nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ

    May 30, 2026

    ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ

    May 30, 2026
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ
    • ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
    • ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
    • ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
    • ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
    • ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ
    • ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ:  ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
    • ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ  ಅಧಿಕಾರಿಗಳಿಗೆ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಬ್‍ ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿ ಅಕ್ರಮ ಕುರಿತು ಸಿಐಡಿ ತನಿಖೆ : ಗೃಹ ಸಚಿವ ಜ್ಞಾನೇಂದ್ರ
    ರಾಜ್ಯ ಸುದ್ದಿ April 11, 2022

    ಸಬ್‍ ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿ ಅಕ್ರಮ ಕುರಿತು ಸಿಐಡಿ ತನಿಖೆ : ಗೃಹ ಸಚಿವ ಜ್ಞಾನೇಂದ್ರ

    By adminApril 11, 2022No Comments2 Mins Read
    araga jnanendra

    ಪೊಲೀಸ್ ಇಲಾಖೆಯ 545 ಸಬ್‍ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಆರೋಪದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಿಎಸ್‍ ಐ ಹುದ್ದೆಗಳ ನೇಮಕಾತಿಗೆ ಈಗಾಗಲೇ ಪರೀಕ್ಷೆ ನಡೆದು ತಾತ್ಕಾಲಿಕ ನೇಮಕಾತಿ ಪಟ್ಟಿಯೂ ಪ್ರಕಟವಾಗಿದೆ.ಆದಾದ ನಂತರ ಪರೀಕ್ಷೆಯಲ್ಲಿ ಸಾಕಷ್ಟು ಅಕ್ರಮ ನಡೆದಿದೆ ಎಂದು ಸಾರ್ವಜನಿಕರಿಂದ ದೂರುಗಳು ಬಂದಿದ್ದವು. ಕಲಬುರ್ಗಿಯ ಚೌಕ್ ಪೊಲೀಸ್ ಠಾಣೆಯಲ್ಲಿ ನಿನ್ನೆ ಎಫ್‍ ಐಆರ್ ಸಹ ದಾಖಲಾಗಿದೆ.


    Provided by
    Provided by

    ಕಲಬುರ್ಗಿಯ ಜ್ಞಾನಜ್ಯೋತಿ ಪ್ರೌಢಶಾಲೆಯ ಕೇಂದ್ರದಲ್ಲಿ ಅಕ್ರಮ ನಡೆದಿರುವ ಅನುಮಾನವಿದೆ. ಈ ಸಂಬಂಧ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ. ಸಿಐಡಿಯ ಒಂದು ತಂಡವನ್ನು ಕಲಬುರ್ಗಿಗೆ ಕಳುಹಿಸಲಾಗಿದೆ ಎಂದರು.

    ವಿರೇಶ್ ಎಂಬ ಅಭ್ಯರ್ಥಿ ಬರೆದಿದ್ದ ಪರೀಕ್ಷೆಯ ಅಭ್ಯರ್ಥಿಯ ಒಎಂಆರ್ ಶೀಟ್‍ನಲ್ಲಿ 21 ಅಂಕ ಬಂದಿದ್ದರೆ, ಮೌಲ್ಯಮಾಪನ ಮಾಡಿದ ಮೂಲ ಪ್ರತಿಯಲ್ಲಿ 101 ಅಂಕಗಳು ಬಂದಿದೆ. ಈ ಸಂಬಂಧ ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ. ಪ್ರತಿಭಾವಂತರು ಕಷ್ಟಪಟ್ಟು ಓದಿದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಬಾರದು ಎಂಬ ಉದ್ದೇಶದಿಂದ ಪರೀಕ್ಷಾ ಅಕ್ರಮ ನಡೆದಿದೆ ಎಂಬ ಆರೋಪದ ಸತ್ಯಸತ್ಯಾತೆ ಹೊರಬರಬೇಕೆಂದು ಸಮಗ್ರ ತನಿಖೆಗೆ ವಹಿಸಿದೆ ಎಂದು ತಿಳಿಸಿದರು.

