ಗುಬ್ಬಿ: ಜನತೆಯ ಸಮಸ್ಯೆಗೆ ಸ್ಪಂದಿಸಬೇಕಾದ ರಾಜ್ಯ ಸರಕಾರ ಜನತೆಯಲ್ಲಿ ಗೊಂದಲದ ವಾತಾವರಣ ಸೃಷ್ಟಿ ಮಾಡುತ್ತಿದ್ದು ಜನತೆಯನ್ನು ಧರ್ಮದ ಹೆಸರಿನಲ್ಲಿ ಎತ್ತಿ ಕಟ್ಟುತ್ತಿರುವುದು ಸರಿಯಲ್ಲ ಎಂದು ಶಾಸಕ ಶ್ರೀನಿವಾಸ್ ತಿಳಿಸಿದರು.
ಗುಬ್ಬಿ ತಾಲೂಕಿನ ಕಸಬಾ ಹೋಬಳಿಯ ವಿವಿಧ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು ರಾಜ್ಯದ ಗೃಹ ಮಂತ್ರಿಗಳು ಬೆಳಿಗ್ಗೆ ಒಂದು ಹೇಳಿಕೆ ಸಂಜೆ ಬದಲಿ ಹೇಳಿಕೆ ನೀಡಿ ರಾಜ್ಯದ ಜನತೆಯನ್ನು ದಿಕ್ಕುತಪ್ಪಿಸುತ್ತಿದ್ದಾರೆ ಇದರಿಂದ ಗೃಹಮಂತ್ರಿಗಳು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.
ಇನ್ನೂ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರ ಬಗ್ಗೆ ಮಾತನಾಡುವಷ್ಟು ನಾನು ದೊಡ್ಡವನಲ್ಲ ಹಾಗಾಗಿ ಮೂರು ವರ್ಷಗಳಿಂದ ತಿರಸ್ಕಾರಕ್ಕೆ ಒಳಗಾಗಿರುವ ನಾನು ಅವರ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು ತಿಳಿಸಿದರು .
ವರದಿ: ಮಂಜುನಾಥ್, ಗುಬ್ಬಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5