ಚಿತ್ರದುರ್ಗ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮಾಜಿ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರನ್ನು ತಕ್ಷಣವೇ ಬಂಧಿಸುವಂತೆ ಒತ್ತಾಯಿಸಿ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಪಂಚಾಯತಿ ಸದಸ್ಯರಾದ ಪಾಪಣ್ಣ, ನಮ್ಮ ದೇಶದಲ್ಲಿ ಎಂದಿಗೂ ಸಹ ಕಂಡು ಅರಿಯದಂತಹ ಭ್ರಷ್ಟಾಚಾರದ ವಾತಾವರಣ ನಿರ್ಮಾಣವಾಗುತ್ತಿದೆ. ಬಡವರು ಕೊಂಡುಕೊಳ್ಳುವ ಅಗತ್ಯ ವಸ್ತುಗಳ ಬೆಲೆ ಏರಿಕೆಗಳು ಸಹ ಏರಿಕೆಯಾಗುತ್ತಲೇ ಇದೆ . ಪೆಟ್ರೋಲ್, ಡಿಸೇಲ್ , ಇಂಧನಗಳ ಬೆಲೆಯು ಸಹ ದಿನಕ್ಕಿಂತ ದಿನ ಗಗನಕ್ಕೇರುತ್ತಲೇ ಇದೆ. ಇದು ಇಂದಿನ ಬಿ ಜೆ ಪಿ ಸರ್ಕಾರದ ದುರಾಡಳಿತದ ವ್ಯವಸ್ಥೆಯಾಗಿದೆ ಎಂದರು.
ಹಿರಿಯೂರು ತಾಲ್ಲೂಕಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿರಮೇಶ್ ಮಾತನಾಡಿ, ಭ್ರಷ್ಟಾಚಾರದ ಆರೋಪ ಹೊತ್ತಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಾದಂತಹ ಕೆ.ಎಸ್. ಈಶ್ವರಪ್ಪ ನವರನ್ನು ಈ ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಆಡಳಿತದಲ್ಲಿ ಇದ್ದು, ಇಂತಹ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಮುಖಂಡ, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಗೆ ಮಾಡಿಕೊಳ್ಳುವಂತಹ ದಯನೀಯ ಸ್ಥಿತಿ ಇಂದಿನ ಬಿಜೆಪಿ ಸರ್ಕಾರದಲ್ಲಿದೆ. ಇದು ಬಿಜೆಪಿ ಪಕ್ಷ ಮತ್ತು ಸರ್ಕಾರಕ್ಕೆ ಗೌರವ ತರುವುದಿಲ್ಲ ಎಂದರು.
ಇದೇ ವೇಳೆ ನಮ್ಮ ತುಮಕೂರು ಮಾಧ್ಯಮದ ಮೂಲಕ ಮಾತನಾಡಿದ ಕೆ ಪಿ ಸಿ ಸಿ ಜಿಲ್ಲಾ ಉಸ್ತುವರಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಸಂಧ್ಯಾ, ಇಂದಿನ ದಿನಗಳಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ದಿನಬಳಕೆ ವಸ್ತುಗಳ ಬೆಲೆಗಳು ಗಗನಕ್ಕೇರಿದೆ. ಆದರೆ ಬಿಜೆಪಿ ಸರ್ಕಾರ ಇದಕ್ಕೆ ತಲೆಕೆಡಿಸಿಕೊಳ್ಳುತ್ತಿಲ್ಲ. ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಈಶ್ವರಪ್ಪ ವಿರುದ್ಧ ಪ್ರಧಾನಿಗೆ ಪತ್ರ ಬರೆದರೂ ಯಾವುದೇ ಪ್ರಯೋಜನವಾಗಿಲ್ಲ. ಸಂತೋಷ್ ಪಾಟೀಲ್ ಸಾವಿಗೆ ಪ್ರೇರಣೆ ನೀಡಿರುವ ಈಶ್ವರಪ್ಪ ವಿರುದ್ಧ ಯಾವುದೇ ಕ್ರಮವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹಿರಿಯೂರು ತಾಲ್ಲೂಕಿನ ಅಸಂಘಟಿತ ಕಾರ್ಮಿಕ ವಿಭಾಗದ ಅಧ್ಯಕ್ಷರಾದ ಜಯಣ್ಣ ಮಾತನಾಡಿ, 40% ಕಮಿಷನ್ ಪಡೆದು ಒಬ್ಬ ಕಾರ್ಯಕರ್ತನ ಸಾವಿಗೆ ಕಾರಣವಾದ ಈಶ್ವರಪ್ಪನನ್ನು ಈ ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.
