ಬೆಂಗಳೂರು: ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿ ಐಪಿಎಸ್ ಹುದ್ದೆಗೇರಿದ ಆರೋಪಕ್ಕೆ ಸಂಬಂಧಿಸಿದಂತೆ ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯಗೆ ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯ ನೋಟೀಸ್ ಜಾರಿ ಮಾಡಿದೆ.
ಕುರುಬ ಜಾತಿಗೆ ಸೇರಿದ ಕೆಂಪಯ್ಯ ಕಾಡು ಕುರುಬ ಜಾತಿಯೆಂದು ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿ ಕೆಲಸ ಪಡೆದಿದ್ದರು ಎಂಬ ಆರೋಪ ಕೇಳಿ ಬಂದಿತ್ತು.
ಪರಿಶಿಷ್ಟ ಪಂಗಡ ಕೋಟಾದಡಿ ಐಪಿಎಸ್ ಹುದ್ದೆಗೆ ಏರಿರುವ ಆರೋಪವಿತ್ತು. ನಂತರ ಕೆಂಪಯ್ಯ ಕೇಸ್ ವಿಚಾರಣೆಗೆ ಬಂದಿರಲಿಲ್ಲ. ಇದೀಗ ಫೈಲ್ ಪತ್ತೆಯಾದ ಬಳಿಕ ಮತ್ತೆ ವಿಚಾರಣೆ ಆರಂಭಿಸಲು ಡಿಸಿಆರ್ ಬಿ ಮುಂದಾಗಿದೆ ಎನ್ನಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5


