ನವದೆಹಲಿ: ಓಲಾದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ ಬೆಂಕಿ ಹೊತ್ತಿಕೊಂಡ ಘಟನೆ ದೇಶದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದು,ಓಲಾ ಕಂಪನಿಯು ತನ್ನ 1,441 ವಾಹನಗಳನ್ನು ಭಾನುವಾರ ಹಿಂಪಡೆದಿದೆ.
‘ಮುನ್ನೆಚ್ಚರಿಕಾ ಕ್ರಮವಾಗಿ ನಾವು ನಿರ್ದಿಷ್ಟ ಬ್ಯಾಚ್‌ನ ವಾಹನಗಳನ್ನು ಪರಿಶೀಲಿಸುತ್ತೇವೆ. ಆದ್ದರಿಂದ 1,441 ವಾಹನಗಳನ್ನು ಸ್ವಯಂಪ್ರೇರಿತವಾಗಿ ಹಿಂಪಡೆಯುತ್ತಿದ್ದೇವೆ’ ಎಂದು ಓಲಾ ಕಂಪೆನಿ ತಿಳಿಸಿದೆ.
ಹಿಂಪಡೆದ ಸ್ಕೂಟರ್‌ಗಳನ್ನು ಎಂಜಿನಿಯರ್‌ಗಳು ಪರಿಶೀಲಿಸುತ್ತಾರೆ. ಬ್ಯಾಟರಿ ವ್ಯವಸ್ಥೆಗಳು, ಥರ್ಮಲ್ ಸಿಸ್ಟಮ್‌ಗಳು ಮತ್ತು ಸುರಕ್ಷತಾ ವ್ಯವಸ್ಥೆಗಳಲ್ಲಿನ ಸಮಸ್ಯೆಯನ್ನು ಪತ್ತೆ ಮಾಡಲಿದ್ದಾರೆ’ ಎಂದು ಸಂಸ್ಥೆ ತಿಳಿಸಿದೆ.
ಬ್ಯಾಟರಿ ವ್ಯವಸ್ಥೆಗಳು ಯುರೋಪಿನ ‘ಇಸಿಇ-136’ ಮಾನದಂಡಗಳಿಗೆ ಅನುಗುಣವಾಗಿವೆ. ಜತೆಗೆ, ಭಾರತದ ಇತ್ತೀಚಿನ ಪ್ರಸ್ತಾವಿತ ‘ಎಐಎಸ್-156’ಗೆ ಅನುಗುಣವಾಗಿ ಪರೀಕ್ಷಿಸಲ್ಪಟ್ಟಿದೆ’ ಎಂದು ಓಲಾ ಹೇಳಿದೆ.
ಅಗ್ನಿ ಅವಘಡಗಳನ್ನು ಪರಿಶೀಲಿಸಲು ಸರ್ಕಾರ ಸಮಿತಿಯನ್ನು ರಚಿಸಿದೆ. ಕಂಪನಿಗಳು ಈ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿದರೆ ದಂಡ ವಿಧಿಸುವುದಾಗಿಯೂ ಸರ್ಕಾರ ಎಚ್ಚರಿಕೆಯನ್ನು ನೀಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy