ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಐಮಂಗಲ ಹೋಬಳಿಯ ವದ್ದಿಕೆರೆ ಗ್ರಾಮದ ಕಾಲಭೈರವೇಶ್ವರ ಯಾನೆ ಸಿದ್ದೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ ಸೋಮವಾರ ಭಕ್ತರ ಸಾಗರದ ನಡುವೆ ಬಹಳ ಅದ್ಧೂರಿಯಾಗಿ ನಡೆಯಿತು.
ಈ ಜಾತ್ರಾ ಮಹೋತ್ಸವಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಸೋಮಶೇಖರ್ ಬಿ. ಅವರು ಬೇಟಿ ನೀಡಿ ದೇವರ ದರ್ಶನವನ್ನು ಪಡೆದುಕೊಂಡು ದೇವರ ಕೃಪೆಗೆ ಪಾತ್ರರಾದರು.
ಇದೇ ಸಂದರ್ಭದಲ್ಲಿ ದೇವಾಲಯದ ಅರ್ಚಕರು ದೇವಾಲಯದ ಆಡಳಿತ ಮಂಡಳಿಯ ಅಧಿಕಾರಿಗಳು ಸಹ ಸೋಮಶೇಖರ್ ಬಿ. ಅವರಿಗೆ ಸನ್ಮಾನಿಸಿ ಗೌರವಿಸಿದರು.
ಇದೇ ಸಂದರ್ಭದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಸೋಮಶೇಖರ್ ಬಿ., ಈ ಶಕ್ತಿಯುಳ್ಳ ಕಾಲಭೈರವೇಶ್ವರ ಸ್ವಾಮಿ ದರ್ಶನ ಪಡೆದುಕೊಂಡಿದ್ದು ನಿಜಕ್ಕೂ ಸಹ ನನ್ನ ಒಂದು ಸೌಭಾಗ್ಯ ಎಂದು ತಿಳಿಸಿದರು.
ಇದೇ ವೇಳೆ ಚಿತ್ರದುರ್ಗ ಜಿಲ್ಲೆಯ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಸಿ.ಬಿ.ಪಾಪಣ್ಣ ನವರು ಮಾತನಾಡಿ, ಈ ವದ್ದಿಕೆರೆ ಕಾಲಭೈರವೇಶ್ವರ ಸ್ವಾಮಿಯ ಜಾತ್ರೆಯು ಚಿತ್ರದುರ್ಗ ಜಿಲ್ಲೆಯಲ್ಲೇ ಬಹಳ ವೈಶಿಷ್ಟ್ಯವಾದ ಜಾತ್ರೆಯಾಗಿದ್ದು, ಈ ಜಾತ್ರೆಗೆ ನಾನಾ ರಾಜ್ಯಗಳಿಂದ ಲಕ್ಷಾಂತರ ಜನ ಸಮೂಹವೇ ಹರಿದು ಬರುತ್ತಿದ್ದು,ಕೇರಳ, ಹೈದರಾಬಾದ್ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಿಂದಲೂ ಸಹ ಜನಸಾಗರವಾಗಿ ಈ ಕಾಲಭೈರವೇಶ್ವರ ಸ್ವಾಮಿಯ ಜಾತ್ರೆಗೆ ಆಗಮಿಸುತ್ತಾರೆ ಎಂಬುದಾಗಿ ತಿಳಿಸಿದರು.
ಇದೇ ವೇಳೆ ಕಳೆದ ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸೋಮಶೇಖರ್ ಬಿ. ಅವರು ಸಹ ಇವತ್ತಿನ ದಿನ ಈ ಕಾಲಭೈರವೇಶ್ವರ ಸ್ವಾಮಿಯ ರಥೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿರುವುದು ನಮ್ಮೆಲ್ಲರ ಸಂತೋಷದ ವಿಷಯವಾಗಿದೆ ಎಂಬುದಾಗಿ ಇದೇ ವೇಳೆ ತಿಳಿಸಿದರು.
ಜಾತ್ರೆಗೆ ಆಗಮಿಸಿದ ಎಲ್ಲಾ ಭಕ್ತಾದಿಗಳಿಗೂ ಸಹ ಶ್ರೀ ಕಾಲಭೈರವೇಶ್ವರ ಸ್ವಾಮಿಯು ಹೆಚ್ಚಿನ ರೀತಿಯಲ್ಲಿ ಆರೋಗ್ಯ ಆಯಸ್ಸು ಕೊಟ್ಟು ಕಾಪಾಡಲಿ ಎಂಬುದಾಗಿ ಚಿತ್ರದುರ್ಗ ಜಿಲ್ಲೆಯ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಸಿ ಬಿ ಪಾಪಣ್ಣ ನವರು ಇದೇ ವೇಳೆ ತಿಳಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಸೋಮಶೇಖರ್ ಬಿ., ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಸಿ.ಬಿ.ಪಾಪಣ್ಣ, ಕಾಂಗ್ರೆಸ್ ಪಕ್ಷದ ಮುಖಂಡರಾದ ಎಸ್.ಆರ್. ರಾಮಕೃಷ್ಣಪ್ಪ, ಬಿ ಸಿ ಜಯಣ್ಣ, ಈಶ್ವರಪ್ಪ, ಶಶಿಕುಮಾರ್ ದಿಂಡಾವರ , ನರಸಿಂಹಮೂರ್ತಿ ಸಾಮಾಜಿಕ ಜಾಲತಾಣ ಅಧ್ಯಕ್ಷರಾದ ನರಸಿಂಹಮೂರ್ತಿ ಜವನಗೊಂಡನಹಳ್ಳಿ, ನಂಜಯ್ಯನಕೊಟ್ಟಿಗೆ ಅವಿನಾಶ್, ತಹಶೀಲ್ದಾರರಾದ ಶಿವಕುಮಾರ್, ಹಾಗೂ ಕಂದಾಯ ಇಲಾಖೆಯ ಐಮಂಗಲ ಹೋಬಳಿಯ ರಾಜಸ್ವ ನಿರೀಕ್ಷಕರಾದ ಗೋಪಿನಾಯ್ಕ, ಧರ್ಮಪುರ ಹೋಬಳಿಯ ರಾಜಸ್ವ ನಿರೀಕ್ಷಕರಾದ ವರದರಾಜು, ಜವನಗೊಂಡನಹಳ್ಳಿ ಹೋಬಳಿಯ ರಾಜಸ್ವ ನಿರೀಕ್ಷಕರಾದ ಶಿವಮೂರ್ತಿ, ಹಾಗೂ ಗ್ರಾಮ ಲೆಕ್ಕಾಧಿಕಾರಿಯಾದ ಮಾಯವರ್ಮ , ಸತೀಶ್ ಎಸ್ ಸಿ, ಶರಣೇಶ್, ಬೀರೇನಹಳ್ಳಿ ಶ್ರೀನಿವಾಸ್, ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರುಗಳು ಇತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕರಾದ ಡಿ. ಸುಧಾಕರ್ ಅವರು ಸಿದ್ದೇಶ್ವರ ಸ್ವಾಮಿಯ ಜಾತ್ರೆಯ ರಥೋತ್ಸವಕ್ಕೆ ಭಾಗಿಯಾಗಿ ದೇವರ ದರ್ಶನ ಪಡೆದುಕೊಂಡರು. ಈ ವೇಳೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಜೊತೆಗಿದ್ದರು.
ವರದಿ: ಮುರುಳಿಧರನ್ ಆರ್ ಹಿರಿಯೂರು. ( ಚಿತ್ರದುರ್ಗ – ದಾವಣಗೆರೆ ).
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5


