ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ 12 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಶನಿವಾರ ತಡರಾತ್ರಿ ಬಂಧಿಸಿದ್ದು, ಸಮುದ್ರದ ಗಡಿ ಉಲಂಘನೆ ಆರೋಪದಲ್ಲಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ತಮಿಳುನಾಡು ಮೀನುಗಾರಿಕೆ ಇಲಾಖೆ ಅಧಿಕಾರಿ ಈ ಮಾಹಿತಿ ನೀಡಿದ್ದಾರೆ. ರಾಮನಾಥಪುರಂ ಸಂಸದ ಕೆ.ನವಾಸ್ ಕಣಿ ಅವರು ಈ ವಿಷಯವನ್ನು ವಿದೇಶಾಂಗ ಸಚಿವಾಲಯ ಗಮನಕ್ಕೆ ತಂದು ಲಂಕಾ ದೌರ್ಜನ್ಯ ತಡೆಯಿರಿ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಮಾರ್ಚ್ 29 ರಿಂದ ಲಂಕಾ ನೌಕಾಪಡೆಯು ಸಮುದ್ರ ಗಡಿ ಉಲ್ಲಂಘನೆಯ ಆರೋಪದ ಮೇಲೆ ಭಾರತೀಯ ಮೀನುಗಾರರನ್ನು ಮೂರನೇ ಬಾರಿಗೆ ಬಂಧಿಸಲಾಗುತ್ತಿದೆ. ಮಂಗಳವಾರ ಮತ್ತು ಗುರುವಾರ ಒಟ್ಟು ಏಳು ಮೀನುಗಾರರನ್ನು ಬಂಧಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5