nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ಕೊನೆಗೂ ಜಯಲಕ್ಷ್ಮೀಪುರ ಗ್ರಾಮಕ್ಕೆ ಬಂತು ಸರ್ಕಾರಿ ಬಸ್: ಗ್ರಾಮಸ್ಥರಿಂದ ಹರ್ಷ

    November 5, 2025

    ಪ.ಜಾತಿ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳ ಆಧಾರ್ ಇ–ದೃಢೀಕರಣ ಕಡ್ಡಾಯ: ವಿ.ಕೆ.ಬಡಿಗೇರ

    November 5, 2025

    ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ಸ್ಪರ್ಧಾ ಕಾರ್ಯಕ್ರಮ ಮುಂದೂಡಿಕೆ

    November 5, 2025
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ಕೊನೆಗೂ ಜಯಲಕ್ಷ್ಮೀಪುರ ಗ್ರಾಮಕ್ಕೆ ಬಂತು ಸರ್ಕಾರಿ ಬಸ್: ಗ್ರಾಮಸ್ಥರಿಂದ ಹರ್ಷ
    • ಪ.ಜಾತಿ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳ ಆಧಾರ್ ಇ–ದೃಢೀಕರಣ ಕಡ್ಡಾಯ: ವಿ.ಕೆ.ಬಡಿಗೇರ
    • ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ಸ್ಪರ್ಧಾ ಕಾರ್ಯಕ್ರಮ ಮುಂದೂಡಿಕೆ
    • ನ.10: ಶ್ರೀ ಗುರುಸಂಗಮೇಶ್ವರಸ್ವಾಮಿ ಅವರ ಲಕ್ಷದೀಪೋತ್ಸವ ಆಚರಣೆ
    • ವಿದ್ಯಾರ್ಥಿ ವೇತನ: ಬಯೋಮೆಟ್ರಿಕ್ ಇ–ದೃಢೀಕರಣ ಕಡ್ಡಾಯ
    • ನವೆಂಬರ್ 7: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ತುಮಕೂರು ಜಿಲ್ಲಾ ಪ್ರವಾಸ
    • ತುಮಕೂರು | SSLC ಫಲಿತಾಂಶ ಸೇರಿದಂತೆ ಕೆಡಿಪಿ ಸಭೆಯಲ್ಲಿ ಪ್ರತಿಧ್ವನಿಸಿತು ಜಿಲ್ಲೆಯ ಹಲವು ಸಮಸ್ಯೆಗಳು!
    • ಜಮೀನಿನ ಖಾತೆ ಬದಲಾವಣೆಗೆ ಲಂಚಕ್ಕೆ ಬೇಡಿಕೆ: ಗ್ರಾಮ ಆಡಳಿತಾಧಿಕಾರಿ ಮಂಜುನಾಥ ಲೋಕಾಯುಕ್ತ ಬಲೆಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಾಕತ್ತಿದ್ದರೆ ಮುಸ್ಲಿಂ ರಾಷ್ಟ್ರಗಳ ಜೊತೆಗಿನ ವ್ಯಾಪಾರ ನಿಲ್ಲಿಸಿ : ಪ್ರಿಯಾಂಕ್ ಖರ್ಗೆ ಸವಾಲ್
    ರಾಜ್ಯ ಸುದ್ದಿ March 26, 2022

    ತಾಕತ್ತಿದ್ದರೆ ಮುಸ್ಲಿಂ ರಾಷ್ಟ್ರಗಳ ಜೊತೆಗಿನ ವ್ಯಾಪಾರ ನಿಲ್ಲಿಸಿ : ಪ್ರಿಯಾಂಕ್ ಖರ್ಗೆ ಸವಾಲ್

    By adminMarch 26, 2022No Comments4 Mins Read
    priyank kharge

    ರಾಜ್ಯದಲ್ಲಿ ಕೋಮು ಆಧಾರಿತ ವ್ಯಾಪಾರ ವಹಿವಾಟುಗಳಿಗೆ ಕಡಿವಾಣ ಹಾಕುತ್ತಿರುವವರು ತಾಕತ್ತಿದ್ದರೆ ಮೇಲ್ಮಟ್ಟದಲ್ಲಿ ಮುಸ್ಲಿಂ ರಾಷ್ಟ್ರಗಳ ಜೊತೆಗಿನ ವ್ಯಾಪಾರ ವಹಿವಾಟನ್ನು ನಿಲ್ಲಿಸಲಿ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ.

    ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಪ್ರದೇಶದವರು ಕರ್ನಾಟಕದಂತಾಗ ಬೇಕು ಎಂದು ಕೊಳ್ಳುತ್ತಿದ್ದಾರೆ. ಆದರೆ ಇವರು ಉತ್ತರ ಪ್ರದೇಶದ ಮಾದರಿ ಮಾಡಲು ಹೊರಟಿದ್ದಾರೆ. ಅಲ್ಲಿ ಅಭಿವೃದ್ಧಿಯಾಗಿದ್ದರೆ ಉತ್ತರ ಪ್ರದೇಶದವರು ಇಲ್ಲಿ ಬಂದು ಯಾಕೆ ಕೆಲಸ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.


    Provided by
    Provided by

    ರಾಜ್ಯಕ್ಕೆ ಎರಡು ವರ್ಷದಿಂದ ಬಂಡವಾಳ ಹರಿದು ಬರುತ್ತಿಲ್ಲ. ಹಿಜಾಬ್, ಹಿಂದೂ-ಮುಸ್ಲೀಂ, ಭಗವದ್ಗೀತೆ ಹೆಸರಿನಲ್ಲಿ ಸೌಹಾರ್ದತೆ ಕದಡಿದ್ದಾರೆ. ಹೀಗಾಗಿ ಬಂಡವಾಳ ಹೂಡಿಕೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ದೇಶದಲ್ಲಿ 8.5 ಲಕ್ಷ ಜನ ಭಾರತದಲ್ಲಿ ಒಳ್ಳೆಯ ವಾತಾವರಣ ಇಲ್ಲ ಎಂದು ನಮ್ಮ ದೇಶದ ನಾಗರಿಕತೆಯನ್ನೇ ತೊರೆದಿದ್ದಾರೆ.

    ದೇಶ ಬಿಟ್ಟು ಬೇರೆ ದೇಶಗಳಿಗೆ ಹೋಗಿದ್ದಾರೆ. ಇವರು ಜಾತಿ, ಧರ್ಮದ ರಾಜಕಾರಣ ಮಾಡುತ್ತಿದ್ದಾರೆ. ಹಸಿವಿಗೆ ಯಾವ ಜಾತಿ, ಧರ್ಮ ಇದೆ ಎಂದು ಪ್ರಶ್ನಿಸಿದರು.ಇವರು ಕೆಳ ಹಂತದಲ್ಲಿ ಧರ್ಮಾಧಾರಿತ ವ್ಯಾಪಾರಗಳಿಗೆ ಕಡಿವಾಣ ಹಾಕುತ್ತಾರೆ. ತಾಕತ್ತಿದ್ದರೆ ಮೇಲ್ಮಟ್ಟದಲ್ಲೂ ನಿರ್ಬಂಧ ಜಾರಿ ಮಾಡಲಿ. ಇಸ್ಲಾಂ ರಾಷ್ಟ್ರಗಳ ಜೊತೆ ವ್ಯಾಪಾರ ಮಾಡುವುದಿಲ್ಲ ಎಂದು ಘೋಷಣೆ ಮಾಡಲಿ.

    ಭಾರತ ದುಬೈ ಜೊತೆ 26.5 ಬಿಲಿಯನ್ ಡಾಲರ್, ಕತಾರ್ ಜೊತೆ 11.5 ಬಿಲಿಯನ್ ಡಾಲರ್, ಜೋರ್ಡಾನ್ ಜೊತೆ 1.7 ಬಿಲಿಯನ್ ಡಾಲರ್ ಹಾಗೂ ಮಲೆಶಿಯಾ ಸೇರಿ ಹಲವು ರಾಷ್ಟ್ರಗಳ ಜೊತೆ ವ್ಯಾಪಾರ ವಹಿವಾಟು ನಡೆಯುತ್ತಿದೆ. ಇವೆಲ್ಲವೂ ಏನು ಹಿಂದೂ ರಾಷ್ಟ್ರಗಳೇ? ಎಲ್ಲವೂ ಮುಸ್ಲಿಂ ರಾಷ್ಟ್ರಗಳು. ಇವುಗಳ ಜೊತೆ ವ್ಯಾಪಾರ ಮುಂದುವರೆಸುತ್ತಿರುವುದೇಕೆ ? ಪೆಟ್ರೋಲ್, ಡಿಸೇಲ್ ಎಲ್ಲಿಂದ ಆಮದು ಮಾಡಿಕೊಳ್ಳುತ್ತಿರಾ ಎಂದು ಪ್ರಶ್ನಿಸಿದರು.

