nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026

    ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!

    August 17, 2026

    ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ

    August 17, 2026
    Facebook Twitter Instagram
    ಟ್ರೆಂಡಿಂಗ್
    • ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!
    • ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!
    • ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ
    • ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ
    • ಆರ್ ಎಸ್ ಎಸ್ ಜಾತಿವಾದ, ಕೋಮುವಾದದ ‘ಸಾವಿರ ತಲೆಯ ವಿಷಪೂರಿತ ಹಾವು’: ಸಚಿವ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ
    • ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ
    • ಜೈಲಿನಲ್ಲೇ ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ‘ಸ್ಪೆಷಲ್ ಕ್ಲಾಸ್’!
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತೋತ್ಸವ : ಬಸವರಾಜ ಬೊಮ್ಮಾಯಿ ಸಂಪೂರ್ಣ ಭಾಷಣ
    ರಾಜ್ಯ ಸುದ್ದಿ April 1, 2022

    ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತೋತ್ಸವ : ಬಸವರಾಜ ಬೊಮ್ಮಾಯಿ ಸಂಪೂರ್ಣ ಭಾಷಣ

    By adminApril 1, 2022No Comments2 Mins Read
    basavaraj bommai

    ತುಮಕೂರು: ಶಿವಕುಮಾರ ಸ್ವಾಮೀಜಿಗಳ ಜಯಂತಿಯನ್ನು ದಾಸೋಹ ದಿನ ಎಂದು  ಈಗಾಗಲೇ ಸರ್ಕಾರ ಆಚರಿಸುತ್ತಿದೆ. ಮಧ್ಯಾಹ್ನದ ಬಿಸಿ ಊಟದ ಯೋಜನೆಗೆ ಡಾ.ಶ್ರೀ ಶಿವಕುಮಾರ ಸ್ವಾಮೀಜಿಗಳ ಹೆಸರನ್ನಿಡಲು ಸರ್ಕಾರ ಕ್ರಮಕೈಗೊಳ್ಳಲಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

    ತುಮಕೂರಿನ ಶ್ರೀ ಸಿದ್ದಗಂಗಾ ಮಠದಲ್ಲಿ ಆಯೋಜಿಸಿದ್ದ  ಡಾ. ಶ್ರೀ ಶಿವಕುಮಾರ ಮಹಾಶಿವಯೋಗಿಗಳ  115ನೇ ಜಯಂತೋತ್ಸವ  ಹಾಗೂ “ ಗುರುವಂದನಾ ಮಹೋತ್ಸವದಲ್ಲಿ  ಕೇಂದ್ರದ ಗೃಹ ಹಾಗೂ ಸಹಕಾರ ಸಚಿವ ಶ್ರೀ ಅಮಿತ್ ಶಾ ಅವರೊಂದಿಗೆ  ಪಾಲ್ಗೊಂಡು  ಮಾತನಾಡಿದರು.

    ಆಡಳಿತಗಾರರು ಶ್ರೀ ಮಠವನ್ನು ಶ್ರದ್ಧಾ ಭಕ್ತಿಯಿಂದ ಕಂಡಿದ್ದಾರೆ. ನಮ್ಮ ಸರ್ಕಾರವೂ ಅತ್ಯಂತ ಶ್ರದ್ಧೆಯಿಂದ ಕಾಣುತ್ತಿದೆ. ಭಕ್ತಿಯಿಂದ ಬಸವಣ್ಣನವರ ದಾಸೋಹ, ಶಿಕ್ಷಣ, ಆರೋಗ್ಯ ತತ್ವಗಳಿಗೆ ನಮ್ಮ ಸರ್ಕಾರ ಮಹತ್ವ ನೀಡಿದೆ. ಸರ್ವೋದಯ ಕಾರ್ಯಕ್ರಮಕ್ಕೆ 60 ಸಾವಿರ ಕೋಟಿ ರೂ.ಗಳಿಗಿಂತ  ಹೆಚ್ಚು ಅನುದಾನವನ್ನು ಈ ವರ್ಷದ ಬಜೆಟ್ ನಲ್ಲಿ ಮೀಸಲಿರಿಸಿದೆ.  ಜನಕಲ್ಯಾಣಕ್ಕಾಗಿ ಹಾಗೂ ಜನರ ಪರವಾಗಿ ನಮ್ಮ ಸರ್ಕಾರ ಕೆಲಸ ಮಾಡಲಿದೆ. ನಿಮ್ಮ ವಿಶ್ವಾಸ ಗಳಿಸುವ ರೀತಿಯಲ್ಲಿ  ಕೆಲಸ ಮಾಡುತ್ತದೆ . ಬಡವರು ದೀನದಲಿತರು, ಹೆಣ್ಣು ಮಕ್ಕಳಿಗೆ ಕಾರ್ಯಕ್ರಮಗಳ ಅನುಷ್ಠಾನ ಮಾಡಿ ನಿಮ್ಮ ಪ್ರೀತಿ ವಿಶ್ವಾಸವನ್ನು ಗಳಿಸಿ ನಿಮ್ಮ ಮುಂದೆ ಬರುತ್ತೇವೆ. ಕೇಂದ್ರ ಸಚಿವರ ಆಗಮನ ನಮ್ಮಲ್ಲಿ ಸಂಚಲನ ಮೂಡಿಸಿದೆ. ಜನರು ಅವರ ಮೇಲೆ ಪ್ರೀತಿ ಇರಿಸಿದ್ದಾರೆ ಎಂದರು.

