ತುಮಕೂರು: ಸಿದ್ದಗಂಗಾ ಮಠದ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿ ಅವರ 115ನೇಜಯಂತ್ಯುತ್ಸವ ಪ್ರಯುಕ್ತ ಶುಕ್ರವಾರ ಬೆಳಗ್ಗೆ ಮಠದ ಆವರಣದಲ್ಲಿ 115 ಮಕ್ಕಳಿಗೆ ಶಿವಕುಮಾರ ಸ್ವಾಮೀಜಿಗಳ ಹೆಸರು ನಾಮಕರಣ ಮಾಡಲಾಯಿತು.
ಇದೇ ಸಂದರ್ಭದಲ್ಲಿ ತುಮಕೂರು ತಾಲೂಕಿನ ಕ್ಯಾತ್ಸಂದ್ರದ ನಿವಾಸಿ ಶಾಹಿಸ್ತಾ ಹಾಗೂ ಜಮೀರ್ ದಂಪತಿ ತಮ್ಮ ಮಗಳಿಗೆ ಶಿವಮಣಿ ಎಂದು ಹೆಸರಿಡಲಾಯಿತು. ಡಾ. ಶಿವಕುಮಾರ ಮಹಾಸ್ವಾಮೀಜಿ ಅನ್ನದಾನ ಸೇವಾ ಟ್ರಸ್ಟ್ನಿಂದ ಮಕ್ಕಳಿಗೆ ನಾಮಕರಣ ಮಾಡಲಾಯಿತು.
ರಾಜ್ಯದ ನಾನಾ ಭಾಗಗಳಿಂದ ಮಠಕ್ಕೆ ಆಗಮಿಸಿದ್ದ ಮಕ್ಕಳಿಗೆ ಶಿವಕುಮಾರಸ್ವಾಮೀಜಿಯ ನಾಮಕರಣ ಮಾಡಲಾಯಿತು. ಇದೊಂದು ವಿಭಿನ್ನ ಕಾರ್ಯಕ್ರಮವಾಗಿದ್ದು, ಮೂರ್ನಾಲ್ಕು ವರ್ಷಗಳಿಂದ ಈ ಕಾರ್ಯಕ್ರಮ ಹಮ್ಮಿಕೊಂಡು ಬರಲಾಗುತ್ತಿದೆ ಎಂದು ಟ್ರಸ್ಟ್ ಅಧ್ಯಕ್ಷ ಜಯಣ್ಣ ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5