ಹಿಂದೂ ಮತ್ತು ಮುಸ್ಲಿಂ ಸಾಮರಸ್ಯಕ್ಕೆ ಧಕ್ಕೆ ತರುವ ಪ್ರಯತ್ನಗಳು ನಿಲ್ಲಬೇಕು. ಯಾವುದೇ ಕಾರಣಕ್ಕೂ ಸಾಮರಸ್ಯಕ್ಕ ಧಕ್ಕೆ ತರುವ ಕಿಡಿಗೇಡಿಗಳ ಕೃತ್ಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಬೆಳಗಾವಿ ಪ್ರವಾಸಕ್ಕೆ ಹೊರಡುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ, ಮುಸ್ಲಿಂರು ಒಂದೇ ತಾಯಿಯ ಮಕ್ಕಳಂತೆ ಬಾಂಧವ್ಯ ಇರಬೇಕು ಎಂಬುದು ನಮ್ಮ ಅಪೇಕ್ಷೆ. ಯಾರೋ ಕಿಡಿಗೇಡಿಗಳು ಈ ಬಾಂಧವ್ಯಕ್ಕೆ ಧಕ್ಕೆ ತಂದರೆ ಅದನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದರು.
ಹಿಂದೂ-ಮುಸ್ಲಿಂ ಬಾಂಧವ್ಯಕ್ಕೆ ಧಕ್ಕೆ ತರುವ ಕೆಲಸವನ್ನು ನಿಲ್ಲಿಸಿ. ಅವರೂ ಸಹ ಗೌರವದಿಂದ ಬಾಳುವಂತೆ ನೋಡಿಕೊಳ್ಳೋಣ. ಅನವಶ್ಯಕವಾಗಿ ಸಾಮರಸ್ಯಕ್ಕೆ ಧಕ್ಕೆ ತರುವ ಕೆಲಸ ಬೇಡ ಎಂಬ ಕಿವಿ ಮಾತು ಎಲ್ಲರಿಗೂ ಹೇಳುತ್ತೇನೆ ಎಂದರು.
ಬೆಲೆ ಏರಿಕೆ ಬಗ್ಗೆ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆ ಬಗ್ಗೆ ಮುಖ್ಯಮಂತ್ರಿಗಳು ಹಿಂದೆ ಕಾಂಗ್ರೆಸ್ ಕಾಲದಲ್ಲಿ ಯಾವ ರೀತಿ ಬೆಲೆ ಏರಿಕೆಯಾಗಿತ್ತು ಎಂದು ಹೇಳಿದ್ದಾರೆ. ಕಾಂಗ್ರೆಸ್ ಪಕ್ಷವದವರಿಗೆ ಬೇರೆ ಕೆಲಸಗಳಿಲ್ಲ. ಪ್ರತಿಭಟನೆ ಮೂಲಕ ಗೊಂದಲ ಸೃಷ್ಟಿಸಲು ಪ್ರಯತ್ನ ನಡೆಸಿದ್ದಾರೆ. ಇದು ಬೇಡ ಎಂದು ಕಾಂಗ್ರೆಸ್ ನಾಯಕರಿಗೆ ಸಲಹೆ ಮಾಡುತ್ತೇನೆ ಎಂದರು.
ನಾಳೆಯಿಂದ ಬಿಜೆಪಿ ನಾಯಕರು ೩ ತಂಡಗಳಲ್ಲಿ ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದೂ, ತಾವೂ ಹಾಗೂ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬೆಳಗಾವಿ ಭಾಗದಲ್ಲಿ ನಾಳೆಯಿಂದ ಪ್ರವಾಸ ಕೈಗೊಳ್ಳುತ್ತಿದ್ದೇವೆ. ಅದಕ್ಕಾಗಿ ಬೆಳಗಾವಿಗೆ ಹೊರಟಿದ್ದೇನೆ ಎಂದು ಅವರು ಹೇಳಿದರು.
ವರದಿ: ಆಂಟೋನಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5