    ಶಿವಕುಮಾರ ಸ್ವಾಮೀಜಿಗಳ ಸ್ಪೂರ್ತಿ:

    ಈ ನೆಲದಲ್ಲಿ ಅವರ ಸ್ಫೂರ್ತಿ, ಪ್ರೇರಣೆ ಇದೆ. ಇಲ್ಲಿ ಬಂದರೆ ಮನಸ್ಸಿಗೆ ಶಾಂತಿ, ಬದುಕಿಗೆ ದಾರಿ ಸಿಗುವ ಶಕ್ತಿ ಸಿದ್ದಗಂಗಾ ಕ್ಷೇತ್ರದಲ್ಲಿ ಇದೆ. ಅದೇ ದಾರಿಯಲ್ಲಿ  ಸಿದ್ದಲಿಂಗಸ್ವಾಮಿಗಳು ಶಿವಕುಮಾರ ಸ್ವಾಮಿಗಳ ಪರಂಪರೆಯನ್ನು ಅತ್ಯಂತ ಪ್ರಾಮಾಣಿಕವಾಗಿ ದಕ್ಷತೆಯಿಂದ ಜನರ ಭಾವನೆಗಳನ್ನು ಅರ್ಥ ಮಾಡಿಕೊಂಡು ಯೋಗ್ಯವಾಗಿ ಮುನ್ನಡೆಸುತ್ತಿದ್ದಾರೆ ಎಂದರು.

    ಅನನ್ಯ ಸೇವೆಯ ದಾಖಲೆ:

    ಶಿವಕುಮಾರ ಸ್ವಾಮೀಜಿ ಅವರು ಸುಮಾರು 88 ವರ್ಷಗಳ ಕಾಲ ಈ ನಾಡಿನ ಸೇವೆಯನ್ನು ಮಠದ ಮುಖಾಂತರ ಮಾಡಿರುವುದು ಒಂದು ದಾಖಲೆ. ಯಾವುದೇ ಪರಪೂಜ್ಯರು ಇಷ್ಟು ದೀರ್ಘಕಾಲದ ಸೇವೆಯನ್ನು ಇಡೀ ಭಾರತ ದೇಶದಲ್ಲಿ ಮಾಡಿಲ್ಲ ಎನ್ನುವುದು ನಮ್ಮೆಲ್ಲರಿಗೂ ಅಭಿಮಾನದ ಸಂಗತಿ. ಅದಕ್ಕಾಗಿಯೇ ಅವರಿಗೆ ನಡೆದಾಡುವ ದೇವರು ಎಂಬ ಬಿರುದು ಬಂದಿದೆ. ಅವರು ಹಚ್ಚಿದ  ಒಲೆಯ ಕಿಚ್ಚು ಸುಮಾರು 100 ವರ್ಷಕ್ಕಿಂತ ಹೆಚ್ಚಿನದಾಗಿದ್ದು, ಇಂದಿಗೂ ಉರಿಯುತ್ತಿದೆ. ಎಲ್ಲಿಯವರೆಗೆ ಈ ಅಡಿಗೆ ಒಲೆಯ ಕಿಚ್ಚು ಉರಿಯುತ್ತಿರುತ್ತದೆ, ಅಲ್ಲಿಯವರೆಗೆ ಬಡ ಮಕ್ಕಳ ಹೊಟ್ಟೆ ತಣ್ಣಗಾಗುತ್ತದೆ ಎಂದರು. ನಾವೆಲ್ಲರೂ ಕೋಟಿ ಕೋಟಿ ಗುರುವಂದನೆಗಳನ್ನು ಸದಾ ಸಲ್ಲಿಸಬೇಕು. ಅನ್ನ, ಅಕ್ಷರ, ಆಶ್ರಯಗಳನ್ನು ಅಕ್ಷರಶಃ ಪಾಲಿಸಿದ ದೇವರು ಶಿವಕುಮಾರ ಸ್ವಾಮೀಜಿ ಅವರು. ಅವರು ನಮ್ಮ ನಡುವೆ  ಜೀವಂತವಾಗಿದ್ದು, ಪ್ರೇರಣೆ, ಆಶೀರ್ವಾದ ನೀಡುತ್ತಿದ್ದಾರೆ ಎಂದರು.

