ಗುಬ್ಬಿ: ಇಬ್ಬರು ಯುವಕರನ್ನು ದಾರುಣವಾಗಿ ಹತ್ಯೆ ಮಾಡಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿ ಪೆದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ.
ತಡ ರಾತ್ರಿ ಕೃತ್ಯ ನಡೆಸಲಾಗಿದ್ದು, ಪೆದ್ದನಹಳ್ಳಿ ದಲಿತ ಕಾಲೋನಿ ನಿವಾಸಿ ಗಿರೀಶ್ ಹಾಗೂ ಮತ್ತೋರ್ವ ಯುವಕ ಬರ್ಬರವಾಗಿ ಹತ್ಯೆಯಾದವರು ಎಂದು ತಿಳಿದು ಬಂದಿದೆ.
ಪೆದ್ದನ ಹಳ್ಳಿಯ ನಿರ್ಜನ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದೆ. ಒಬ್ಬನ ಮೃತದೇಹ ನೀರಿನಲ್ಲಿದ್ದು, ಮತ್ತೋರ್ವನ ಮೃತದೇಹ ನೀರಿನಿಂದ ಮೇಲೆ ಪತ್ತೆಯಾಗಿದೆ.
ಹತ್ಯೆ ಮಾಡಿದವರು ಹಾಗೂ ಹತ್ಯೆಗೆ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಪೊಲೀಸ್ ತನಿಖೆಯಿಂದ ಇನ್ನಷ್ಟು ಮಾಹಿತಿಗಳು ತಿಳಿದು ಬರಬೇಕಿದೆ.
ವರದಿ: ಡಿ.ಮಂಜುನಾಥ್ , ಗುಬ್ಬಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5