ಬೆಂಗಳೂರು: ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆ ಬಾರದಂತೆ ಯುಗಾದಿ ಆಚರಿಸುವಂತೆ ಸಿಎಂ ಬಸವರಾಜ್ ಬೊಮ್ಮಾಯಿ (Basavaraj Bommai) ರಾಜ್ಯದ ಜನತೆಗೆ ಮನವಿ ಮಾಡಿಕೊಂಡಿದ್ದಾರೆ.
ಯುಗಾದಿ ಸಂಭ್ರಮದ ನಡುವೆಯೇ ರಾಜ್ಯದಲ್ಲಿ ಹಲಾಲ್ ಹಾಗೂ ಜಟ್ಕಾ ಕಟ್ ವಿವಾದ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಹಬ್ಬ ಆಚರಿಸಿ ಎಂದು ಬೊಮ್ಮಾಯಿ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಕ್ರಮಗಳನ್ನು ಕೈಗೊಳ್ಳುವಂತೆ ಈಗಾಗಲೇ ಎಲ್ಲಾ ಜಿಲ್ಲಾ ಎಸ್ ಪಿ ಹಾಗೂ ಡಿಸಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5