    ಸರ್ವೋದಯ ಮತ್ತು ಅಂತ್ಯೋದಯ ಪರಿಕಲ್ಪನೆ:

    ಸಾಧಕನಿಗೆ ಸಾವು ಅಂತ್ಯವಲ್ಲ. ಸಾವಿನ ನಂತರವೂ ಬದುಕುವವನು ನಿಜ ಸಾಧಕ ಎಂದು ಸ್ವಾಮಿ ವಿವೇಕಾನಂದರು ಹೇಳಿದಂತೆ ಅವರು ಬದುಕಿದ್ದಾರೆ. ಶಿವಕುಮಾರ ಸ್ವಾಮೀಜಿ ಅವರು ಬದುಕಿನ ದಾರಿಯನ್ನು ಕಟ್ಟಿಕೊಟ್ಟಿರುವ ಸ್ವಾಮೀಜಿಗಳು. ದೂರದ ಉತ್ತರ ಕರ್ನಾಟಕದ ಮಕ್ಕಳು,  ಎಲ್ಲಾ ಸಮುದಾಯದ 10 ಸಾವಿರಕ್ಕೂ ಹೆಚ್ಚು  ಮಕ್ಕಳನ್ನು ಸಲಹುವುದು ಸುಲಭದ ಮಾತಲ್ಲ. ದೈವಶಕ್ತಿ  ನಮ್ಮೆಲ್ಲದಿಗೂ ಮಾರ್ಗದರ್ಶನ ಮಾಡುತ್ತಿದೆ. ಅವರ ಶ್ರದ್ಧೆ, ನಿಷ್ಠೆ ಮತ್ತು ಪರಿಶ್ರಮ ಅವರ ಧ್ಯೇಯ. ಅದರ ಪರಿಪಾಲನೆ ಮಾಡುವುದು ನಮ್ಮೆಲ್ಲರ ಕರ್ತವ್ಯ. ಶಿವಕುಮಾರ ಸ್ವಾಮೀಜಿ ಅವರಿಗೆ ಜಾತಿ ಕುಲ ಎಂದು ನೋಡದೆ, ಎಲ್ಲ ವರ್ಗದ ಜನರನ್ನು ಪ್ರೀತಿ ಮಾಡಿ ಬದುಕನ್ನು ಕಟ್ಟಿಕೊಟ್ಟಿದ್ದಾರೆ.  ಸರ್ವೋದಯ ಮತ್ತು  ಅಂತ್ಯೋದಯ  ಪರಿಕಲ್ಪನೆ ಈ ಮಠದಲ್ಲಿ ನಿತ್ಯ ನಿರಂತರವಾಗಿ ನಡೆಯುತ್ತಿದೆ. ಅಂತ್ಯೋದಯ ಪರಿಕಲ್ಪನೆಯಲ್ಲಿ ಅತ್ಯಂತ ಕಟ್ಟ ಕಡೆಯ ಮನುಷ್ಯನಿಗೆ  ಇಲ್ಲಿ ಸ್ಥಾನವಿದೆ. ಅವನು ತನ್ನ ಬದುಕು ಪ್ರಾರಂಭಿಸಲು ಎಲ್ಲ ರೀತಿಯ ವ್ಯವಸ್ಥೆ ಶ್ರೀ ಮಠದಲ್ಲಿದೆ ಎಂದು ಸಿಎಂ ಹೇಳಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026

    ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!

    August 17, 2026

    ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ

    August 17, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026

    ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟ ಪ್ರಕರಣಕ್ಕೆ…

    ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!

    August 17, 2026

    ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ

    August 17, 2026

    ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ

    August 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.