nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026

    ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!

    August 17, 2026

    ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ

    August 17, 2026
    Facebook Twitter Instagram
    ಟ್ರೆಂಡಿಂಗ್
    • ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!
    • ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!
    • ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ
    • ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ
    • ಆರ್ ಎಸ್ ಎಸ್ ಜಾತಿವಾದ, ಕೋಮುವಾದದ ‘ಸಾವಿರ ತಲೆಯ ವಿಷಪೂರಿತ ಹಾವು’: ಸಚಿವ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ
    • ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ
    • ಜೈಲಿನಲ್ಲೇ ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ‘ಸ್ಪೆಷಲ್ ಕ್ಲಾಸ್’!
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೂಸ್ಟರ್ ಡೋಸ್‌ಗೆ ಜನರ ನಿರಾಸಕ್ತಿ: ದುಡ್ಡು ಕೊಟ್ಟು ಲಸಿಕೆ ಹಾಕಿಸಿಕೊಳ್ಳಬೇಕೆ?
    ರಾಜ್ಯ ಸುದ್ದಿ April 11, 2022

    ಬೂಸ್ಟರ್ ಡೋಸ್‌ಗೆ ಜನರ ನಿರಾಸಕ್ತಿ: ದುಡ್ಡು ಕೊಟ್ಟು ಲಸಿಕೆ ಹಾಕಿಸಿಕೊಳ್ಳಬೇಕೆ?

    By adminApril 11, 2022No Comments2 Mins Read
    booster dose

    ದೇಶಾದ್ಯಂತ ಇಂದಿನಿಂದ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಬೂಸ್ಟರ್ ಡೋಸ್ ಲಸಿಕೆಯನ್ನು ನೀಡುವ ಕಾರ್ಯ ಆರಂಭವಾಗಿದ್ದರೂ ಕರ್ನಾಟಕ ಸೇರಿದಂತೆ ದೇಶದ ಬಹುತೇಕ ಕಡೆ ಬೂಸ್ಟರ್ ಡೋಸ್ ಲಸಿಕೆಗೆ ಹೆಚ್ಚಿನ ಆಸಕ್ತಿ ತೋರಿಲ್ಲ. ಕೊರೊನಾ ಸೋಂಕು ಪ್ರಕರಣಗಳು ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಮುನ್ನೆಚೆರಿಕೆ ಡೋಸ್ ಪಡೆಯಲು ಜನ ಹೆಚ್ಚಿನ ಉತ್ಸಾಹ ಕಂಡು ಬಂದಿಲ್ಲ. ಲಸಿಕಾ ಕೇಂದ್ರಗಳತ್ತ ಜನ ಬೂಸ್ಟರ್ ಡೋಸ್ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಬಂದಿಲ್ಲ.

    ಕೋವಿಡ್‌ ನ 1 ಮತ್ತು 2ನೇ ಅಲೆ ಸಂದರ್ಭದಲ್ಲಿ ಲಸಿಕೆಗಾಗಿ ಲಸಿಕಾ ಕೇಂದ್ರಗಳಿಗೆ ಮುಗಿಬಿದ್ದು, ದಿನಗಟ್ಟಲೆ ಸರತಿ ಸಾಲಿನಲ್ಲಿ ನಿಂತು ಲಸಿಕೆ ಹಾಕಿಸಿಕೊಳ್ಳುತ್ತಿದ್ದ ಜನ, ಬೂಸ್ಟರ್ ಡೋಸ್ ಲಸಿಕೆ ಬಗ್ಗೆ ಮಾತ್ರ ಅಷ್ಟೇನೂ ಉತ್ಸಾಹ ತೋರುತ್ತಿಲ್ಲ. ನೋಡೋಣ ಸರ್ಕಾರವೇ ಉಚಿತವಾಗಿ ಲಸಿಕೆ ಕೊಡಬಹುದು ಎಂಬ ನಿರೀಕ್ಷೆಯಲ್ಲಿ ಕೆಲವರಿದ್ದರೆ, ಇನ್ನೂ ಕೆಲವರು ಈಗ ಕೊರೊನಾ ಇಲ್ಲ, ಮುಂದೆ ಕೊರೊನಾ ಸೋಂಕು ಜಾಸ್ತಿಯಾದರೆ ಆಗ ಲಸಿಕೆ ಹಾಕಿಸಿಕೊಳ್ಳೋಣ ಎಂಬ ಮನಃಸ್ಥಿತಿಯಲ್ಲಿರುವುದು ಬೂಸ್ಟರ್ ಡೋಸ್ ಲಸಿಕೆಗೆ ಹೆಚ್ಚಿನ ಪ್ರತಿಕ್ರಿಯೆ ಸಿಕ್ಕಿಲ್ಲ.

