ತಿಪಟೂರು: ಹೊನ್ನವಳ್ಳಿ ವೃತ್ತದ ಮತ್ತಿಹಳ್ಳಿ ಗ್ರಾಮಪಂಚಾಯಿತಿಯಲ್ಲಿ ಘನ ತ್ಯಾಜ್ಯ ವಿಲೇವಾರಿಯನ್ನು ಸ್ತ್ರೀ ಶಕ್ತಿ ಗುಂಪಿನ ಸದಸ್ಯರುಗಳು ನಿರ್ವಹಣೆ ಮಾಡಿದರು.
ಶ್ರೀ ಬಸವೇಶ್ವರ ಸಂಜೀವಿನಿ ಸ್ತ್ರೀಶಕ್ತಿ ಗುಂಪಿನ ಪ್ರತಿನಿಧಿಯಾದ ಲತಾ ಜಿ.ಎಸ್. ಇವರು ಘನ ತ್ಯಾಜ್ಯ ಸಂಗ್ರಹಣ ವಾಹನದ ಚಾಲಕರಾಗಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಗೌರವ ಹೆಚ್ಚಿಸಿದ್ದಾರೆ.
ಘನತ್ಯಾಜ್ಯ ವಿಲೇವಾರಿ ಘಟಕದ ನಿರ್ವಹಣೆಯನ್ನು ಶ್ರೀಬಸವೇಶ್ವರ ಸಂಜೀವಿನಿ ಸ್ತ್ರೀ ಶಕ್ತಿ ಸಂಘದ ಸದಸ್ಯರಾದ ಮನುಜ, ಶ್ರೀ ತುಳಸಿ ಸ್ತ್ರೀಶಕ್ತಿ ಸಂಘದ ಸದಸ್ಯರಾದ ನಾಗರತ್ನ, ಶ್ರೀ ಬಿದಿರಾಂಬಿಕ ಸ್ತ್ರೀಶಕ್ತಿ ಸಂಘದ ಸದಸ್ಯರಾದ ರೇಣುಕಾ ಇವರುಗಳು ಅತ್ಯುತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಮಹಿಳೆಯರು ಯಾವ ಕೆಲಸಕ್ಕೂ ಸೈ ಎನಿಸಿಕೊಂಡಿದ್ದಾರೆ.
ವರದಿ: ಆನಂದ್ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5