ನವದೆಹಲಿ: ಭಯೋತ್ಪಾದನೆ ಮಾನವ ಹಕ್ಕುಗಳ ಉಲ್ಲಂಘನೆಯ ಅತಿದೊಡ್ಡ ರೂಪವಾಗಿದ್ದು ಮಾನವ ಹಕ್ಕುಗಳನ್ನು ರಕ್ಷಿಸಲು ಭಯೋತ್ಪಾದನೆಯನ್ನು ಕಿತ್ತುಹಾಕಬೇಕು ಎಂದು ಅಮಿತ್ ಶಾ ಹೇಳಿದ್ದಾರೆ.
ರಾಷ್ಟ್ರೀಯ ತನಿಖಾ ಸಂಸ್ಥೆಯ 13ನೇ ಸಂಸ್ಥಾಪನಾ ದಿನವನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ನಿಧಿಯ ವಿರುದ್ಧ ದಾಖಲಾದ ಪ್ರಕರಣಗಳು ಕೇಂದ್ರಾಡಳಿತ ಪ್ರದೇಶದಲ್ಲಿ ಭಯೋತ್ಪಾದನೆಯನ್ನು ನಿಗ್ರಹಿಸುವಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಹಾಯ ಮಾಡಿದೆ ಎಂದರು.
ನರೇಂದ್ರ ಮೋದಿ ಸರ್ಕಾರವು ಭಯೋತ್ಪಾದನೆಯ ಬಗ್ಗೆ ಶೂನ್ಯ ಸಹಿಷ್ಣು ನೀತಿಯನ್ನು ಅಳವಡಿಸಿಕೊಂಡಿದೆ. ಭಾರತದಿಂದ ಭಯೋತ್ಪಾದನೆಯನ್ನು ಬೇರುಸಹಿತ ಕಿತ್ತೊಗೆಯಲು ಕೆಲಸ ಮಾಡುತ್ತಿದೆ. ಎನ್ ಐಎ ದಾಖಲಿಸಿರುವ ಜಮ್ಮು ಮತ್ತು ಕಾಶ್ಮೀರದ ಭಯೋತ್ಪಾದಕ ನಿಧಿ ಪ್ರಕರಣಗಳ ಕಾರಣ, ಅಲ್ಲಿ ಭಯೋತ್ಪಾದಕ ಕೃತ್ಯಗಳಿಗೆ ಹಣವನ್ನು ಒದಗಿಸುವುದು ಈಗ ತುಂಬಾ ಕಷ್ಟಕರವಾಗಿದೆ ಎಂದರು.
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಸಂಘಟನೆಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದಕ್ಕಾಗಿ ಮತ್ತು ಅಲ್ಲಿ ಭಯೋತ್ಪಾದನೆಗೆ ಸಂಬಂಧಪಟ್ಟ ವಸ್ತುಗಳು ಮತ್ತು ಹಣಗಳನ್ನು ಒದಗಿಸುವ ಕೊಂಡಿಗಳನ್ನು ನಿಗ್ರಹಿಸಿದ ರಾಷ್ಟ್ರೀಯ ತನಿಖಾ ಸಂಸ್ಥೆಗಳಿಗೆ ಗೃಹ ಸಚಿವರು ಅಭಿನಂದನೆ ಸಲ್ಲಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy