ಬಾಗಲಕೋಟೆ: ಕೋಮು ಪ್ರಚೋದಕರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬಾಗಲಕೋಟೆ ಜಿಲ್ಲೆ ವತಿಯಿಂದ ಸಲ್ಲಿಸಲಾಯಿತು.
ಗುಜರಾತ್, ಜಾರ್ಖಂಡ್, ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಗೋವಾ ಮತ್ತು ಪಶ್ಚಿಮ ಬಂಗಾಳದಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ನಡೆದ ಹಿಂಸಾಚಾರಗಳ ಘಟನೆಯನ್ನು ರಾಷ್ಟ್ರಪತಿಯವರರ ಗಮನಕ್ಕೆ ತರಲು ನಾವು ಬಯಸುತ್ತೇವೆ ಎಂದು ಸಂಘಟನೆ ತಿಳಿಸಿದೆ.
ಕೆಲವು ವರ್ಗಗಳು ಧಾರ್ಮಿಕ ಸಮಾರಂಭಗಳನ್ನು ಹಿಂಸಾತ್ಮಕವಾಗಿ ಪರಿವರ್ತಿಸಲು ಸಂಘಟಿತ ಪ್ರಯತ್ನಗಳನ್ನು ನಡೆಸಿದಂತೆ ತೋಚುತ್ತಿದೆ ಎಂದು ಸಂಘಟನೆ ತಿಳಿಸಿದೆ.
ದೇಶದಲ್ಲಿ ನೂರಾರು ವಿವಿಧ ಬಗೆಯ ಧಾರ್ಮಿಕ ಕಾರ್ಯಕ್ರಮಗಳು ಮತ್ತು ಹಬ್ಬಗಳು ನಡೆಯುತ್ತಿದ್ದು, ಎಂದಿನಂತೆ ಅವು ಶಾಂತಿಯುತವಾಗಿ ಮುಕ್ತಾಯಗೊಳ್ಳುತ್ತವೆ. ಸಾಂಪ್ರದಾಯಿಕವಾಗಿ ಇಂತಹ ಘಟನೆಗಳನ್ನು ಸಮುದಾಯಗಳ ನಡುವೆ ಸಾಮರಸ್ಯ ಮತ್ತು ಸೌಹಾರ್ದತೆಯನ್ನು ಬಲಪಡಿಸುವ ಅವಕಾಶಗಳಾಗಬೇಕು ಎಂದು ಮನವಿ ಮಾಡಿದ್ದಾರೆ.
ವರದಿ: ಬಂದೇನವಾಜ ನದಾಫ್, ಬಾಗಲಕೋಟ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5