    ದೇಶದಲ್ಲಿ ಶೇ.60ಕ್ಕಿಂತ ಹೆಚ್ಚು ನಿರುದ್ಯೋಗ ಸೃಷ್ಟಿಸಿದ್ದಾರೆ. ಆದರೆ ಬಜೆಟ್ ನಲ್ಲಿ ಸ್ವರ್ಗವನ್ನೆ ಕೈಗಿಡುವಂತೆ ನಂಬಿಸಿದ್ದಾರೆ. ಸರ್ಕಾರದ ವಾರ್ಷಿಕ ಆರ್ಥಿಕ ವರದಿಯಲ್ಲಿ ಅಸಲು ಅಂಶಗಳು ತಿಳಿದು ಬರುತ್ತವೆ. ನವೋದ್ಯಮಕ್ಕೆ ಪೆÇ್ರೀತ್ಸಾಹ ಇಲ್ಲ, ಸಣ್ಣ ಕೈಗಾರಿಕೆ ಉದ್ಯೋಗ ಸೃಷ್ಟಿಯಾಗುತ್ತಿಲ್ಲ.ತರಬೇತಿ ಮತ್ತು ಉದ್ಯೋಗ ಇಲಾಖೆಯಲ್ಲೇ ಹೆಚ್ಚು ನಿರುದ್ಯೋಗ ಇದೆ. ಇಲ್ಲಿ ಮಂಜೂರಾಗಿದ್ದು 6187 ಹುದ್ದೆಗಳು, ಭರ್ತಿಯಾಗಿರುವುದು 2544 ಹುದ್ದೆಗಳು ಮಾತ್ರ, ಖಾಲಿ ಇರುವುದು 3643 ಹುದ್ದೆಗಳು. ಉದ್ಯೋಗ ಇಲಾಖೆಯಲ್ಲಿ ಶೇ.50ರಷ್ಟು ಹುದ್ದೆಗಳು ಖಾಲಿ ಇವೆ. ಉದ್ಯೋಗ ಮೇಳ ನಡೆಸಿ ಸಾವಿರಾರು ಮಂದಿಗೆ ಕೆಲಸ ಕೊಡಿಸಿದ್ದೇವೆ ಎಂದು ಹೇಳಿಕೊಳ್ಳುತ್ತಾರೆ.

    ಕಲಬುರಗಿಯಲ್ಲೂ ಅದೇ ರೀತಿ ನಡೆದಿದೆ. ನಾನು ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ಪಡೆದ ಅಕೃತ ಮಾಹಿತಿ ಪ್ರಕಾರ 2020-21ರಲ್ಲಿ ಉದ್ಯೋಗ ಮೇಳ ನಡೆದಿಲ್ಲ. 2021-22ರಲ್ಲಿ 54 ಉದ್ಯೋಗ ಮೇಳ ನಡೆಸಲಾಗಿದೆ. ಇದರಲ್ಲಿ 12822 ಮಂದಿ ಆಯ್ಕೆಯಾಗಿದ್ದಾರೆ.ಸಂಜೀವಿನಿ ಕರ್ನಾಟಕ ಯೋಜನೆಯಲ್ಲಿ ನಡೆದ 10 ಉದ್ಯೋಗ ಮೇಳದಲ್ಲಿ 6643 ಆಯ್ಕೆಯಾಗಿದ್ದಾರೆ. 19465 ಮಂದಿಗೆ ಉದ್ಯೋಗ ಆಹ್ವಾನ ಪತ್ರ ನೀಡಲಾಗಿದೆ. ಅವರಲ್ಲಿ 1883 ಮಂದಿಗೆ ಮಾತ್ರ ಉದ್ಯೋಗ ಸಿಕ್ಕಿದೆ. ಉಳಿದವರ ಬಗ್ಗೆ ಸರ್ಕಾರದಲ್ಲಿ ಯಾವುದೇ ಮಾಹಿತಿ ಇಲ್ಲ ಎಂದು ಸರ್ಕಾರ ಉತ್ತರ ನೀಡಿದೆ ಎಂದರು.