    ಆದ್ಯತೆ ಮೇರೆಗೆ ತ್ವರಿತ ಗತಿಯಲ್ಲಿ ಸಿಐಡಿ ತನಿಖೆ ನಡೆಸಲಿದೆ. ಈ ಅಕ್ರಮದ ಹಿಂದೆ ಯಾರಿದ್ದಾರೆ. ಪೊಲೀಸರ ಕೈವಾಡವೂ ಇದೆಯೇ ಎಂಬ ಬಗ್ಗೆಯೂ ತನಿಖೆ ನಡೆಯಲಿದೆ ಎಂದ ಅವರು, ಸುಮಾರು 52 ಸಾವಿರದಷ್ಟು ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದು, ಆಯ್ಕೆಯಾಗುವವರು 545 ಮಂದಿ ಮಾತ್ರ. ಅಕ್ರಮಕ್ಕೆ ಸಂಬಂಧಿಸಿದ ಸಾಕ್ಷಾಧಾರ ಏ.7ರಂದು ಸಿಕ್ಕಿತ್ತು. ತಕ್ಷಣವೇ ನಾವು ಸಿಐಡಿ ತನಿಖೆಗೆ ವಹಿಸಿದ್ದೇವೆ ಎಂದು ಹೇಳಿದರು.ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ಸಮರ್ಥವಾಗಿ ನಿರ್ವಹಣೆಯಾಗುತ್ತಿದೆ. ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರಿಂದ ಪ್ರಮಾಣ ಪತ್ರ ಪಡೆಯಬೇಕಾಗಿಲ್ಲ. ಪಕ್ಷ ಹಾಗೂ ಸಿಎಂ ಮೆಚ್ಚುವ ರೀತಿಯಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಸಮರ್ಥಿಸಿಕೊಂಡರು.

    ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಗೃಹ ಸಚಿವರನ್ನು ಡಮ್ಮಿ ಮಾಡಿ ನಿವೃತ್ತ ಪೊಲೀಸ್ ಅಧಿಕಾರಿ ಮೂಲಕ ಗೃಹ ಇಲಾಖೆ ನಿರ್ವಹಿಸಲಾಗುತ್ತಿತ್ತು. ವರ್ಗಾವಣೆಗೆ ಬ್ರೋಕರ್‍ಗಳಿದ್ದರು. ಈಗ ಅಂತಹದ್ದು ಏನೂ ಇಲ್ಲ. ಶಾಂತಿಗೆ ಭಂಗ ತರುವ ಸಂಘಟನೆಗಳ ಮೇಲಿದ್ದ ಪ್ರಕರಣಗಳನ್ನು ವಾಪಸ್ಸು ಪಡೆದಿದ್ದರು. ಅವರ ಕಾಲದಲ್ಲಿ ಏನಾಗಿತ್ತು ಎಂಬುದು ಜನರಿಗೂ ಗೊತ್ತಿದೆ. ಅವರು ನಮಗೆ ಪ್ರಮಾಣ ಪತ್ರ ನೀಡುವ ಅಗತ್ಯವಿಲ್ಲ ಎಂದರು.

    ವರದಿ: ಆಂಟೋನಿ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸಿದ್ದರಾಮಯ್ಯ ಸೇವೆ ಮರೆಯಲಾಗದು; ಕರ್ನಾಟಕ ಮತ್ತು ಕಾಂಗ್ರೆಸ್ ಎಂದಿಗೂ ಕೃತಜ್ಞರಾಗಿರುತ್ತದೆ: ಮಲ್ಲಿಕಾರ್ಜುನ ಖರ್ಗೆ

    May 29, 2026

    ಮಾಜಿ ಸಚಿವ ವೆಂಕಟರಮಣಪ್ಪ ನಿಧನ: ಡಾ.ಜಿ.ಪರಮೇಶ್ವರ ಅಂತಿಮ ನಮನ

    May 29, 2026

    ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ

    May 28, 2026

    Leave A Reply Cancel Reply

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ(5 ರಿಂದ 10ನೇ ತರಗತಿ) ಹಾಗೂ…

    ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ

    May 30, 2026

    ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ

    May 30, 2026

    ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು

    May 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.