    ಬೂಸ್ಟರ್ ಡೋಸ್ ಲಸಿಕೆಯನ್ನು ಖಾಸಗಿ ಲಸಿಕಾ ಕೇಂದ್ರಗಳಲ್ಲಿ ನೀಡಲಾಗುತ್ತಿದ್ದು, ಉಚಿತವಾಗಿ ಬೂಸ್ಟರ್ ಡೋಸ್ ಲಸಿಕೆ ನೀಡುತ್ತಿಲ್ಲ ಹಾಗಾಗಿಯೇ ಸಾಮಾನ್ಯ ಜನ ದುಡ್ಡು ಕೊಟ್ಟು ಲಸಿಕೆ ಹಾಕಿಸಿಕೊಳ್ಳಬೇಕೆ ಎಂಬ ಮನಃಸ್ಥಿತಿಯಲ್ಲಿದ್ದು, ಬೂಸ್ಟರ್ ಡೋಸ್ ಲಸಿಕೆ ನೀಡಿಕೆಗೆ ಮೊದಲ ದಿನ ಹೆಚ್ಚಿನ ಸ್ಪಂದನೆ ಸಿಕ್ಕಿಲ್ಲ ಎಂದು ಹೇಳಲಾಗಿದೆ.

    ಕೊರೊನಾ ಮೊದಲನೇ ಮತ್ತು ೨ನೇ ಡೋಸ್ ಲಸಿಕೆಯನ್ನು ಸರ್ಕಾರ ಉಚಿತವಾಗಿ ನೀಡಿದಂತೆ ಬೂಸ್ಟರ್ ಡೋಸ್‌ನ್ನು ಉಚಿತವಾಗಿ ನೀಡಬಹುದು, ಅಲ್ಲಿಯವರೆಗೂ ಕಾಯೋಣ ದುಡ್ಡುಕೊಟ್ಟು ಲಸಿಕೆ ಹಾಕಿಸಿಕೊಳ್ಳುವುದು ಬೇಡ ಎಂಬ ಭಾವನೆಯಲ್ಲಿ ಕೆಲವರಿದ್ದಾರೆ. ಬೂಸ್ಟರ್ ಡೋಸ್ ನೀಡುವ ಲಸಿಕಾ ಕೇಂದ್ರಗಳಲ್ಲಿ ಬೂಸ್ಟರ್ ಡೋಸ್‌ ಗೆ ಜನ ಹೆಚ್ಚಿನ ಸಂಖ್ಯೆಯಲ್ಲಿ ಇಂದು ಬಂದಿಲ್ಲ.ದೇಶದಲ್ಲಿ ಸದ್ಯ ಕೊರೊನಾ ಸೋಂಕು ಪ್ರಕರಣ ಇಳಿಕೆಯಾಗಿದೆ. ಕೊರೊನಾ ಮಾಯವಾಗಿದೆ ಎಂಬಂತಹ ಪರಿಸ್ಥಿತಿ ಇದೆ. ಜತೆಗೆ ಹಲವು ರಾಜ್ಯಗಳಲ್ಲಿ ಕಡ್ಡಾಯ ಮಾಸ್ಕ್‌ಗೂ ವಿನಾಯಿತಿ ನೀಡಲಾಗಿದೆ.

    ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಕಡ್ಡಾಯ ಮಾಸ್ಕ್‌ಗೆ ವಿನಾಯಿತಿ ಇರದಿದ್ದರೂ ಬಹುತೇಕ ಜನ ಮಾಸ್ಕ್ ಧರಿಸುವುದನ್ನೇ ಬಿಟ್ಟಿದ್ದಾರೆ. ಹೀಗಾಗಿ ಬೂಸ್ಟರ್ ಡೋಸ್ ಲಸಿಕೆಗೂ ಜನ ಹೆಚ್ಚಿನ ಆಸಕ್ತಿ ತೋರಿಲ್ಲ. ಹಾಗಾಗಿ, ಖಾಸಗಿ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ಪಡೆಯುವವರ ಸಂಖ್ಯೆ ಬಹಳ ವಿರಳವೆನಿಸಿದೆ,

    ಕೋವಿಡ್‌ನ ಮೊದಲನೇ ಮತ್ತು ಎರಡನೇ ಡೋಸ್ ಲಸಿಕೆಯನ್ನು ಸರ್ಕಾರ ಉಚಿತವಾಗಿ ಎಲ್ಲರಿಗೂ ನೀಡಿತ್ತು. ಆದರೆ, ಬೂಸ್ಟರ್ ಡೋಸ್ ಲಸಿಕೆಗೆ 225 ರೂ. ದರ ನಿಗದಿ ಮಾಡಿ ಜತೆಗೆ ಸೇವಾ ಶುಲ್ಕವನ್ನು 150 ರೂ. ಪಡೆಯಲು ಸರ್ಕಾರ ಅವಕಾಶ ನೀಡಿದೆ. ಹಾಗಾಗಿ, ಬೂಸ್ಟರ್ ಡೋಸ್ ಲಸಿಕೆ ಪಡೆಯಲು  475 ರೂ. ತೆರಬೇಕಾಗುತ್ತದೆ.ಜನ ಸಾಮಾನ್ಯರು ಇಷ್ಟೊಂದು ದುಡ್ಡು ನೀಡಿ ಬೂಸ್ಟರ್ ಡೋಸ್ ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದು, ಕೆಲವೇ ಕೆಲವು ಮಂದಿ ಮಾತ್ರ ಖಾಸಗಿ ಕೇಂದ್ರಗಳಲ್ಲಿ ದುಡ್ಡು ನೀಡಿ ಬೂಸ್ಟರ್ ಡೋಸ್ ಲಸಿಕೆ ಪಡೆದಿದ್ದಾರೆ.

    2ನೇ ಡೋಸ್ ಲಸಿಕೆ ಪಡೆದು 9 ತಿಂಗಳು ಪೂರ್ಣಗೊಂಡವರು ಮಾತ್ರ ಬೂಸ್ಟರ್ ಡೋಸ್ ಪಡೆದುಕೊಳ್ಳಲು ಅರ್ಹರಾಗಿದ್ದಾರೆ. ಬೂಸ್ಟರ್ ಡೋಸ್ ಪಡೆಯಲು ಆನ್‌ ಲೈನ್‌ ನಲ್ಲಿ ಸಮಯ ನಿಗದಿ ಮಾಡಿ ಅಥವಾ ನೇರವಾಗಿ ಖಾಸಗಿ ಲಸಿಕಾ ಕೇಂದ್ರಕ್ಕೆ ಹೋಗಿ ಲಸಿಕೆ ಪಡೆಯಬಹುದಾಗಿದೆ.

    ಕೋವಿಡ್ ಮುಂಚೂಣಿ ಕಾರ್ಯಕರ್ತರು ಮತ್ತು ೬೦ ವರ್ಷ ಮೇಲ್ಪಟ್ಟವರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಬೂಸ್ಟರ್ ಡೋಸ್ ಲಸಿಕೆಯನ್ನು ಉಚಿತವಾಗಿ ನೀಡುವುದು ಮುಂದುವರೆದಿದೆ. ೬೦ ವರ್ಷ ಕೆಳಗಿರುವವರು ಮಾತ್ರ ಖಾಸಗಿ ಆಸ್ಪತ್ರೆಗಳಲ್ಲಿ ಹಣ ಪಾವತಿಸಿ ಬೂಸ್ಟರ್ ಡೋಸ್ ಲಸಿಕೆ ತೆಗೆದುಕೊಳ್ಳಬೇಕು.

    ಮಕ್ಕಳಿಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಮೊದಲನೇ ಡೋಸ್ ಹಾಗೂ ೨ನೇ ಡೋಸ್ ಲಸಿಕೆಯನ್ನು ಹಾಕಲಾಗುತ್ತಿದೆ. ರಾಜ್ಯದಲ್ಲಿ ೧೮ ವರ್ಷ ಮೇಲ್ಪಟ್ಟ ೪.೯೭ ಮಂದಿ ಮೊದಲ ಡೋಸ್ ಹಾಗೂ ೪.೭೬ ಕೋಟಿ ಮಂದಿ ೨ನೇ ಡೋಸ್ ಪಡೆದುಕೊಂಡಿದ್ದಾರೆ.೨ನೇ ಡೋಸ್ ಪಡೆದುಕೊಂಡಿರುವ ೪.೭೬ ಕೋಟಿ ಮಂದಿ ೨ನೇ ಡೋಸ್ ಪಡೆದು ೯ ತಿಂಗಳಾಗಿದ್ದರೆ, ಈಗ ಅವರು ಬೂಸ್ಟರ್ ಡೋಸ್‌ನ್ನು ಪಡೆಯಬಹುದು ಎಂದು ಆರೋಗ್ಯ ಇಲಾಖೆ ಹೇಳಿದೆ.

    ವರದಿ: ಆಂಟೋನಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026

    ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!

    August 17, 2026

    ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ

    August 17, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026

    ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟ ಪ್ರಕರಣಕ್ಕೆ…

    ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!

    August 17, 2026

    ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ

    August 17, 2026

    ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ

    August 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.