ತುಮಕೂರು: ಜಿಲ್ಲೆಯ ಸಿರಾ ತಾಲ್ಲೂಕಿನ ಮಾಜಿ ಶಾಸಕರು ಹಾಗೂ ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ ಸಿರಾ ತಾಲ್ಲೂಕಿನ ಗೌಡಗೆರೆ ಹೋಬಳಿಯ ಜೆ.ಹೊಸಹಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಜುಂಜಪ್ಪ ಸ್ವಾಮಿ, ಚಿತ್ರಲಿಂಗೇಶ್ವರ, ಗೊಡ್ಢಗಾಳಮ್ಮದೇವಿ, ಕರಿಯಮ್ಮ ದೇವಿ ಮತ್ತು ಭೂತಪ್ಪ ಸ್ವಾಮಿ ಜಾತ್ರಾ ಮಹೋತ್ಸವದ ಕಾರ್ಯಕ್ರಮಕ್ಕೆ ಭೇಟಿ ನೀಡಿ ದೇವರ ಕೃಪೆಗೆ ಪಾತ್ರರಾದರು.
ಇದೇ ವೇಳೆ ಮುಂಬರುವ 2022ರ ಸಾರ್ವತ್ರಿಕ ಚುನಾವಣೆಯ ಕುರಿತು ಪಕ್ಷ ಸಂಘಟನೆ ಮಾಡುವುದರ ಬಗ್ಗೆ ಕುರಿತು ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಎಂ.ಎನ್.ರಾಜು, ಗೋವಿಂದರಾಜು, ಯುವ ಮುಖಂಡ ಸಂದೀಪ್ ಜಯಚಂದ್ರ,ನಗರಸಭಾ ಸದಸ್ಯ ಶಿವಶಂಕರ್, ಪೆದ್ದರಾಜು, ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾರೋಗೆರೆ ಮಹೇಶ್, ಗೌಡಗೆರೆ ಗ್ರಾ.ಪಂ.ಉಪಾಧ್ಯಕ್ಷ ವಿವೇಕ್, ಗೌಡಗೆರೆ ವಸಂತ್, ಹನುಮಂತೆಗೌಡ,ಎಚ್. ಎಲ್.ರಂಗನಾಥ್,ವಾಜರಹಳ್ಳಿ ರಮೇಶ್,ಗ್ರಾ.ಪಂ.ಸದಸ್ಯ ಸಂಕಾಪುರ ಚಿದಾನಂದ್,ಪರಶುರಾಮನಾಯ್ಕ, ಸೇರಿದಂತೆ ಅನೇಕ ಗಣ್ಯರು ಮತ್ತು ಮುಖಂಡರು ಉಪಸ್ಥಿತರಿದ್ದರು.
ವರದಿ: ಮುರುಳಿಧರನ್ ಆರ್ ಹಿರಿಯೂರು. ( ಚಿತ್ರದುರ್ಗ – ದಾವಣಗೆರೆ ).
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5