nammatumakuru

    Subscribe to Updates

    Get the latest creative news from FooBar about art, design and business.

    What's Hot

    CEC ಜ್ಞಾನೇಶ್ ಕುಮಾರ್‌ರನ್ನು ತಕ್ಷಣ ವಜಾಗೊಳಿಸಿ, ಕ್ರಿಮಿನಲ್ ಕೇಸ್ ದಾಖಲಿಸಿ: ರಾಷ್ಟ್ರಪತಿಗೆ ಸಿದ್ದರಾಮಯ್ಯ ಆಗ್ರಹ

    September 26, 2026

    ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಆರೋಪ: ಬಿಜೆಪಿ ಶಾಸಕ ಮುನಿರತ್ನಗೆ ಯುವಕನಿಂದ ತರಾಟೆ!

    September 26, 2026

    ವಿರಾಜಪೇಟೆ ಗಣೇಶ ವಿಸರ್ಜನೆ ವೇಳೆ ಕರೆಂಟ್ ಶಾಕ್: ಐವರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ; ತಪ್ಪಿದ ದೊಡ್ಡ ಅನಾಹುತ!

    September 26, 2026
    Facebook Twitter Instagram
    ಟ್ರೆಂಡಿಂಗ್
    • CEC ಜ್ಞಾನೇಶ್ ಕುಮಾರ್‌ರನ್ನು ತಕ್ಷಣ ವಜಾಗೊಳಿಸಿ, ಕ್ರಿಮಿನಲ್ ಕೇಸ್ ದಾಖಲಿಸಿ: ರಾಷ್ಟ್ರಪತಿಗೆ ಸಿದ್ದರಾಮಯ್ಯ ಆಗ್ರಹ
    • ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಆರೋಪ: ಬಿಜೆಪಿ ಶಾಸಕ ಮುನಿರತ್ನಗೆ ಯುವಕನಿಂದ ತರಾಟೆ!
    • ವಿರಾಜಪೇಟೆ ಗಣೇಶ ವಿಸರ್ಜನೆ ವೇಳೆ ಕರೆಂಟ್ ಶಾಕ್: ಐವರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ; ತಪ್ಪಿದ ದೊಡ್ಡ ಅನಾಹುತ!
    • ಕಚೇರಿಗೆ ತಡವಾಗಿ ಬಂದ ಅಧಿಕಾರಿಗಳಿಗೆ ಗೇಟ್ ಬಂದ್: ಜಿಪಂ ಸಿಇಒ ದಿಢೀರ್ ಭೇಟಿ, ಒಂದು ದಿನದ ಸಂಬಳ ಕಟ್ ಎಚ್ಚರಿಕೆ!
    • ಕೊರಟಗೆರೆ: ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಒತ್ತು– ಸರ್ವಜನ ಶ್ರಮಜೀವಿ ಸೇವಾ ಟ್ರಸ್ಟ್ ಉದ್ಘಾಟನೆ
    • ಮಾವತ್ತೂರು ಸೊಸೈಟಿ ಸರ್ವ ಸದಸ್ಯರ ಸಭೆ ರಣರಂಗ: ಕಾರ್ಯದರ್ಶಿ ವಿರುದ್ಧ ಗಂಭೀರ ಆರೋಪ, ಅರ್ಧದಲ್ಲೇ ಸಭೆ ಮುಂದೂಡಿಕೆ!
    • ದಸರಾ ಕ್ರೀಡಾಕೂಟ: ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ ನಲ್ಲಿ ಪಾವಗಡದ ಚನ್ನಕೇಶವಪುರ ತಂಡಕ್ಕೆ ದ್ವಿತೀಯ ಸ್ಥಾನ
    • ಬುಡುಬುಡಿ ವೇಷಧಾರಿ ಕಳ್ಳರ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭೂಮಿ, ವಸತಿಗಾಗಿ ಆಹೋರಾತ್ರಿ ಧರಣಿ: ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ
    ತುಮಕೂರು March 26, 2022

    ಭೂಮಿ, ವಸತಿಗಾಗಿ ಆಹೋರಾತ್ರಿ ಧರಣಿ: ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ

    By adminMarch 26, 2022No Comments2 Mins Read
    protest

    ತುಮಕೂರು: ಭೂಮಿ ಮತ್ತು ವಸತಿ ಹೋರಾಟ ಸಮಿತಿ ಮತ್ತು ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ತುಮಕೂರು ಜಿಲ್ಲಾ ಘಟಕ ಹಂದ್ರಾಳ್ ನಾಗಭೂಷಣ್ ಅವರ ನೇತೃತ್ವದಲ್ಲಿ ಭೂಮಿ ವಸತಿಗಾಗಿ ಅಹೋರಾತ್ರಿ ಧರಣಿಯನ್ನು ಮಾರ್ಚ್ 21 ರಿಂದ ಸತತವಾಗಿ ನಡೆಸಿಕೊಂಡು ಬರುತ್ತಿದ್ದು, ಧರಣಿ  ನಡೆಯುವ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭೇಟಿಯಾಗಿ ನನೆಗುದಿಗೆ ಬಿದ್ದಿರುವ ಭೂಮಿ ಮತ್ತು ವಸತಿ ಕಡತಗಳ ಪರಿಶೀಲನೆ ನಡೆಸಿ ಆಡಳಿತಾತ್ಮಕವಾಗಿ ಆಗಬೇಕಾದ ಎಲ್ಲಾ ಬೇಡಿಕೆಗಳನ್ನು ಅತಿ ಶೀಘ್ರದಲ್ಲಿ ಜಿಲ್ಲಾಡಳಿತವು ಮಾಡಿ ಕೊಡುವುದಾಗಿ ಜಿಲ್ಲಾಧಿಕಾರಿಗಳು ಭರವಸೆ ನೀಡಿ ಧರಣಿ ವಾಪಸ್ ಪಡೆಯುವಂತೆ ಮನವಿ ಮಾಡಿದರು.

    ಇದಕ್ಕೆ ಒಪ್ಪದ ಮುಖಂಡರಾದ  ಹಂದ್ರಾಳ್ ನಾಗಭೂಷಣ್ ಅವರು, ಈ ಹಿಂದೆ ಜಿಲ್ಲಾಧಿಕಾರಿಗಳು ನೀಡಿರುವ ಭೂಮಿಗೆ ಹಕ್ಕು ಪತ್ರ ನೀಡಲು  ಆದೇಶದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದ, ಈ ಹಿಂದಿನ ಬ್ಯಾಲ್ಯ ಗ್ರಾಮ ಪಂಚಾಯ್ತಿಯ ಪಿಡಿಓ ಸಂತೋಷ್ ಸಿಂಗ್, ಹಾಲಿ ಪಿಡಿಓ ಮುದ್ದುರಾಜ್ ರವರನ್ನು ಕೂಡಲೇ ಅಮಾನತು ಗೊಳಿಸಬೇಕು. ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಹಣ ದುರುಪಯೋಗಪಡಿಸಿಕೊಂಡಿರುವ, ಸರ್ಕಾರಕ್ಕೆ ಮೋಸ ವಂಚನೆ ಮಾಡಿರುವ ಇದೇ ಬ್ಯಾಲ್ಯ ಗ್ರಾಮ ಪಂಚಾಯತ್ ಬಿಲ್ ಕಲೆಕ್ಟರ್ ನಾಗರಾಜು, ಲಕ್ಷ್ಮೀನಾರಾಯಣಪ್ಪ ಇವರನ್ನು ಸೇವೆಯಿಂದ ವಜಾ  ಮಾಡಬೇಕು. ಅಟ್ರಾಸಿಟಿ ಆರೋಪ ಹೊತ್ತಿರುವ ಚಿ.ನಾ.ಹಳ್ಳಿ ತಹಸೀಲ್ದಾರ್ ಅವರನ್ನು ಅಮಾನತು ಗೊಳಿಸಬೇಕು. ಹೆಬ್ಬೂರು ಪೊಲೀಸ್ ಠಾಣಾ ಜಾಗವನ್ನು ಪೊಲೀಸ್ ಇಲಾಖೆಗೆ ಇ-ಸ್ವತ್ತು ಮಾಡಿಸಿ ಕೊಡುವವರೆಗೂ ಮತ್ತು ಇತರೆ ಆಡಳಿತಾತ್ಮಕ ಬೇಡಿಕೆಗಳನ್ನು ಸ್ಥಳದಲ್ಲೇ ಬಗೆ ಹರಿಸುವವರೆಗೂ  ಧರಣಿಯನ್ನು ಮುಂದುವರಿಸುವುದಾಗಿ ತಿಳಿಸಿದರು.

    ಹಿರಿಯ ಸಾಮಾಜಿಕ ಹೋರಾಟಗಾರ ಹೆಚ್.ಎಂ.ವೆಂಕಟೇಶ್ ಮಾತನಾಡಿ, ಸ್ವಾತಂತ್ರ ಬಂದು 75 ವರ್ಷಗಳು ಕಳೆದರೂ ಕೂಡ ಇಂದಿಗೂ ದೀನ ದುರ್ಬಲರು ತಮ್ಮ ಮೂಲಭೂತ ಹಕ್ಕಿಗಾಗಿ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಧರಣಿ ನಡೆಸುತ್ತಿರುವುದು ಆಡಳಿತದ ವೈಫಲ್ಯಕ್ಕೆ ಕಾರಣವಾಗಿದೆ. ಇಂತಹ ಧರಣಿಗಳು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದುರದೃಷ್ಟಕರ ಎಂದು ಹೇಳಿದರು.