    ಕೌಶಲ್ಯ ಅಭಿವೃದ್ಧಿ ಇಲಾಖೆಯಿಂದ ಜರ್ಮನ್ ಸಂಸ್ಥೆಗಳಿಂದ ಮುಖ್ಯಮಂತ್ರಿ ಕರ್ನಾಟಕ ಕೌಶಲ್ಯ ತರಬೇತಿ ಯೋಜನೆಯಡಿ 3715 ತರಬೇತಿ ನೀಡಲಾಗಿದೆ. ಅವರಲ್ಲಿ 101 ಮಂದಿಗೆ ಮಾತ್ರ ಉದ್ಯೋಗ ಸಿಕ್ಕಿದೆ. ಇದನ್ನು ಅಚ್ಚೆ ದಿನ್ ಎಂದು ಹೇಳುತ್ತಾರಾ ಎಂದು ಕಿಡಿಕಾರಿದರು.ಈ ಸರ್ಕಾರಕ್ಕೆ 10 ಸಾವಿರಕ್ಕೆ ತರಬೇತಿ ಕೊಡಿಸುವ ಯೋಗ್ಯತೆ ಇಲ್ಲ. ಬಿಜೆಪಿ ಐಟಿ ಕೋಶ ನೋಡಿ ಬಿಜೆಪಿ ಶಾಸಕರು ಮಾತನಾಡ ಬಾರದು, ಸರ್ಕಾರದ ವರದಿ ನೋಡಿ ಖಚಿತವಾದ ಮಾಹಿತಿ ನೋಡಿ ಮಾತನಾಡಿ, ಇಲ್ಲವಾದರೆ ನಗೆ ಪಾಟಲಿಗೆ ಈಡಾಗುತ್ತಿರಾ ಎಂದು ತಿರುಗೇಟು ನೀಡಿದರು.ರಾಜ್ಯ ಸರ್ಕಾರ ನಡೆಯುತ್ತಿರುವುದೇ ಮೋದಿ ಸರ್ಕಾರದಿಂದ ಎಂದು ಬಿಂಬಿಸಲಾಗುತ್ತಿದೆ. ಮೋದಿ ಸರ್ಕಾರ ರಾಜ್ಯಕ್ಕಾಗಿ ಏನು ಮಾಡಿದೆ ಎಂದು ಪ್ರಶ್ನಿಸಿದ ಅವರು, ರಾಜ್ಯ ಸರ್ಕಾರ 6.6 ಕೋಟಿ ಖರ್ಚು ಮಾಡಿ ಅಬುದಾಬಿಗೆ ಒಬ್ಬ ಡಾಕ್ಟರ್, ಒಬ್ಬ ನರ್ಸ್, 16 ಮಂದಿ ಮನೆ ಕೆಲಸಕ್ಕೆ ಕಳುಹಿಸಲಾಗಿದೆ. ಜಗತ್ತಿನಲ್ಲಿ ಭಾರತದ ಮಾನವ ಸಂಪನ್ಮೂಲಕ್ಕೆ ಭಾರೀ ಬೇಡಿಕೆ ಇದೆ. ಇವರು ಆರುವರೆ ಸಾವಿರ ಕೋಟಿ ಖರ್ಚು ಮಾಡಿ 18 ಮಂದಿಯನ್ನು ಕಳುಹಿಸುವುದನ್ನು ಅಭಿವೃದ್ಧಿ ಎನ್ನಬೇಕಾ ಎಂದು ಪ್ರಶ್ನಿಸಿದರು.