ಕಾಂಗ್ರೆಸ್ ಪಕ್ಷದ ವೈಸ್ ಪ್ರೆಸಿಡೆಂಟ್ ಆದ ಜಿ.ಎಸ್. ಕುಮಾರ್ ಗೌಡ ಮಾತನಾಡಿ, 40% ಕಮಿಷನ್ ವಿಚಾರಕ್ಕೆ ಸಂಬಂಧಿಸಿದಂತೆ ಈಶ್ವರಪ್ಪನವರನ್ನು ತಕ್ಷಣವೇ ಬಂಧಿಸುವ ಮೂಲಕ ರಾಜ್ಯ ಸರ್ಕಾರ ಕ್ರಮಕೈಗೊಳ್ಳಬೇಕು. ಈ ಮೂಲಕ ಸಂತೋಷ್ ಪಾಟೀಲ್ ಅವರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಒತ್ತಾಯಿಸಿದರು.
ಇದೇ ಸಂದರ್ಭದಲ್ಲಿ ಲಂಚಾವತಾರದ ವಿರುದ್ಧ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಕೂಡ ನಡೆಸಲಾಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಟಿ.ಬಿ.ಜಯಚಂದ್ರ , ಹೆಚ್ , ಆಂಜನೇಯ, ಜಮ್ಮೀರ್ ಅಹಮದ್ , ಸೋಮಶೇಖರ್ ಬಿ, ಡಿ ಸುಧಾಕರ್ , ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಸಿ ಬಿ ಪಾಪಣ್ಣ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ಜೆ ರಮೇಶ್, ನಂಜಯ್ಯನಕೊಟ್ಟಿಗೆ ಅವಿನಾಶ್, ಹಿರಿಯೂರು ತಾಲ್ಲೂಕಿನ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಸ್.ಗೌರಿ ಮುರುಳಿಧರನ್ ಹಿರಿಯೂರು, ಆದಿವಾಲ ಗ್ತಾಮದ ಚಮನ್ ಷರೀಫ್ , ಕಾರ್ಮಿಕ ವಿಭಾಗದ ಶಿವಕುಮಾರ್ ವಿ, ರಾಘವೇಂದ್ರ, ಹಾಗೂ ಕೆ ಪಿ ಸಿ ಸಿ ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಧ್ಯಾ, ಅಸಂಘಟಿತ ಕಾರ್ಮಿಕ ವಿಭಾಗದ ಅಧ್ಯಕ್ಷರಾದ ಜಯಣ್ಣ , ವಕೀಲರು ಹಾಗೂ ಕಾಂಗ್ರೆಸ್ ಪಕ್ಷದ ವೈಸ್ ಪ್ರೆಸಿಡೆಂಟ್ ಜಿ ಎಸ್ ಕುಮಾರ್ ಗೌಡ ಹಾಗೂ ಎಲ್ಲಾ ಕಾಂಗ್ರೆಸ್ ಪಕ್ಷದ ಗ್ರಾಮ ಪಂಚಾಯತಿ ಸದಸ್ಯರುಗಳು, ಅಧ್ಯಕ್ಷರು, ಉಪಾಧ್ಯಕ್ಷರು, ಹಾಗೂ ಎಲ್ಲಾ ತಾಲ್ಲೂಕಿನ ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು ಹಾಗೂ ಕಾಂಗ್ರೆಸ್ ಪಕ್ಷದ ಎಲ್ಲಾ ಹಿರಿಯ ನಾಯಕರುಗಳು , ಮುಖಂಡರುಗಳು , ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಕಾಂಗ್ರೆಸ್ ಪಕ್ಷದ ಅಭಿಮಾನಿಗಳು ಇತರರು ಉಪಸ್ಥಿತರಿದ್ದರು.
ವರದಿ : ಮುರುಳಿಧರನ್ ಆರ್ ಹಿರಿಯೂರು. ( ಚಿತ್ರದುರ್ಗ – ದಾವಣಗೆರೆ).
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


