನನ್ನ ತಮ್ಮನಿಂದ ನಾನು ಸ್ವರ್ಗ ನೋಡುತ್ತಿದ್ದೇನೆ. ಈ ಗೌರವ ಡಾಕ್ಟರೇಟ್‌ ನಮ್ಮ ಕುಟುಂಬದ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಅಶ್ವಿನಿ ಮಾರ್ಗದರ್ಶನದಲ್ಲಿ ನಾವೆಲ್ಲರೂ ಸಾಮಾಜಿಕ ಸೇವೆ ಮುಂದುವರೆಸುತ್ತೇವೆ’ ಎಂದು ಹೇಳಿದರು.ಕರುನಾಡಿನ ‘ಅಪ್ಪು’ ಇನ್ಮುಂದೆ ಡಾ.ಪುನೀತ್‌ ರಾಜ್‍ಕುಮಾರ್(Dr Puneeth Rajkumar). ನಮ್ಮ ನಿಮ್ಮೆಲ್ಲರ ಪ್ರೀತಿಯ ‘ಅಪ್ಪು’ಗೆ ಡಾಕ್ಷರೇಟ್‌ ಗೌರವ ಸಿಕ್ಕಿರೋದು ಅಭಿಮಾನಿಗಳಿಗೆ ಸಂತಸ ಕೊಟ್ಟಿದೆ.

    ವರದಿ: ಆಂಟೋನಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026

    ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!

    August 17, 2026

    ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ

    August 17, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026

    ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟ ಪ್ರಕರಣಕ್ಕೆ…

    ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!

    August 17, 2026

    ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ

    August 17, 2026

    ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ

    August 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.