    2019ರಿಂದ 2021ರವರೆಗೆ 41 ಸಾವಿರ ಪುರುಷರು, 33243 ಮಹಿಳೆಯರು ಸೇರಿ 83190 ಮಂದಿ ಕೆಲಸ ಕಳೆದುಕೊಂದು ನಿರುದ್ಯೋಗಿಗಳಾಗಿದ್ದಾರೆ. ಕೃಷಿ ಬಳಿಕ ಗಾರ್ಮೆಂಟ್ಸ್ ಹೆಚ್ಚು ಉದ್ಯೋಗ ಸೃಷ್ಟಿಯ ಕ್ಷೇತ್ರವಾಗಿದೆ. ಕಳೆದ ಮೂರು ವರ್ಷದಲ್ಲಿ 180 ಗಾರ್ಮೆಂಟ್ಸ್ ಕಂಪೆನಿಗಳು ಮುಚ್ಚಿವೆ. ಅದರಿಂದ ಶೇ.66ರಷ್ಟು ಮಹಿಳೆಯರು ಕೆಲಸ ಕಳೆದು ಕೊಂಡಿದ್ದಾರೆ. ಖಾಸಗಿ ಸಂಸ್ಥೆಯ ವರದಿ ಪ್ರಕಾರ ಗಾರ್ಮೆಂಟ್ಸ್ನಲ್ಲಿ ನಾಲ್ಕು ಲಕ್ಷ ಮಂದಿ ಕೆಲಸ ಕಳೆದುಕೊಂಡಿದ್ದಾರೆ. ಇಷ್ಟು ಅನಾಹುತವಾಗಿದ್ದರೂ ಮುಖ್ಯಮಂತ್ರಿಯವರು ಮಹಿಳಾ ದಿನಾಚರಣೆಯಲ್ಲಿ ಮಹಿಳಾ ಆಧಾರಿತ ಬಜೆಟ್ ಮಂಡಿಸಿ ಸಾಸಿದ್ದೇನೆ ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.

    ಕೋವಿಡ್ನಿಂದ ಪ್ರವಾಸೋದ್ಯಮದಲ್ಲಿ 30ಲಕ್ಷ ಜನ ನಿರುದ್ಯೋಗಿಗಳಾಗಿದ್ದಾರೆ. 1250 ಕಾರ್ಖಾನೆಗಳು ಮುಚ್ಚಿವೆ. 1772 ಉದ್ಯಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೇಶದಲ್ಲೇ ಅತಿ ಹೆಚ್ಚು ಉದ್ಯಮಿಗಳ ಆತ್ಮಹತ್ಯೆ ಮಾಡಿಕೊಂಡಿರುವುದು ಕರ್ನಾಟಕದಲ್ಲಿ. ರಾಷ್ಟ್ರಿಯ ಅಪರಾಧಗಳ ಮಾನಕ ಬ್ಯೂರೋ ಪ್ರಕಾರ ಶೇ.15ರಷ್ಟು ಆತ್ಮಹತ್ಯೆಗಳು ರಾಜ್ಯದಲ್ಲೇ ನಡೆದಿವೆ ಎಂದು ವಿವರಿಸಿದರು.

    ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬಜೆಟ್ ಮಂಡಿಸಿದ್ದಾರೆ ಹಲವು ಯೋಜನೆಗಳನ್ನ ಘೋಷಿಸಿದ್ದಾರೆ. ಆದರೆ ಅನುಷ್ಠಾನದ ಬಗ್ಗೆ ಸ್ಪಷ್ಟ ಮಾಹಿತಿ ಕೊಟ್ಟಿಲ್ಲ. ಸರ್ವ ವ್ಯಾಪಿ, ಸರ್ವ ಸ್ಪರ್ಶಿ ಬಜೆಟ್ ಅಂದಿದ್ದಾರೆ. ಆದರೆ ಎಲ್ಲಿಯೂ ಸ್ಪಷ್ಟ ನಿಲುವು ತೆಗೆದುಕೊಂಡಿಲ್ಲ. ಉದ್ಯೋಗ ಸೃಷ್ಟಿ ಬಗ್ಗೆ ಸರಿಯಾದ ಮಾಹಿತಿಯಿಲ್ಲ. ಡಬಲ್ ಎಂಜಿನ್ ಸರ್ಕಾರದಲ್ಲಿ ಡಬಲ್ ದೋಖಾ ಆಗಿದೆ. ಪ್ರತಿವರ್ಷ 2 ಕೋಟಿ ಉದ್ಯೋಗ ಸೃಷ್ಠಿಸುತ್ತೇವೆ ಎಂದಿದ್ದರು. ಆದರೆ ಅತಿ ಹೆಚ್ಚಿನ ಉದ್ಯೋಗ ಕೊರತೆಯಾಗಿದೆ. ಯುವಕರ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

    ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ ಪ್ರಿಯಾಂಕ್ ಖರ್ಗೆ, ಇವರು ನಮ್ಮ ಭಾಗದವರೆ. ಅವರನ್ನ ಅದೇನಂತ ಇವರನ್ನು ಮಿನಿಸ್ಟರ್ ಮಾಡಿದ್ದಾರೋ ಗೊತ್ತಿಲ್ಲ. ಈ ಕಡೆ ಕನ್ನಡವೂ ಬರಲ್ಲ, ಅತ್ತ ಹಿಂದಿಯೂ ಇಲ್ಲ. ಹೋಗ್ಲಿ ಇಂಗ್ಲೀಷ್ ಇದ್ಯಾ ಅದೂ ಬರಲ್ಲ. ಇವರಿಗೆ ಇಲಾಖೆ ಉದ್ಯೋಗದ ಬಗ್ಗೆ ಮಾಹಿತಿಯೇ ಇಲ್ಲ. ಕೇಳಿದರೆ ನಮ್ಮ ಇಲಾಖೆಗೆ ಬರುತ್ತಾ ಎಂದು ಕೇಳುತ್ತಾರೆ ಎಂದು ಅಸಮಧಾನ ವ್ಯಕ್ತ ಪಡಿಸಿದರು.

    ಕೆಳ ವರ್ಗದ ಮಕ್ಕಳನ್ನು ಧರ್ಮದ ನಶೆಯಲ್ಲಿ ಹಾದಿ ತಪ್ಪಿಸಿ ನಿಮ್ಮ ಮಕ್ಕಳಿಗೆ ಉನ್ನತ ವ್ಯಾಸಂಗಕ್ಕೆ ಕಳುಹಿಸುವುದನ್ನು ನಿಲ್ಲಿಸಿ. ನಿಮ್ಮ ಮಕ್ಕಳಿಗೂ ತಿಲಕ ಇಟ್ಟು ಧರ್ಮ ರಕ್ಷಣೆಗೆ ಬಿಡಿ ನೋಡೋಣ ಎಂದು ಪ್ರಿಯಾಂಕ್ ಖರ್ಗೆ ಸವಾಲು ಹಾಕಿದರು.

    ವರದಿ: ಆಂಟೋನಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಮೇಟಿಯವರ ನಿಧನ ನನಗೆ ವೈಯಕ್ತಿಕ ನಷ್ಟ: ಸಿಎಂ ಸಿದ್ದರಾಮಯ್ಯ

    November 4, 2025

    ಅಶ್ಲೀಲ ಸಂದೇಶ ಕಳಿಸಿ ಕಿರುತೆರೆ ನಟಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ

    November 4, 2025

    ಪರಿಶಿಷ್ಟ ಪಂಗಡಗಳನ್ನು ಕಾಂಗ್ರೆಸ್ ಕೇವಲ ಮತಬ್ಯಾಂಕ್ ಆಗಿ ಪರಿಗಣಿಸುತ್ತಿದೆ:  ಬಿ.ವೈ. ವಿಜಯೇಂದ್ರ ಆರೋಪ

    November 4, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ಕೊನೆಗೂ ಜಯಲಕ್ಷ್ಮೀಪುರ ಗ್ರಾಮಕ್ಕೆ ಬಂತು ಸರ್ಕಾರಿ ಬಸ್: ಗ್ರಾಮಸ್ಥರಿಂದ ಹರ್ಷ

    November 5, 2025

    ಸರಗೂರು:   ಜಯಲಕ್ಷ್ಮೀಪುರ ಗ್ರಾಮಸ್ಥರು ಒತ್ತಾಯದ ಮೇರೆಗೆ ತಾಲೂಕಿನಿಂದ ಜಯಲಕ್ಷೀಪುರ ಗ್ರಾಮಕ್ಕೆ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಿಕೊಟ್ಟ ತಾಲೂಕಿನ ಶಾಸಕರಾದ ಅನಿಲ್…

    ಪ.ಜಾತಿ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳ ಆಧಾರ್ ಇ–ದೃಢೀಕರಣ ಕಡ್ಡಾಯ: ವಿ.ಕೆ.ಬಡಿಗೇರ

    November 5, 2025

    ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ಸ್ಪರ್ಧಾ ಕಾರ್ಯಕ್ರಮ ಮುಂದೂಡಿಕೆ

    November 5, 2025

    ನ.10: ಶ್ರೀ ಗುರುಸಂಗಮೇಶ್ವರಸ್ವಾಮಿ ಅವರ ಲಕ್ಷದೀಪೋತ್ಸವ ಆಚರಣೆ

    November 5, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.