ಮಧುಗಿರಿ: ಮಧುಗಿರಿ ತಾಲೂಕಿನ ಕೆರಗಳಪಾಳ್ಯ ಬಳಿ ಇರುವ ಬೈಲಾಂಜನೇಯ ದೇವಾಲಯ ತಾವರೆಕೊಳದ ಸಮೀಪ ಭಾನುವಾರ ಬೆಳಗ್ಗೆ ಕೆ ಎಸ್ ಆ ರ್ಟಿಸಿ ಬಸ್ ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದ್ದು , ಸ್ಥಳದಲ್ಲೇ ದಂಪತಿ ಮೃತಪಟ್ಟಿದ್ದಾರೆ .
ಮಧುಗಿರಿ ಕಡೆಯಿಂದ ಬೆಂಗಳೂರಿಗೆ ಹೊಗುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ಭೀಕರತೆಗೆ ದ್ವಿಚಕ್ರ ವಾಹನದಲ್ಲಿ ಕುಳಿತಿದ್ದ ದಂಪತಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ.
ಮೃತರು ಮಧುಗಿರಿ ತಾಲೂಕಿನ ಗೊಂದಿಹಳ್ಳಿ ಮೂಲದ ಸಾಂಬಶಿವಯ್ಯ(73) ಶಂಕ್ರಮ್ಮ(66)ನಿವಾಸಿಗಳು ಎನ್ನಲಾಗಿದ್ದು, ದ್ವಿಚಕ್ರ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.
ಘಟನಾ ಸ್ಥಳಕ್ಕೆ ಮಧುಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮಧುಗಿರಿ ಸಾರ್ವಜನಿಕ ಆಸ್ಪತ್ರೆ ಯ ಶವಗಾರದಲ್ಲಿ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5