ಗುಬ್ಬಿ: ಗುಬ್ಬಿ ತಾಲೂಕಿನಲ್ಲಿ ಜಾತಿ ದೌರ್ಜನ್ಯಕ್ಕೊಳಗಾಗಿ ಇಬ್ಬರು ಯುವಕರು ಹತ್ಯೆಗೀಡಾದ ಘಟನೆಗೆ ಸಂಬಂಧಿಸಿದಂತೆ ಬಹುಜನ ಸಮಾಜ ಪಕ್ಷದ ತುಮಕೂರು ಜಿಲ್ಲಾ ಸಮಿತಿಯ ನಿಯೋಗ ಶನಿವಾರ ಗುಬ್ಬಿ ತಾಲೂಕಿಗೆ ಭೇಟಿ ನೀಡಿತು.
ನಿಯೋಗದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಎಂ. ಗುರುಮೂರ್ತಿ, ರಾಜ್ಯ ಕಾರ್ಯದರ್ಶಿ ಸೂಲಯ್ಯ , ಜಿಲ್ಲಾಧ್ಯಕ್ಷ ರಾಜಸಿಂಹ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಂಗಧಾಮಯ ಇದ್ದರು.
ತುಮಕೂರು ಜಿಲ್ಲೆ ಗುಬ್ಬಿ ತಾಲೂಕು ಪೆದ್ದನಹಳ್ಳಿ ಗ್ರಾಮದಲ್ಲಿ ಜಾತಿ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ.ಗಿರೀಶ್ ಅವರ ಅಂತ್ಯ ಸಂಸ್ಕಾರಕ್ಕೆ ಅವರ ತೋಟಕ್ಕೆ ಮತ್ತು ಮನೆಗೆ ಭೇಟಿ ಕೊಟ್ಟು ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಅವರಿಗೆ ಧೈರ್ಯ ತುಂಬಲಾಯಿತು.
ಘಟನೆ ಬಗ್ಗೆ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜೊತೆ ಮಾತನಾಡಿ, ಯಾವುದೇ ಒತ್ತಡಕ್ಕೆ ಮಣಿಯದೆ ಆರೋಪಿಗಳ ದಸ್ತಗಿರಿಗೆ ಒತ್ತಾಯಿಸಲಾಯಿತು. ಸಂತ್ರಸ್ತರಿಗೆ ಪೊಲೀಸ್ ರಕ್ಷಣೆ ಒದಗಿಸಲು ಸೂಚಿಸಲಾಯಿತು.
ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮತ್ತು ಗುಬ್ಬಿ ತಾಲೂಕು ಸಮಾಜ ಕಲ್ಯಾಣ ಅಧಕಾರಿಗಳ ಜೊತೆ ಮಾತನಾಡಿ ಮುಂದೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ವಿಳಂಬ ಮಾಡದೇ ಅಗತ್ಯ ಕ್ರಮ ಕೈಗೊಳ್ಳಬೇಕು ಸಂತ್ರಸ್ತ ಕುಟುಂಬಕ್ಕೆ ಪರಿಹಾರ ಹಾಗೂ ಅಗತ್ಯ ಸೇವೆ ಒದಗಿಸಬೇಕು ಎಂದು ಸೂಚಿಸಲಾಯಿತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5