ಅಹ್ಮದಾಬಾದ್: ಆಮ್ ಆದ್ಮಿ ಪಕ್ಷದ (AAP) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹಾಗೂ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಸಾಬರಮತಿ ಆಶ್ರಮಕ್ಕೆ ಶನಿವಾರ ಭೇಟಿ ನೀಡಿದ್ದಾರೆ.
ಬಿಜೆಪಿ ಆಡಳಿತವಿರುವ ಗುಜರಾತ್ ನಲ್ಲಿ ಈ ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಮತ್ತು ಮಾನ್ ಭೇಟಿ ಮಹತ್ವ ಪಡೆದುಕೊಂಡಿದೆ.
ದೆಹಲಿ ಮುಖ್ಯಮಂತ್ರಿಯೂ ಆಗಿರುವ ಕೇಜ್ರಿವಾಲ್ ಅವರು ಚುನಾವಣೆ ವೇಳೆಗೆ ತಳಮಟ್ಟದಿಂದ ಪಕ್ಷ ಸಂಘಟಿಸುವ ಪ್ರಯತ್ನ ಮಾಡುತ್ತಿದ್ದಾರೆ ಎನ್ನಲಾಗಿದೆ.
ಮಹಾತ್ಮ ಗಾಂಧಿಯವರು ಸಾಬರಮತಿ ಆಶ್ರಮದ ಆವರಣದಲ್ಲಿ ಉಳಿದುಕೊಳ್ಳುತ್ತಿದ್ದ ಸ್ಥಳವಾದ ಹೃದಯ್ ಕುಂಜ್ ಮತ್ತು ಅಲ್ಲಿನ ವಸ್ತು ಸಂಗ್ರಹಾಲಯಗಳಿಗೆ ಕೇಜ್ರಿವಾಲ್ ಮತ್ತು ಮಾನ್ ಭೇಟಿ ನೀಡಿದರು. ಹಾಗೆಯೇ, ಗಾಂಧೀಜಿ ಅವರ ಪ್ರತಿಮೆಗೆ ನಮಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5