    ಹಂದ್ರಾಳ್ ನಾಗಭೂಷಣ್  ಮಾತನಾಡಿ, ಸ್ಥಳದಲ್ಲೇ ಸಮಸ್ಯೆಗಳು ಬಗೆಹರಿಯುವವರೆಗೂ ನಿರಂತರ ಆಹೋರಾತ್ರಿ ಧರಣಿಯನ್ನು ಮುಂದುವರಿಸುತ್ತೇವೆ. ಧರಣಿ ನಿರತರ ಆರೋಗ್ಯದ ಮೇಲೆ ದುಷ್ಪರಿಣಾಮವಾದಲ್ಲಿ ಅದಕ್ಕೆ ಜಿಲ್ಲಾಡಳಿತವೇ ನೇರ ಹೊಣೆಯಾಗುತ್ತದೆ ಎಂದು ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ.

    ಧರಣಿಯಲ್ಲಿ ಮಾಜಿ ಶಾಸಕರಾದ ಬಸವರಾಜ್, ಆಮ್ ಆದ್ಮಿ ಪಕ್ಷದ ಮುಖಂಡರಾದ ಡಾ:ವಿಶ್ವನಾಥ್, ಪ್ರಭುಸ್ವಾಮಿ, ಮಾರುತಿ,ನಾಗೇಶ್, ಸಮಿತಿಯ ರಾಜ್ಯ ಸಂಚಾಲಕ ಕುಮಾರ್ ಸಮತಳ, ಭದ್ರೇ ಗೌಡ, ಮಂಜುನಾಥ್, ಯತಿರಾಜ್, ಕುಮಾರಿ ಗಂಗಾರಾಣಿ ಹಾಗೂ ನೊಂದ ಫಲಾನುಭವಿಗಳು ಭಾಗವಹಿಸಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    protest
    admin
    • Website

    Related Posts

    ಮೈಸೂರು ದಸರಾ: ಅ.11 ರಿಂದ ಕನ್ನಡ ಪುಸ್ತಕ ಮಾರಾಟ ಮೇಳ: ಮಾರಾಟಗಾರರಿಗೆ ಆಹ್ವಾನ

    September 25, 2026

    ತುಮಕೂರು: ಗಣೇಶ ವಿಸರ್ಜನೆ ವೇಳೆ ಸಿಂಹಾದ್ರಿ ಹತ್ಯೆ – ಸಂತ್ರಸ್ತ ಕುಟುಂಬಕ್ಕೆ ಸಿಪಿಐ(ಎಂ), ಸಿಐಟಿಯು ಹಾಗೂ ಪಿಯುಸಿಎಲ್ ನಿಯೋಗದಿಂದ ಸಾಂತ್ವನ

    September 25, 2026

    ದಲಿತ ಯುವಕ ಸಿಂಹಾದ್ರಿ ಹತ್ಯೆ: ಆರೋಪಿಗಳ ಬಂಧನಕ್ಕೆ  ವಿವಿಧ ಸಂಘಟನೆಗಳಿಂದ ಮನವಿ

    September 24, 2026

    Leave A Reply Cancel Reply

    Our Picks

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    CEC ಜ್ಞಾನೇಶ್ ಕುಮಾರ್‌ರನ್ನು ತಕ್ಷಣ ವಜಾಗೊಳಿಸಿ, ಕ್ರಿಮಿನಲ್ ಕೇಸ್ ದಾಖಲಿಸಿ: ರಾಷ್ಟ್ರಪತಿಗೆ ಸಿದ್ದರಾಮಯ್ಯ ಆಗ್ರಹ

    September 26, 2026

    ಬೆಂಗಳೂರು: ಭಾರತೀಯ ಚುನಾವಣಾ ಆಯೋಗದ (ECI) ಕಾರ್ಯವೈಖರಿ ಮತ್ತು ಸ್ವಾಯತ್ತತೆಯ ಕುರಿತು ಗಂಭೀರ ಕಳವಳ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ,…

    ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಆರೋಪ: ಬಿಜೆಪಿ ಶಾಸಕ ಮುನಿರತ್ನಗೆ ಯುವಕನಿಂದ ತರಾಟೆ!

    September 26, 2026

    ವಿರಾಜಪೇಟೆ ಗಣೇಶ ವಿಸರ್ಜನೆ ವೇಳೆ ಕರೆಂಟ್ ಶಾಕ್: ಐವರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ; ತಪ್ಪಿದ ದೊಡ್ಡ ಅನಾಹುತ!

    September 26, 2026

    ಕಚೇರಿಗೆ ತಡವಾಗಿ ಬಂದ ಅಧಿಕಾರಿಗಳಿಗೆ ಗೇಟ್ ಬಂದ್: ಜಿಪಂ ಸಿಇಒ ದಿಢೀರ್ ಭೇಟಿ, ಒಂದು ದಿನದ ಸಂಬಳ ಕಟ್ ಎಚ್ಚರಿಕೆ!

    September 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.