ಬೆಂಗಳೂರು, ರಾಜ್ಯದಲ್ಲಿ ಅಜಾನ್ ವಿರುದ್ಧ ತಿರುಗಿ ಬಿದ್ದಿರುವ ಹಿಂದೂಪರ ಸಂಘಟನೆಗಳು ಮೇ 9ರಂದು ದೇವಾಲಯಗಳು ಹಾಗೂ ಮಠಗಳಲ್ಲಿ ಮೈಕ್ ಹಾಕಿ ಭಜನೆ, ಶ್ಲೋಕ ಹೇಳುವಂತೆ ಕರೆ ನೀಡಿವೆ.
ಮೇ 9ರಂದು ಬೆಳಗ್ಗೆ 5 ಗಂಟೆಗೆ ಮೈಕ್ ಮೂಲಕ ಭಜನೆ, ಹನುಮಾನ್ ಚಾಲೀಸಾ ಪಠಿಸುವಂತೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.
ಪ್ರಾರ್ಥನಾ ಮಂದಿರಗಳಲ್ಲಿ ಹಾಕಿರುವ ಮೈಕ್ ತೆಗೆಸುವಂತೆ ಸುಪ್ರೀಂಕೋರ್ಟ್ ಆದೇಶವಿದ್ದರೂ ಸರ್ಕಾರ ಕಣ್ಮುಚ್ಚಿ ಕುಳಿತಿದೆ. ಹೀಗಾಗಿ ನಮ್ಮ ಈ ಹೋರಾಟ ಕೈಬಿಡಬೇಕಾದರೆ ಆಡಳಿತ ನಡೆಸುತ್ತಿರುವವರು ಪ್ರಾರ್ಥನಾ ಮಂದಿರಗಳಲ್ಲಿ ಹಾಕಿರುವ ಮೈಕ್‍ಗಳನ್ನು ತೆಗೆಸಬೇಕು ಎಂದು ಅವರು ಆಗ್ರಹಿಸಿದರು.
ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ದೇವಾಲಯಗಳಲ್ಲಿ ಮೈಕ್‍ನಲ್ಲಿ ಭಜನೆ ಮಾಡುವ ಕಾರ್ಯಕ್ರಮ ನಡೆಸಲಾಗುವುದು.ನಮ್ಮ ನಿರ್ಧಾರವನ್ನು ತಡೆಯಲು ಸರ್ಕಾರ ಪ್ರಯತ್ನಿಸಿದರೆ ತಕ್ಕ ಪಾಠ ಕಲಿಸಲಾಗುವುದು ಎಂದು ಎಚ್ಚರಿಕೆಯನ್ನು ಪ್ರಮೋದ್ ಮುತಾಲಿಕ್ ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


